Fri,May03,2024
ಕನ್ನಡ / English

ಸರ್ಕಾರ 85 ಸಾವಿರ ಕೋಟಿ ಸಾಲದ ಹೊರೆ ಹೊರೆಸುತ್ತಿದ್ದಾರೆ: ಕುಮಾರಸ್ವಾಮಿ | JANATA NEWS

07 Jul 2023
1282

ಬೆಂಗಳೂರು : ಸರ್ಕಾರ 85 ಸಾವಿರ ಕೋಟಿ ಸಾಲದ ಹೊರೆ ಹೊರೆಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ದ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ನಮ್ಮ ಜನ ರಾಜ್ಯದ ಖಜಾನೆಯನ್ನ ಈಗಾಗಲೇ ಯಾವುದೇ ಶ್ರಮವಿಲ್ಲದೆ ತುಂಬಿಸಿ ಇಟ್ಟಿದ್ದಾರೆ. ಕೋವಿಡ್‌ ಸಮಯದಲ್ಲೂ ವಾಣಿಜ್ಯ ತೆರಿಗೆ, ನೋಂದಣಿ ಮತ್ತು ಮುದ್ರಾಂಕ ಇಲಾಖೆ ಹಾಘೂ ಅಬಕಾರಿ ತೆರಿಗೆಯಲ್ಲಿ ದಾಖಲೆ ಮಟ್ಟದ ಸಂಗ್ರಹವಾಗಿದೆ.

ಈ ಎಲ್ಲದರ ನಡುವೆ ಸರ್ಕಾರ ಈಗಾಗಲೇ 85 ಸಾವಿರ ಕೋಟಿ ಸಾಲವನ್ನು ಎತ್ತೋದಾಗಿ ಘೋಷಣೆ ಮಾಡಿದೆ. ಸರ್ಕಾರದ ಯಾವುದೇ ಪ್ರಯತ್ನವಿಲ್ಲದೆ, ರಾಜ್ಯದ ಜನತೆ ಇಲ್ಲಿನ ಖಜಾನೆ ತುಂಬಿಸಿದ್ದಾರೆ. ಎಲ್ಲೂ ಕೂಡ ತೆರಿಗೆಯನ್ನು ಏರಿಕೆ ಮಾಡಿರಲಿಲ್ಲ ಎಂದು ಹೇಳಿದ್ದಾರೆ.

ಕೇಂದ್ರದ ನರೇಂದ್ರ ಮೋದಿ ಅವರ ಸರಕಾರ, ಹಿಂದಿನ ಬಿಜೆಪಿ ಸರಕಾರವನ್ನು ನಿಂದಿಸಲು ಮೀಸಲಾದ ಬಜೆಟ್ ಹಾಗೂ ರಾಜಕೀಯ ಹೇಳಿಕೆಗಳಿಗೆ ಸೀಮಿತವಾದ ಬಜೆಟ್ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಹಿಂದೆ ಬಸವರಾಜ್ ಬೊಮ್ಮಾಯಿ ಅವರು ಲೆಖಾನುದಾನ ಪಡೆದಿದ್ದರು. ಅದರ ಮುಂದುವರೆದ ಭಾಗವೇ ಈ ಬಜೆಟ್ ಎಂದಿದ್ದಾರೆ. ಕೇಂದ್ರ ಸರ್ಕಾರ ಮತ್ತು ಹಿಂದಿನ ಸರಕಾರ ಬಿಜೆಪಿಯ ಆಡಳಿತ ಬಂದ ನಂತರ ಆರ್ಥಿಕ ಶಿಸ್ತನ್ನ ಉಲ್ಲಂಘಿಸಿದ್ದಾರೆ, ಸ್ವೆಚ್ಚಾಚಾರದಿಂದ ಆರ್ಥಿಕ ಶಿಸ್ತು ಹಾಳು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಬಸವರಾಜ ಬೊಮ್ಮಾಯಿಯವರ ಕಾಲದಲ್ಲಿ ನೀರಾವರಿ ಇಲಾಖೆಗೆ 1 ಲಕ್ಷ ಕೋಟಿ ಯೋಜನೆಗಳಿಗೆ ಅನುಮತಿ ಕೊಟ್ಟಿದ್ದಾರೆ. ಅದಕ್ಕೆ ಈಗ 40 ಸಾವಿರ ಕೋಟಿ ರೂಪಾಯಿ ಹೆಚ್ಚುವರಿ ಸೇರ್ಪಡೆ ಆಗಿದೆ. 1 ಲಕ್ಷ 75 ಸಾವಿರ ಕೋಟಿ ರೂಪಾಯಿ ಮೊತ್ತದ ಯೋಜನೆಗಳಿಗೆ ಹಣ ಇಡದೇ ಘೋಷಿಸಿದ್ದಾರೆ. 2013 -18 ರಿಂದ 15 ಲಕ್ಷ ಮನೆ ಕಟ್ಟಿದ್ದೀವಿ ಎಂದು ಹೇಳಿದ್ದಾರೆ. ಎಲ್ಲಿ ಕಟ್ಟಿದ್ದಾರೆ, ಇನ್ನು 12 ಲಕ್ಷ ಮನೆ ಕಟ್ಟಲು 17,815 ಕೋಟಿ ರೂಪಾಯಿ ಬೇಕು ಎಂದು ಹೇಳಿದ್ದಾರೆ. ಅದನ್ನು ಎಲ್ಲಿಂದ ತರುತ್ತಾರೆ. ಈಗ ನೋಡಿದರೆ ಆರ್ಥಿಕ ಶಿಸ್ತನ್ನು ಹಾಳು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದು ಅಗತ್ಯ ಇತ್ತೆ ಎಂದು ಅವರು ಪ್ರಶ್ನಿಸಿದರು.

