Mon,May13,2024
ಕನ್ನಡ / English

ಬಕ್ರೀದ್​​​ ಆಚರಣೆಯಲ್ಲಿ ಸಿಎಂ ಭಾಗಿ; ಕೋಮು ಉದ್ವಿಗ್ನತೆ, ದ್ವೇಷ ಸೃಷ್ಟಿಸಲು ಬಯಸುವವರಿಗೆ ಪ್ರಾಮುಖ್ಯತೆ ನೀಡಬೇಕಾಗಿಲ್ಲ | JANATA NEWS

29 Jun 2023
1349

ಬೆಂಗಳೂರು : ಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದ ಈದ್-ಅಲ್-ಅಧಾ ಹಬ್ಬವನ್ನು ಇಂದು ದೇಶಾದ್ಯಂತ ಬಕ್ರೀದ್ ಎಂದು ಭಕ್ತಿ, ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಜಮೀರ್ ಅಹ್ಮದ್ ಖಾನ್ ಅವರ ಜೊತೆಗೆ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡರು.

ಸಚಿವರಾದ ಜಮೀರ್ ಅಹಮದ್ ಖಾನ್ ಸೇರಿದಂತೆ ಅನೇಕರು ಭಾಗವಹಿಸಿದ್ದರು. ಈ ವೇಳೆ ಮಾತನಾದಿದ ಸಿದ್ದರಾಮಯ್ಯ ಅವರು, ಇಡೀ ಮನುಕುಲಕ್ಕೆ ಒಳ್ಳೆಯದಾಗಲಿ ಎಂದು ನೀವೆಲ್ಲ ಇಲ್ಲಿ ಸೇರಿ ಪ್ರಾರ್ಥನೆ ಸಲ್ಲಿಸಿದ್ದೀರಿ. ಇದು ಭಾಷಣ ಮಾಡುವ ಸಭೆ ಅಲ್ಲ. ಈಗಾಗಲೇ ಧರ್ಮ ಗುರುಗಳು ಪ್ರಾರ್ಥನೆಯನ್ನು ಮಾಡಿ, ನಿಮ್ಮನ್ನೆಲ್ಲಾ ಭಾಗವಹಿಸುವಂತೆ ಮಾಡಿದ್ದಾರೆ. ಬಕ್ರೀದ್‌ ಹಬ್ಬ ತ್ಯಾಗ ಮಾಡುವ ಒಂದು ಹಬ್ಬ. ಈ ಹಬ್ಬದ ದಿನ ಚಾಮರಾಜಪೇಟೆ ಭಾಗದ ಎಲ್ಲ ಮುಸಲ್ಮಾನ್‌ ಬಾಂಧವರು ಸೇರಿ ಪ್ರಾರ್ಥನೆ ಮಾಡಿದ್ದೀರಿ. ನಾನು ಸಹ ಅತ್ಯಂತ ಸಂತೋಷದಿಂದ ಪ್ರಾರ್ಥನಾ ಸಭೆಯಲ್ಲಿ ಪಾಲ್ಗೊಂಡಿದ್ದೇನೆ ಎಂದರು.

ನಮ್ಮ ನಮ್ಮಲ್ಲೇ ದ್ವೇಷ ಹುಟ್ಟುಹಾಕುವ ಅನೇಕ ಶಕ್ತಿಗಳಿವೆ. ಆ ಶಕ್ತಿಗಳು ಉದ್ದೇಶಪೂರ್ವಕವಾಗಿಯೇ ಇದನ್ನು ಮಾಡುತ್ತವೆ. ಅದಕ್ಕೆ ನಾವು ಸೊಪ್ಪು ಹಾಕುವುದಾಗಲಿ, ಮಹತ್ವ ನೀಡುವುದಾಗಲಿ ಮಾಡಬಾರದು. ಮನುಷ್ಯರು ಪ್ರೀತಿ, ವಿಶ್ವಾಸದಿಂದ, ಮನುಷ್ಯರಂತೆ ಬದುಕುವ ವಾತಾವರಣ ನಿರ್ಮಾಣ ಮಾಡಬೇಕಿದೆ. ರಾಜ್ಯದ ಅಭಿವೃದ್ಧಿಯ ಜತೆಗೆ ಜನತೆಯೂ ಅಭಿವೃದ್ಧಿಯಾಗಬೇಕು. ದೇವರು ಎಲ್ಲರಿಗೂ ಸದ್ಭುದ್ದಿ ನೀಡಿ ಮನುಷ್ಯರಾಗಿ ಬಾಳುವ ಗುಣವನ್ನು ನೀಡಲಿ ಎಂದರು.

ರಾಜ್ಯದ ಮುಸಲ್ಮಾನ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯಗಳನ್ನು ತಿಳಿಸಿದರು. ಬಕ್ರೀದ್ ಹಬ್ಬ ತ್ಯಾಗದ ಸಂಕೇತ. ಮನುಕುಲಕ್ಕೆ ಒಳ್ಳೆಯದಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿರುವುದಾಗಿ ತಿಳಿಸಿದರು.

RELATED TOPICS:
English summary :CM participates in Bakrid celebrations; Those who want to create communal tension and hatred should not be given importance ​

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...