Mon,May06,2024
ಕನ್ನಡ / English

ಪಂಚಾಯಿತಿ ಎಲೆಕ್ಷನ್‌ ಗೆಲ್ಲದವರು ನಮಗೆ ಮಾರ್ಗದರ್ಶನ ಮಾಡ್ತಾರೆ: ರೇಣುಕಾಚಾರ್ಯ | JANATA NEWS

29 Jun 2023
1441

ಬೆಂಗಳೂರು : ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲದವರು ನಮಗೆ ಪಾಠ ಮಾಡ್ತಾರೆ. ತಮಿಳುನಾಡಿನಿಂದ ಅಣ್ಣಾಮಲೈ ಬಂದು ನಮಗೆ ಮಾರ್ಗದರ್ಶನ ಕೊಡ್ತಾರೆ. ಏನು ಅಣ್ಣಾಮಲೈ ದೊಡ್ಡ ಹೀರೋನಾ? ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಕಿಡಿಕಾರಿದ್ದಾರೆ.

ಈ ಹಿಂದೆ ಜಗದೀಶ್ ಶೆಟ್ಟರ್​ ಅವರು ಪಕ್ಷ ಬಿಜೆಪಿ ತೊರೆದ ಬಳಿಕ ವಿಧಾನಸಭೆ ಚುನಾವಣೆ ಸಹ ಉಸ್ತುವಾರಿಯಾಗಿದ್ದ ಅಣ್ಣಮಲೈ ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್​ ಸೇರಿದಂತೆ ಕೆಲ ನಾಯಕರ ಕಾರ್ಯವೈಖರಿ ಬಗ್ಗೆ ಬಿಚ್ಚಿಟ್ಟು ಆಕ್ರೋಶ ವ್ಯಕ್ತಪಡಿಸಿದ್ದರು.

ಗ್ರಾಮ ಪಂಚಾಯಿತಿ ಗೆಲ್ಲದವರು ನಮಗೆ ಮಾರ್ಗದರ್ಶನ ಮಾಡುತ್ತಾರೆ. ಅಣ್ಣಾಮಲೈ ಬಂದು ನಮಗೆ ಮಾರ್ಗದರ್ಶನ ಕೊಡುತ್ತಾರೆ. ಅಣ್ಣಾಮಲೈ ಏನು ದೊಡ್ಡ ಹೀರೋ ನಾ? ಸೆಲ್ಯೂಟ್ ಹೊಡೆಸಿಕೊಳ್ಳುತ್ತಿದ್ದವರಿಂದ ಬೊಮ್ಮಾಯಿ ಅವರಿಗೆ ಹೇಳಿಸಿಕೊಳ್ಳುವ ಮುಜುಗರ. ಇವೆಲ್ಲಾ ನನ್ನ ಮಾತುಗಳಲ್ಲ, ಕಾರ್ಯಕರ್ತರ ಭಾವನೆಗಳು. ಮೋದಿ ಬಂದು ಹೋದ ಮೇಲೆ ಅದನ್ನು ಮತಗಳಾಗಿ ಪರಿವರ್ತನೆ ಮಾಡುವ ಮುಖಗಳು ಬೇಕಲ್ವಾ? ಅಂತೆಲ್ಲ ಎಂದು ವಾಗ್ದಾಳಿ ನಡೆಸಿದರು.

ಸುಧಾಕರ್​ ಸೋತಾಗ ಅವರ ಮನೆಗೆ ಹೋಗಿ ಸಾಂತ್ವನ ಹೇಳಿದ್ರಿ. ಬೇರೆ ಯಾರೂ ಸೋತ ಅಭ್ಯರ್ಥಿಗಳು ಕಾಣಲಿಲ್ವಾ? 2 ಖಾತೆ ಕೊಡದಿದ್ದರೆ ಬಿಜೆಪಿ ಮುಗಿಸಿಬಿಡುತ್ತೇನೆ ಎಂದು ಬೆದರಿಕೆ. ಬಿಜೆಪಿ ಮುಗಿಸಿಬಿಡುತ್ತೇನೆ ಎಂದು ಹೇಳಿದವರ ಮನೆಗೆ ಹೋಗಿದ್ದೀರಿ..

