Sun,Apr28,2024
ಕನ್ನಡ / English

ಬೆಲೆ ಏರಿಕೆ ಪಟ್ಟಿ ಓದಿದರೆ ಎದೆ ನಡುಗುತ್ತದೆ, 5 ಗ್ಯಾರಂಟಿಗಳಿಂದ ಜನೋದ್ಧಾರ ಗ್ಯಾರಂಟಿ ಎಂದು ಹಸಿ ಸುಳ್ಳು! | JANATA NEWS

26 Jun 2023
1039

ಬೆಂಗಳೂರು : ರಾಜ್ಯ ಸರ್ಕಾರವು ನನಗೂ ಫ್ರೀ, ನಿನಗೂ ಫ್ರೀ ಎಂದು ಗ್ಯಾರಂಟಿಗಳ ಬಗ್ಗೆ ಜಾಗಟೆ ಹೊಡೆದಿತ್ತು. ಆದರೆ ಈ ಸರಕಾರಕ್ಕೆ ಮಾರುಕಟ್ಟೆಯಲ್ಲಿ ಗಗನಮುಖಿಯಾದ ಆಹಾರ ಪದಾರ್ಥಗಳ ಬೆಲೆ ಮೇಲೆ ನಿಯಂತ್ರಣವೇ ಇಲ್ಲ. ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ, ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆಗಳು ಜನರ ಕಣ್ಣೀರಿನಲ್ಲಿ ಗೆಣಸು ಬೇಯಿಸಿಕೊಳ್ಳುತ್ತಿದ್ದು, ಬೆಲೆ ಇಳಿಕೆ ಬಗ್ಗೆ ಚಿಂತನೆ ಮಾಡಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಬೆಲೆ ಏರಿಕೆ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, 5 ಗ್ಯಾರಂಟಿಗಳಿಂದ ಜನೋದ್ಧಾರ ಗ್ಯಾರಂಟಿ ಎಂದು ಹಸಿ ಸುಳ್ಳು ಹೇಳಿದ್ದ ಕಾಂಗ್ರೆಸ್‌ ಸರ್ಕಾರ ಬರಗೆಟ್ಟ ಈ ಹೊತ್ತಿನಲ್ಲಿ ಅಂಬರದ ಮೇಲೆ ಕೂತು ಸ್ವಯಂವರ ಮಾಡಿಕೊಳ್ಳುತ್ತಿರುವ ಮತಿಗೆಟ್ಟ ವರನಂತೆ ವರ್ತಿಸುತ್ತಿದೆ. ಬೆಲೆ ಏರಿಕೆ ಹೊಡೆತಕ್ಕೆ ಜನ ತತ್ತರಿಸುತ್ತಿರುವುದು ಅದರ ಕಣ್ಣಿಗೆ ಕಾಣುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೊಬ್ಬರ ಮೇಲೆ ಗೂಬೆ ಕೂರಿಸುವ ಈ ಸರ್ಕಾರ ಬಂದು ತಿಂಗಳ ಮೇಲಾಯಿತು. ಅಧಿಕಾರ ಸಿಕ್ಕ ಕೂಡಲೇ ವರ್ಗಾವಣೆ ದಂಧೆಯ ದಾಸ್ಯಕ್ಕೆ ಬಿದ್ದ ಸರಕಾರಕ್ಕೆ ಮಾರುಕಟ್ಟೆಯಲ್ಲಿ ಹೆಚ್ಚುತ್ತಲೇ ಹೋಗುತ್ತಿರುವ ಬೆಲೆಗಳ ಬಗ್ಗೆ, ಆಹಾರ ಪದಾರ್ಥಗಳ ದುಬಾರಿ ಬಗ್ಗೆ ಗಮನ ಹೋಗಲೇ ಇಲ್ಲ.

