Sun,May19,2024
ಕನ್ನಡ / English

ಸಿಎಂ ಆಗಿದ್ದಾಗ ವರ್ಗಾವಣೆಯಲ್ಲಿ ದಂಧೆ ನಡೆಸಿದ್ದೇನೆ ಎಂದು ಸಾಬೀತಾದರೇ ರಾಜಕೀಯ ನಿವೃತ್ತಿ ಘೋಷಿಸುವೆ! | JANATA NEWS

06 Jul 2023
831

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಅವಧಿಯಲ್ಲೂ ವರ್ಗಾವಣೆ ದಂಧೆ ನಡೆದಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪಕ್ಕೆ ಹೆಚ್​​.ಡಿ ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ.

ನಾನು ಮುಖ್ಯಮಂತ್ರಿಯಾಗಿದ್ದಾಗ ವರ್ಗಾವಣೆ ವಿಚಾರದಲ್ಲಿ ನನ್ನ ಮಕ್ಕಳು ಭಾಗಿಯಾಗಿಲ್ಲ. ನಾನು ಮುಖ್ಯಮಂತ್ರಿಯಾಗಿದ್ದಾಗ ನನ್ನ ಮಕ್ಕಳಿಂದ ಅಧಿಕಾರ ದುರ್ಬಳಕೆ ಆಗಿದ್ದರೇ ದಾಖಲೆ ನೀಡಿ. ಸಾಬೀತಾದರೇ ರಾಜಕೀಯ ನಿವೃತ್ತಿ ಘೋಷಿಸುವೆ ಎಂದು ವಿಧಾನಸೌಧದಲ್ಲಿ ಹೇಳಿದ್ದಾರೆ.

ಈ ಸರ್ಕಾರ ದಿನದ 24 ಗಂಟೆಯೂ ವರ್ಗಾವಣೆ ದಂಧೆಯನ್ನೇ ನಡೆಸುತ್ತಿದೆ. ಅಭಿವೃದ್ಧಿ ಬದಲು ನಗದು ಅಭಿವೃದ್ಧಿಯಲ್ಲಿ ತೊಡಗಿದೆ. ಇದನ್ನು ಹೇಳಿದರೆ ನಮ್ಮ ಮೇಲೆಯೇ ಕೆಸರು ಎರಚುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಈ ಸರ್ಕಾರ ನಡೆಸುತ್ತಿರುವ ವರ್ಗಾವಣೆ ದಂಧೆಗಳಿಗೆ ಸಂಬಂಧಿಸಿ ನನ್ನಲ್ಲಿ ದಾಖಲೆಗಳಿವೆ. ಅದರಲ್ಲಿ ಯಾರಿಗೂ ಅನುಮಾನ ಬೇಡ. ಅದನ್ನು ಬಿಡುಗಡೆ ಮಾಡಬೇಕಾದ ಸಂದರ್ಭದಲ್ಲಿ ಮಾಡುತ್ತೇನೆ. ಯಾವಾಗ, ಎಲ್ಲಿ ಬಿಡುಗಡೆ ಮಾಡುತ್ತೇನೆ ಎಂಬುದು ನನಗೆ ಗೊತ್ತಿದೆ. ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿ ಹಲವಾರು ವರ್ಷಗಳು ಕೆಲಸ ಮಾಡಿದ್ದಾರೆ. ಅವರು ಎಂದಾದರೂ ದಾಖಲೆ ಬಿಡುಗಡೆ ಮಾಡಿದ್ದರಾ ಎಂದು ಖಾರವಾಗಿ ಪ್ರಶ್ನೆ ಮಾಡಿದರು.

ಸಿದ್ದರಾಮಯ್ಯ ದಾಖಲೆ ಇಟ್ಟು ಮಾತನಾಡಿದ್ದನ್ನು ನಾನು ನೋಡಿಲ್ಲ. ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿ ಕೆಲಸ ಮಾಡಿದ್ದಾರೆ. ಸಿದ್ದರಾಮಯ್ಯ ಯಾವತ್ತಾದರೂ ದಾಖಲೆ ಬಿಡುಗಡೆ ಮಾಡಿದ್ರಾ?ಸಿದ್ದರಾಮಯ್ಯ ದಾಖಲೆ ಇಟ್ಟು ಮಾತನಾಡಿದನ್ನ ನೋಡಲೇ ಇಲ್ಲ. ತಾರ್ಕಿಕ ಅಂತ್ಯ ಎಂಬುದು ನನ್ನಿಂದ ಅಲ್ಲ, ಈ ದೇಶದ ವ್ಯವಸ್ಥೆ. ರಾಜಕೀಯ ಪ್ರಭಾವ, ಧನ ಬಲ ಇರುವವರಿಂದ ತಾರ್ಕಿಕ ಅಂತ್ಯ ಅಸಾಧ್ಯ ಎಂದು ಕಿಡಿಕಾರಿದರು.

ಪೆನ್‌ಡ್ರೈವ್ ಬಿಡುಗಡೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಹೆಚ್‌ಡಿಕೆ ಅವರು ಹೆದರಿ ಓಡೋಗಲ್ಲ, ಹಿಟ್ ಅಂಡ್ ರನ್ ಮಾಡಲ್ಲ. ಕಾಂಗ್ರೆಸ್ ನಾಯಕರು ಏನು ಮಾತಾಡ್ತಾರೆ ನೋಡೋಣ. ಪೆನ್ ಡ್ರೈವ್ ಅಸಲಿ, ಹೈದ್ರಾಬಾದ್​ನಲ್ಲಿ ಮಾಡಿಸಿದ್ದಲ್ಲ. ಪ್ರಕರಣದಲ್ಲಿ ಭಾಗಿಯಾದವರ ಮೇಲೆ ಕ್ರಮ ಏನು ಅಂತ ಹೇಳಬೇಕಲ್ಲ ಎಂದರು.

RELATED TOPICS:
English summary :I will announce my political retirement if it is proved that I have done business in transfer when I was CM

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...