Sun,May05,2024
ಕನ್ನಡ / English

ಸಿಎಂ ಸಿದ್ದರಾಮಯ್ಯ ಕಚೇರಿಯಲ್ಲಿ ಲಂಚ ಕೊಡದೇ ಕೆಲಸ ಆಗೋದಿಲ್ಲ: ಕುಮಾರಸ್ವಾಮಿ ಗಂಭೀರ ಆರೋಪ | JANATA NEWS

03 Jul 2023
1204

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಕಚೇರಿಯಲ್ಲಿ ಲಂಚ ಕೊಡದೇ ಕೆಲಸ ಆಗೋದಿಲ್ಲ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಎಂದು ಹೊಸ ಬಾಂಬ್‌ ಸಿಡಿಸಿದ್ದಾರೆ.

ಈ ಕುರಿತು ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಳೆದ ಒಂದೆರೆಡು ವರ್ಷಗಳಲ್ಲಿ ಕಾಂಗ್ರೆಸ್ ನಾಯಕರು ಜಾಗಟೆ ಹೊಡೆದ್ರಲ್ಲಪ್ಪ. ಪೇಸಿಎಂ ಅಂತ ರೋಡ್‌ನಲ್ಲಿ ಪೋಸ್ಟರ್ ಹಾಕಿದ್ರಲ್ಲ ಆಗ ದಾಖಲೆ ಇತ್ತಾ!? ಮಧ್ಯಪ್ರದೇಶದಲ್ಲಿ ಕೂಡ ಅದನ್ನೆ ಎಕ್ಸ್‌ಪೆರಿಮೆಂಟ್ ಮಾಡಲಾಗಿದೆ. ಸಿಎಂ ಕಚೇರಿ ಏನಾಗಿದೆ ಅಂತ ಜಗಜ್ಜಾಹಿರಾಗಿದೆ ಎಂದು ಕಾಂಗ್ರೆಸ್‌ ಸರ್ಕಾರ ವಿರುದ್ದ ಕಿಡಿಕಾರಿದ್ದಾರೆ.

ಆದರೆ ರಾಜ್ಯದ ಆರ್ಥಿಕ ಪರಿಸ್ಥಿತಿ, ಚುನಾವಣೆ ವೇಳೆ ಜನರಿಗೆ ಕೊಟ್ಟ ಆಶ್ವಾಸನೆ, ಭರವಸೆ ಯಾವ ರೀತಿ ಈಡೇರಿಸಲು ಹೊರಟ್ಟಿದ್ದೀರಿ ಎಂದು ಪ್ರಶ್ನಿಸಿದ ಕುಮಾರಸ್ವಾಮಿ ಅವರು ರಾಜ್ಯಪಾಲರ ಭಾಷಣ ನೋಡಿದರೆ ಸರ್ಕಾರ ಐಸಿಯುಗೆ ಹೋಗುವ ಕಾಲ ಬರಲಿದೆ ಅನಿಸುತ್ತಿದೆ.

ಐಸಿಯು, ವೆಂಟಿಲೇಟರ್ ಮೇಲೆ ಈ ಸರ್ಕಾರ ನಡೆಯಬಹುದು. ಆರ್ಥಿಕ ಪರಿಸ್ಥಿತಿ ಆ ಮಟ್ಟಕ್ಕೆ ಹೋಗಲಿದೆ. ಮುಂದಿನ ಐದು ವರ್ಷಕ್ಕೆ ಏನು ಕೊಡಬೇಕೆಂಬ ಆತ್ಮವಿಶ್ವಾಸವೇ ಇಲ್ಲ ಎಂದು ವ್ಯಂಗ್ಯವಾಡಿದರು.