ಈ ಬಾರಿ 3 ಲಕ್ಷ 28 ಸಾವಿರ ಕೋಟಿ ಬಜೆಟ್‌ನಲ್ಲಿ ಎರಡೂವರೆ ಲಕ್ಷ ಕೋಟಿ ರೆವಿನ್ಯೂ ಎಕ್ಸ್ ಪೆಂಡಿಚರ್, 27 ಸಾವಿರ ಕೋಟಿ ಸಾಲ ಮರುಪಾವತಿಗೆ ಇಟ್ಟುಕೊಂಡಿದ್ದಾರೆ. ಅದಾದ ಮೇಲೆ 85 ಸಾವಿರ ಕೋಟಿ ಸಾಲ ಎತ್ತುತ್ತಾರೆ. ಆ ಸಾಲಕ್ಕೆ ತಲೆ ಕೊಡುವುದು ಯಾರು? ಇವರು ನೋಡಿದರೆ ಹಿಂದಿನ ಸರಕಾರ ಆರ್ಥಿಕ ಶಿಸ್ತನ್ನ ಹಾಳು ಮಾಡಿದೆ ಬಜೆಟ್ ಉದ್ದಕ್ಕೂ ಹೇಳಿದ್ದಾರೆ. ಇದು ಸರಿಯಲ್ಲ ಎಂದು ಹೇಳಿದರು.

ಈ ಬಜೆಟ್‌ನಲ್ಲಿ ದುಡಿಯುವ ಜನರ ಕೈಗೆ ಸ್ವಾವಲಂಭಿಯಾಗಲು, ಅವರು ಬದಕಲು ದೀರ್ಘಕಾಲೀನ ಯೋಜನೆ ಏನು? ಈ ಪ್ರಶ್ನೆ ಹಾಕಿಕೊಂಡರೆ ಉತ್ತರ ಶೂನ್ಯ ಎಂದ ಅವರು, ಇವರ ಯಾವ ಗ್ಯಾರಂಟಿಗೂ ನನ್ನ ತಕರಾರಿಲ್ಲ, ಇನ್ನೂ ಎರಡು ಜ್ಯೋತಿ ಕೊಡಿ. ನಮದ್ದೇನು ತಕರಾರಿಲ್ಲ. ವರ್ಷಕ್ಕೆ 50 ರಿಂದ 60 ಸಾವಿರ ವೆಚ್ಚವಾಗಲಿದೆ. ಇದೊಂದೇ ಈ ಬಜೆಟ್‌ನಲ್ಲಿ ಇರೊದು. ಆದರೆ ಯಾವುದಕ್ಕೂ ಈ ಬಜೆಟ್ ನಲ್ಲಿ ಹಣ ಇಟ್ಟಿಲ್ಲ. ಇದು ಕೇವಲ ಕೇಂದ್ರ ಸರ್ಕಾರ- ಹಿಂದಿನ ಸರ್ಕಾರವನ್ನ ದೂಷಣೆ ಮಾಡುವ ಬಜೆಟ್ ಅಷ್ಟೇ. ಇದರಲ್ಲಿ ಏನೂ ಇಲ್ಲ ಎಂದು ದೂರಿದರು.

ಒಂದೇ ವರ್ಷಕ್ಕೆ ಜನರ ಮೇಲೆ 85 ಸಾವಿರ ಕೋಟಿ ಸಾಲ ಹೊರೆ ಹೊರೆಸುತ್ತಿದ್ದಾರೆ. ಇಷ್ಟೋಂದು ಸಾಲ ಏಕೆ ಮಾಡ್ತೀದೀರಿ. ಅದಕ್ಕೆ ಕಾರಣ ಕೊಡಿ ಎಂದು ಅವರು ಒತ್ತಾಯ ಮಾಡಿದರು.

RELATED TOPICS:
English summary :Government is carrying a debt burden of 85 thousand crores: Kumaraswamy ​

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...