Thu,May09,2024
ಕನ್ನಡ / English

ಬೆಂಗಳೂರಿಗೂ ನಿನಗೂ ಏನಪ್ಪ ಸಂಬಂಧ ಡಿ.ಕೆ.ಶಿವಕುಮಾರ್‌? | JANATA NEWS

25 Jun 2023
1526

ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಬ್ರ್ಯಾಂಡ್‌ ಬೆಂಗಳೂರು ಪರಿಕಲ್ಪನೆಗೆ ತಿರುಗೇಟು ನೀಡಿರುವ ಮಾಜಿ ಡಿಸಿಎಂ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ “ಬೆಂಗಳೂರಿಗೆ ಇವರಿಂದ ನಯಾ ಪೈಸೆ ಲಾಭ ಇಲ್ಲ. ಶಿವಕುಮಾರ್‌ ಅವರನ್ನು ಜನ ಕಳೆದ 35 ವರ್ಷಗಳಿಂದ ನೋಡಿದ್ದಾರೆ’ ಎಂದು ವ್ಯಂಗ್ಯವಾಡಿದ್ದಾರೆ.

ನಾನು ರಾಮನಗರ ಉಸ್ತುವಾರಿಯಾದಾಗ “ನಿನಗೂ ರಾಮನಗರಕ್ಕೂ ಏನು ಸಂಬಂಧ ?’ ಎಂದು ಶಿವಕುಮಾರ್‌ ಪ್ರಶ್ನಿಸಿದ್ದರು. ಈಗ ನಾನು ಕೇಳ್ತೀನಿ, ” ನಿನಗೂ ಬೆಂಗಳೂರಿಗೂ ಏನಪ್ಪ ಸಂಬಂಧ ಶಿವಕುಮಾರ ? ಎಂದು ಏಕವಚನದಲ್ಲೇ ಪ್ರಶ್ನೆ ಮಾಡಿದ್ದಾರೆ.

ರಾಮನಗರ ನನ್ನ ಪೂರ್ವಿಕರ ಜಿಲ್ಲೆ. ನನಗೆ ಕೇಳಿದ ಹಾಗೇ ನಿನಗೂ ಕೇಳ್ತಿದೀನಿ. ನಿನಗೂ ಬೆಂಗಳೂರಿಗೆ ಏನು ಸಂಬಂಧ ಶಿವಕುಮಾರ? ಬೆಂಗಳೂರಿಗೆ ನಿಮ್ಮಿಂದ ನಯಾಪೈಸೆ ಲಾಭ ಇಲ್ಲ. ನಿಮ್ಮನ್ನು ಜನ ಕಳೆದ 35 ವರ್ಷಗಳಿಂದ ನೋಡಿದ್ದಾರೆ. ಡಿಕೆ ಶಿವಕುಮಾರ್ ಅಂದ್ರೆ ಏನು, ಯಾರು ಎಂಬುದನ್ನು ಜನ ನೋಡಿದ್ದಾರೆ. ನಿಮ್ಮಿಂದ ಏನು ಆಗಲ್ಲ, ನಿಮಗೆ ಜನರ ಮೇಲೆ ಕಾಳಜಿ ಇಲ್ಲ ಎಂದು ಕಿಡಿಕಾರಿದರು.

ಡಿಕೆ ಶಿವಕುಮಾರ್ ರಿಯಲ್ ಎಸ್ಟೇಟ್ ವ್ಯಾಪಾರಿ, ಅವರಿಂದ ಬೆಂಗಳೂರಿಗೆ ಉಪಯೋಗ ಆಗಲ್ಲ. ಡಿಕೆ ಶಿವಕುಮಾರ್ ಅವರದ್ದು ದ್ವೇಷದ ರಾಜಕಾರಣ, ವೇಷದ ರಾಜಕಾರಣ. ಡಿಕೆ ಶಿವಕುಮಾರ್ ಅಂದ್ರೆ ದ್ವೇಷ, ಡಿಕೆ ಶಿವಕುಮಾರ್ ಅಂದ್ರೆ ಅಸೂಯೆ, ಕಿರುಕುಳ ಎಂದು ಡಾ ಸಿಎನ್‌ ಅಶ್ವತ್ಥ ನಾರಾಯಣ ವಾಗ್ದಾಳಿ ನಡೆಸಿದರು.

ಗ್ಯಾರಂಟಿ ಯೋಜನೆಗಳ ಜಾರಿ ವಿಳಂಬದ ಬಗ್ಗೆ ಮಾತನಾಡಿದ ಸಿಎನ್‌ ಅಶ್ವತ್ಥ ನಾರಾಯಣ, ಕಾಂಗ್ರೆಸ್‌ನವರು ಮಾತು ತಪ್ಪುತ್ತಿದ್ದಾರೆ. ಅವರು ನುಡಿದಂತೆ ಉಚಿತ ಗ್ಯಾರಂಟಿಗಳನ್ನು ಕೊಡಲಿ. ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಪ್ರತಿಯೊಬ್ಬರಿಗೂ ಕೊಡಬೇಕು. ಗ್ಯಾರಂಟಿಗಳನ್ನು ಕೊಡುವುದಕ್ಕೆ ಶುರು ಮಾಡಿ, ಬೇಕಾದವರು ಅರ್ಜಿ ಹಾಕೋತಾರೆ. ಈ ಸರ್ಕಾರಕ್ಕೆ ಗ್ಯಾರಂಟಿಗಳನ್ನು ಕೊಡೋಕ್ಕೆ ಇಷ್ಟ ಇಲ್ಲ. ಕಳ್ಳನಿಗೆ ಪಿಳ್ಳೆ ನೆವ ಎಂಬಂತೆ ಇವರ ಪರಿಸ್ಥಿತಿ ಆಗಿದೆ ಎಂದು ಕಿಡಿಕಾರಿದರು.

RELATED TOPICS:
English summary :What is the relationship between Bengaluru and you Shivakumar?

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...