ಸರ್ಕಾರದ ಮುಂದಿನ ಆಶಯಗಳ ಬಗ್ಗೆ ರಾಜ್ಯಪಾಲರು ಭಾಷಣ ಮಾಡುವಾಗ ಆಡಳಿತ ಪಕ್ಷದ ಯಾವ ಶಾಸಕರು ಮೇಜು ಕುಟ್ಟಿದ್ದು ನೋಡಿಲ್ಲ. ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಿಸಿ, ಬ್ರಾಂಡ್ ಬೆಂಗಳೂರು ಮಾಡುತ್ತೇವೆ ಎಂದು ಹೊರಟಿದ್ದಾರೆ. ಈ ಬೆಂಗಳೂರು ಕುಲಗೆಡಿಸಿದವರು ಯಾರು?. ಎರಡೂ ರಾಷ್ಟ್ರೀಯ ಪಕ್ಷಗಳು ಬೆಂಗಳೂರು ಕುಲಗೆಡಿಸಿದ್ದಾರೆ ಎಂದು ಎಚ್​​​ಡಿಕೆ ವಾಗ್ದಾಳಿ ನಡೆಸಿದರು.

ಬೆಂಗಳೂರು ಅಭಿವೃದ್ದಿ ವಿಚಾರವಾಗಿ ಮಾತನಾಡಿದ ಅವರು, ಬೆಂಗಳೂರು ಕುಲಗೆಡಿಸಿದವರು ಯಾರು? ಬೆಂಗಳೂರು ಯಾಕೆ ಈ ಪರಿಸ್ಥಿತಿಗೆ ಬಂತು, ನಿಮ್ಮ ಯೋಗ್ಯತೆಗೆ ಮಾಸ್ಟರ್ ಪ್ಲಾನ್ ಬಿಡುಗಡೆ ಮಾಡಬೇಕಿತ್ತು. ಯಾಕೆ ಬಿಡಿಎ ಇಟ್ಕೊಂಡಿದ್ದೀರಾ? ಬೆಂಗಳೂರನ್ನ ಐದು ಆರು ಡಿವಿಷನ್ ಮಾಡ್ತಾರಂತೆ, ಹೀಗೆ ಮಾಡಿದ್ರೆ ಮಣ್ಣು ಹಾಕಿಕೊಳ್ಳಬೇಕು. ಬೆಂಗಳೂರು ಕೆರೆ ನಾಶ ಮಾಡಿದ್ದಾರೆ. ಬೆಂಗಳೂರು ಕೆರೆ ಉಳಿಸಿಕೊಂಡಿದ್ರೆ ಈ ಪರಿಸ್ಥಿತಿ ಬರುತ್ತಾ ಎಂದು ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.

ಈ ಸರ್ಕಾರದಲ್ಲಿ ಸಿಂಡಿಕೇಟ್​​​​ಗಳಿವೆ. ಸಬ್ ರಿಜಿಸ್ಟಾರ್ ಕಚೇರಿಯಲ್ಲಿ, ಸಾರಿಗೆ ಇಲಾಖೆ ವರ್ಗಾವಣೆಯಲ್ಲೂ ಒಂದು ಸಿಂಡಿಕೇಟ್ ಇದೆ. ಮೊದಲ ಬಾರಿಗೆ ಕಮರ್ಷಿಯಲ್ ಇಲಾಖೆಯಲ್ಲೂ ಸಿಂಡಿಕೇಟ್ ಶುರುವಾಗಿದೆ. ಅದಕ್ಕೆ ವೈಎಸ್​​​ಟಿ ಇದೆ ಎಂದು ಹೇಳಿದ್ದೆ. ಸಿಂಡಿಕೇಟ್​​​​ಗಳು ವರ್ಗಾವಣೆ ದಂಧೆ ಮಾಡುತ್ತಾರೆ. ಇವರು ಸರ್ಕಾರದ ಮುಂದೆ ತೆಗೆದುಕೊಂಡು ಹೋಗುತ್ತಾರೆ ಎಂದು ಕುಮಾರ ಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

RELATED TOPICS:
English summary :CM Siddaramaiah office does not work without bribes: Kumaraswamy is a serious allegation

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...