ಕಾಂಗ್ರೆಸ್ ಗ್ಯಾರಂಟಿ ಕೊಡುತ್ತಾ ಹೋದರು, ನಮ್ಮವರು ಮಲಗಿದ್ದರು. ಬಿಜೆಪಿ ಪ್ರಣಾಳಿಕೆ ಜನರಿಗೆ ತಲುಪಲೇ ಇಲ್ಲ. ಸತಾಯಿಸಿ ಓಡಾಡಿಸಿ ಅಭ್ಯರ್ಥಿಗಳಿಗೆ ಬಿಜೆಪಿ ಟಿಕೆಟ್ ಕೊಟ್ಟರು. ಅಭಿಪ್ರಾಯ ಹಂಚಿಕೊಳ್ಳಲು ಶಾಸಕಾಂಗ ಸಭೆ ಕರೆಯಲೇ ಇಲ್ಲ. ಬಸವರಾಜ ಬೊಮ್ಮಾಯಿ ಅವರ ಕೈಕಟ್ಟಿ ಹಾಕಿದರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾನು ಯಾವತ್ತಿಗೂ ಬಿಜೆಪಿ ವಿರುದ್ಧ ಮಾತಾಡಿಲ್ಲ. ಬಿಜೆಪಿ ನನಗೆ ಒಂದು ತಾಯಿಯ ಸಮಾನ ಆದರೆ, ಕೆಲವು ದೌರ್ಭಾಗ್ಯ ಗಳನ್ನು ಅನಿವಾರ್ಯವಾಗಿ ಮಾತಾಡಬೇಕಾಗುತ್ತದೆ. ಮಾಧ್ಯಮಗಳ ಮುಂದೆ ಮಾತಾಡೋದು ತಪ್ಪು ಹೌದು. ಯಾರಿಗೋ ಅಪಮಾನ, ಅವಮಾನ ಮಾಡುವ ಅವಶ್ಯಕತೆ ನನಗಿಲ್ಲ. ಅಧಿಕಾರದಲ್ಲಿ ಇದ್ದಾಗ ಯಡಿಯೂರಪ್ಪ ಇಳಿಯುವವರೆಗೂ ಮಾತಾಡಿದ್ರಲ್ಲ. ಶಾಸಕರ ಅಭಿಪ್ರಾಯ ಯಾಕೆ ಸಂಗ್ರಹ ಮಾಡಬೇಕಿತ್ತು.

ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಪರ ಮಾತನಾಡಿದರೆ ಪಕ್ಷ ವಿರೋಧಿ ಚಟುವಟಿಕೆ. ಯಡಿಯೂರಪ್ಪ ವಿರುದ್ಧವಾಗಿ ಮಾತಾಡಿದರೆ ಶಹಬ್ಬಾಸ್‌ಗಿರಿ ಕೊಡ್ತಾರೆ. ಅನಿವಾರ್ಯವಾಗಿ ನಾನು ಈ ರೀತಿ ಮಾತನಾಡ್ತಿದ್ದೇನೆ.

ಯಡಿಯೂರಪ್ಪ ರನ್ನು ಇಳಿಸಲೇಬೇಕೆಂದು ಕೆಲವರನ್ನು ಮಾತಾಡಿಸೋಕೆ ಬಿಟ್ರು. ಯಡಿಯೂರಪ್ಪ ರನ್ನು ಯಾವ ಪುರುಷಾರ್ಥಕ್ಮಾಗಿ ಇಳಿಸಿದ್ರಿ..? ಎಂದು ಪ್ರಶ್ನಿಸಿದ ಅವರು, ಮತ ಕೇಳೋಕೆ ಯಡಿಯೂರಪ್ಪರ ಮುಖ ಬೇಕು. ಅಧಿಕಾರದ ಎಂಜಾಯ್ ಮಾಡಲು ಯಡಿಯೂರಪ್ಪ ಬೇಕು. ಎಂದು ಪ್ರಶ್ನಿಸಿದರು.

ಸೋತವರಿಗೆ ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ ಕರೆ ಮಾಡಿ ಮಾತನಾಡಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಯಾರಿಗಾದ್ರೂ ಫೋನ್‌ ಮಾಡಿದ್ರಾ? ಆತ್ಮಾವಲೋಕನ ಸಭೆ ಎಂದು ಯಾರೋ ಕರೆ ಮಾಡುತ್ತಾರೆ.. ಪಕ್ಷದ ಕಚೇರಿ ಕೆಲವರು ಕಾರ್ಪೊರೇಟ್​​ ಕಚೇರಿ ಮಾಡಿಕೊಂಡಿದ್ದಾರೆ ಎಂದು ಸ್ವಪಕ್ಷದ ಪ್ರಮುಖ ನಾಯಕರಿಗೆ ಕುಟುಕಿದರು.

