ಜೈನ ಮುನಿ ಹಂತಕರ ವಿರುದ್ಧ ಕಠಿಣ ಕ್ರಮ: ಡಿ.ಕೆ ಶಿವಕುಮಾರ್ | JANATA NEWS
ಬೆಂಗಳೂರು : ಬೆಳಗಾವಿಯಲ್ಲಿ ಜೈನ ಮುನಿಗಳಾದ ಕಾಮಕುಮಾರನಂದಿ ಮಹಾರಾಜರ ಹತ್ಯೆ ಮಾಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಜೈನ ಮುನಿಗಳ ಹತ್ಯೆ ಖಂಡನೀಯ. ಇದನ್ನು ಸರ್ಕಾರ ಸಹಿಸುವುದಿಲ್ಲ. ತಪ್ಪಿತಸ್ಥರ ವಿರುದ್ಧ ಕಾನೂನಿನ ಕಠಿಣ ಕ್ರಮ ಕೈಗೊಳ್ಳಲಾಗುವುದು ಡಿ.ಕೆ.ಶಿವಕುಮಾರ್ ಎಂದು ಹೇಳಿದರು.
ಯಾರೊಬ್ಬರೂ ಪ್ರಚೋದನೆಗೆ ಒಳಗಾಗಬಾರದು, ಬೇರೆಯವರನ್ನು ಪ್ರಚೋದಿಸಬಾರದು. ಶಾಂತಿ ಸುವ್ಯವಸ್ಥೆ ಕಾಪಾಡಬೇಕು ಎಂದು ರಾಜ್ಯದ ಜನತೆಗೆ ಮನವಿ ಮಾಡಿದರು.
ಹುಬ್ಬಳ್ಳಿ ಬಳಿಯ ವರೂರು ಶ್ರೀ ಗುಣಧರ ನಂದಿ ಮಹಾರಾಜ ಸ್ವಾಮೀಜಿಗಳು, ಎಲ್ಲಾ ಸ್ವಾಮೀಜಿಗಳಿಗೆ ಭದ್ರತೆ ನೀಡಬೇಕು ಎಂದು ಅನ್ನ, ನೀರು ತ್ಯಜಿಸಿ ಪ್ರತಿಭಟನೆಗೆ ಮುಂದಾಗಿರುವ ಮಾಹಿತಿ ಬಂದಿದೆ. ಸ್ವಾಮೀಜಿಗಳಿಗೆ ಭದ್ರತೆ ನೀಡುವ ಕೆಲಸ ಮಾಡುತ್ತೇವೆ. ಕೂಡಲೇ ಅವರು ತಮ್ಮ ಪ್ರತಿಭಟನೆ ಕೈಬಿಡಬೇಕು ಎಂದು ಮನವಿ ಮಾಡಿದ್ದಾರೆ.