Sun,May19,2024
ಕನ್ನಡ / English

ಜೂನ್ 27 ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ | JANATA NEWS

24 Jun 2023
1221

ಬೆಂಗಳೂರು : ಜೂನ್ 27ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದ್ದಾರೆ.

ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಬಂದು ಚಾಮುಂಡೇಶ್ವರಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, 'ರಾಜ್ಯದಲ್ಲಿ ಒಳ್ಳೆ ಮಳೆಯಾಗಲಿ ಎಂದು ಈಗ ದೇವಿಯನ್ನ ಬೇಡಿದ್ದೇನೆ. ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿ ಅಂತ ಚಾಮುಂಡಿ ತಾಯಿಯಲ್ಲಿ ಹರಕೆ ಕಟ್ಟಿದ್ದೆ. ದೇವಿ ಮುಂದೆ ಸೆರೆಗೊಡ್ಡಿ ಬೇಡಿ ಕೊಂಡಿದ್ದೆ. ಇದೀಗ ಅಧಿಕಾರಕ್ಕೆ ಬಂದಿದ್ದೇವೆ.

ಹೀಗಾಗಿ ಬೆಟ್ಟಕ್ಕೆ ಬಂದು ಹರಕೆ ತೀರಿಸಿದ್ದೇನೆ ಎಂದು ಹೇಳಿದರು. ಗೃಹಲಕ್ಷ್ಮೀ ಯೋಜನೆ ಜಾರಿ ತಡವಾಗುತ್ತಿಲ್ಲ. ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಆಯಪ್​ ತಯಾರಾಗಿದೆ. ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸುತ್ತೇವೆ.

ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಪ್ರತ್ಯೇಕ ಆಯಪ್ ರೂಪಿಸಿದ್ದೇವೆ. ಆಯಪ್ ಮೂಲಕ ಅರ್ಜಿ ಸಲ್ಲಿಸಲು ಎಲ್ಲಾ ತಯಾರಿ ಮಾಡಿದ್ದೇವೆ. ಜೂನ್ 27 ರಂದು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಅವರಿಗೆ ಆಯಪ್ ತೋರಿಸುತ್ತೇವೆ. ನಂತರ ಅರ್ಜಿ ಸಲ್ಲಿಕೆಗೆ ಆಯಪ್ ಬಿಡುಗಡೆ ಮಾಡುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶನಿವಾರ ಹೇಳಿದರು.

ಆಗಸ್ಟ್ 17 ರ ನಂತರದಿಂದ ಫಲಾನುಭವಿಗಳಿಗೆ ಹಣ ಹಾಕುತ್ತೇವೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಕೆಗೆ ಯಾವ ಶುಲ್ಕವೂ ಇರುವುದಿಲ್ಲ. ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಆಯಪ್ ರಚಿಸಿದ್ದೇವೆ. ಒಂದು ರೂಪಾಯಿ ಹಣವನ್ನು ಅರ್ಜಿ ಸಲ್ಲಿಕೆಗೆ ಕೊಡಬೇಡಿ. ಅರ್ಜಿ ಸಲ್ಲಿಸಿ ಸ್ವೀಕೃತಿ ಪತ್ರ ಸಿಕ್ಕರೆ ಅಲ್ಲಿಗೆ ನೀವು ಫಲಾನುಭವಿ ಪಟ್ಟಿಗೆ ಸೇರುತ್ತೀರಿ. ಇದರಲ್ಲಿ ಯಾವುದೇ ಗೊಂದಲಗಳು ಬೇಡ ಎಂದರು.

ಒಂದು ರೂಪಾಯಿ ಹಣವನ್ನು ಅರ್ಜಿ ಸಲ್ಲಿಕೆಗೆ ಕೊಡಬೇಡಿ. ಅರ್ಜಿ ಸಲ್ಲಿಸಿ ಸ್ವೀಕೃತಿ ಪತ್ರ ಸಿಕ್ಕರೆ ಅಲ್ಲಿಗೆ ನೀವು ಫಲಾನುಭವಿ ಪಟ್ಟಿಗೆ ಸೇರುತ್ತೀರಾ. ಇದರಲ್ಲಿ ಯಾವುದೇ ಗೊಂದಲಗಳು ಬೇಡ ಎಂದರು. ಗೃಹ ಲಕ್ಷ್ಮೀ ಯೋಜನೆ ಜಾರಿಗೆ ಹಣಕಾಸಿನ ತೊಂದರೆ ಇದೆ ಎಂಬುದರಲ್ಲಿ ಅರ್ಥವಿಲ್ಲ. ಎಲ್ಲಾ ರೀತಿಯ ಸಂಪನ್ಮೂಲ ನಮ್ಮ ಬಳಿ ಇದೆ ಎಂದು ಅವರು ಸ್ಪಷ್ಟಪಡಿಸಿದರು.

RELATED TOPICS:
English summary :Application process for Grilakshmi Yojana starts from June 27: Minister Lakshmi Hebbalkar

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...