ಹಣದ ಹಪಾಹಪಿ ಭಾಗ್ಯಗಳನ್ನು ಬಲಿ ತೆಗೆದುಕೊಳ್ಳುವ ದುಸ್ಥಿತಿಗೆ ದೂಡಿದೆ. ಬೆಲೆ ಏರಿಕೆ ಪಟ್ಟಿ ಓದಿದರೆ ಎದೆ ನಡುಗುತ್ತದೆ. ಅಕ್ಕಿ ಬೆಲೆ ಕೆಜಿಗೆ ಸರಾಸರಿ 20 ರೂ. ಏರಿದ್ದರೆ ,ಕೆಜಿ ಟೊಮ್ಯಾಟೋ ಬೆಲೆ 100 ರೂ. ಮುಟ್ಟಿದೆ. ಈ ಏರಿಕೆ ಲಾಭ ಅತ್ತ ರೈತನಿಗೂ ಇಲ್ಲ, ಇತ್ತ ಗ್ರಾಹಕನಿಗೂ ಇಲ್ಲ. ಜನ ಬೆಲೆ ಬೆಂಕಿಯಲ್ಲಿ ಬೇಯುತ್ತಿದ್ದರೆ ಈ ಸರ್ಕಾರ ಆ ಬೇಗೆಯಲ್ಲಿ ಚಳಿ ಕಾಯಿಸಿಕೊಳ್ಳುತ್ತಿದೆ, ಹೊಸ ಹುಂಡಿಗಳಿಗೆ ಜಾಗ ಹುಡುಕುತ್ತಿದೆ ಎಂದಿದ್ದಾರೆ.

ರಾಜ್ಯ ಕಾಂಗ್ರೆಸ್‌ ಸರ್ಕಾರ ತಾನು ಕೊಟ್ಟ ಭರವಸೆಗಳ ಬಗ್ಗೆ ಉತ್ತರ ಹೇಳಲಿ? ಬೆಲೆಗಳ ಇಳಿಕೆಯ ಬಗ್ಗೆ ಹೇಳಿದ್ದೆಲ್ಲ ಎಲ್ಲಿ ಹೋಯಿತು? ಮತ ಪಡೆದ ಮೇಲೆ ಎಲ್ಲಾ ಮರೆತು ಹೋಯಿತಾ? 135 ಸೀಟು ಸಿಕ್ಕಿದ ಮೇಲೆ ಪ್ರಣಾಳಿಕೆ ಪುಸ್ತಕಕ್ಕೆ ಮೂವತ್ತೇ ದಿನದಲ್ಲಿ ಗೆದ್ದಲು ಹಿಡಿಯಿತಾ?

ನುಡಿದಂತೆ ನಡೆದಿದ್ದೇವೆ ಎಂದಿರಿ, ನುಡಿದಂತೆ ಎಲ್ಲಿ ನಡೆದಿದ್ದೀರಿ? ನುಡಿದಂತೆ ನಡೆದಿದ್ದೇವೆ ಎಂದರೆ ಲಂಗೂ ಲಗಾಮು ಇಲ್ಲದೆ ಬೆಲೆಗಳನ್ನು ಆಕಾಶಕ್ಕೆ ಜಿಗಿಸುವುದಾ? ಮಾರುಕಟ್ಟೆಯ ದಲ್ಲಾಳಿಗಳಿಗೆ ಶಕ್ತಿ ತುಂಬುವುದಾ? ಶಕ್ತಿ ಯೋಜನೆ ಮೂಲಕ ಮಹಿಳೆಯರ ಗಮನ ಬೇರೆಡೆಗೆ ಸೆಳೆದು, ಅವರ ಅಡುಗೆ ಮನೆ ಬಜೆಟ್’ಗೆ ಕೊಳ್ಳಿ ಇಡುವುದಾ? ಎಂದು ಎಚ್‌ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಅಕ್ಕಿಭಾಗ್ಯ ಹಗಲು ಕನಸು, ಬೆಲೆ ಏರಿಕೆ ಕನಸು ನನಸು
ಗೃಹಜ್ಯೋತಿ ಈಗ ಸುಡುಜ್ಯೋತಿ
ಶಕ್ತಿ ಯೋಜನೆಯಿಂದ ಸಾರಿಗೆ ವ್ಯವಸ್ಥೆಯಲ್ಲಿ ಅರಾಜಕತೆ
ಗೃಹಲಕ್ಷ್ಮಿಗೆ ಗ್ರಹಣ
ನಿದಿರೆಗೆ ಜಾರಿದೆ ಯುವನಿಧಿ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

RELATED TOPICS:
English summary :If you read the list of price increase, your chest will tremble, it is a blatant lie that Janodhara is guaranteed by 5 guarantees!

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...