ಬಸವರಾಜ ಬೊಮ್ಮಾಯಿ ಹೆಸರಿಗಷ್ಟೇ ಮುಖ್ಯಮಂತ್ರಿ ಆಗಿದ್ರು. ಆದರೆ ಅವರ ಕೈಗಳ ಎರಡನ್ನು ಕಟ್ಟಿ ಹಾಕಿದ್ರು. ನಾಯಕರ ವರ್ತನೆಗಳೇ ಬಿಜೆಪಿ ರಾಜ್ಯದಲ್ಲಿ ಸೋಲಿಗೆ ಕಾರಣ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿ ಕಚೇರಿಯಲ್ಲಿ ಕೆಲವರು ಬರೀ ಕತ್ತರಿ ಹಾಕೋದೇ ಕೆಲಸವಾಗಿದೆ. ಯಾರು ಮಾತಾಡ್ತಾರೆ ಅವರನ್ನು ಮುಗಿಸೋದು, ಸೋತಮೇಲೆ ಯಡಿಯೂರಪ್ಪ ನಮ್ಮನ್ನು, ವಿಜಯೇಂದ್ರ‌ ಕರೆದು ಮಾತಾಡಿದ್ರು. ಆದರೆ ನಮ್ಮ ಜೊತೆಗೆ ಬೇರೆಯವರು ಸೌಜನ್ಯಯುತವಾಗಿ ಮಾತಾಡಿಲ್ಲ. ರಾಜ್ಯಾಧ್ಯಕ್ಷರಾದವರು ಒಂದು ಸಾರಿ ಆದರೂ ಮಾತಾಡಿದ್ರಾ..? ಎಂದು ಪ್ರಶ್ನಿಸಿದರು.

ಇನ್ನು, ಫೆಬ್ರವರಿಯಿಂದಲೇ ಕಾಂಗ್ರೆಸ್‌ನವರು ಗ್ಯಾರಂಟಿಗಳನ್ನು ಕೊಡುತ್ತಾ ಹೋದರು, ನಮ್ಮವರು ಮಲಗಿದ್ದರು. ಬಿಜೆಪಿ ಪ್ರಣಾಳಿಕೆ ಜನರಿಗೆ ತಲುಪಲೇ ಇಲ್ಲ. ಸತಾಯಿಸಿ ಓಡಾಡಿಸಿ ಅಭ್ಯರ್ಥಿಗಳಿಗೆ ಬಿಜೆಪಿ ಟಿಕೆಟ್ ಕೊಟ್ಟರು. ಶಾಸಕರ ಅಭಿಪ್ರಾಯ ಹಂಚಿಕೊಳ್ಳಲು ಕೂಡ ಶಾಸಕಾಂಗ ಸಭೆಯನ್ನು ಕರೆಯಲೇ ಇಲ್ಲ. ಬಸವರಾಜ ಬೊಮ್ಮಾಯಿ ಅವರ ಕೈಕಟ್ಟಿ ಹಾಕಿದ್ದರು ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಬಗ್ಗೆ ಗೌರವ ಇದೆ. ಅವರು ಪ್ರವಾಸ ಮಾಡಿದ್ದಾರೆ ನಿಜ. ಆದರೆ, ಅದು ಮತಗಳಾಗಿ ಪರಿವರ್ತನೆ ಆಗಲಿಲ್ಲ. ಸೋಲಿನ ಬಳಿಕ ರಾಜ್ಯಾಧ್ಯಕ್ಷರು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕಿತ್ತು. ವ್ಯವಸ್ಥೆ ಸರಿಪಡಿಸಿಕೊಳ್ಳಿ, ಅವಲೋಕನ ಮಾಡಿಕೊಳ್ಳಿ. ಕಾರ್ಯಕರ್ತರನ್ನು ಬೆದರಿಸುವುದು ಬಿಡಿ ಎಂದು ನಳಿನ್ ಕುಮಾರ್ ಕಟೀಲ್ ಅವರಿಗೆ ಎಂಪಿ ರೇಣುಕಾಚಾರ್ಯ ಸಲಹೆ ನೀಡಿದರು.

RELATED TOPICS:
English summary :Those who did not win panchayat elections will guide us: Renukacharya ​

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...