Thu,May02,2024
ಕನ್ನಡ / English

ರಾಜಕೀಯವಾಗಿ ರಾಹುಲ್​ ಮುಗಿಸಬೇಕೆಂಬ ಷಡ್ಯಂತ್ರ ನಡೆಯುತ್ತಿದೆ, ಅವರು ಎಲ್ಲೆಲ್ಲಿ ಹೆಜ್ಜೆ ಹಾಕಿದ್ದರೋ ಅಲ್ಲೆಲ್ಲಾ ಗೆದ್ದು ಶಕ್ತಿ ಬಂದಿದೆ! | JANATA NEWS

10 Jul 2023
1251

ಬೆಂಗಳೂರು : ರಾಹುಲ್ ಗಾಂಧಿ ಅವರ ರಾಜಕೀಯ ಜೀವನ ಮುಗಿಸಲು ಬಿಜೆಪಿ ನಡೆಸುತ್ತಿರುವ ಷಡ್ಯಂತ್ರವನ್ನು ಖಂಡಿಸಿ ಜುಲೈ 12 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆ ವರೆಗೂ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮೌನ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.

ರಾಹುಲ್ ಗಾಂಧಿ ಜನಪ್ರಿಯತೆಯನ್ನು ನೋಡಿ ಷಡ್ಯಂತ್ರ ನಡೆಯುತ್ತಿದೆ. ರಾಹುಲ್ ಪಾದಯಾತ್ರೆ ಮಾಡಿದ ಕ್ಷೇತ್ರಗಳಲ್ಲೆಲ್ಲ ಕಾಂಗ್ರೆಸ್ ಗೆದ್ದಿದೆ ಎಂದು ಹೇಳಿದರು.

ರಾಹುಲ್​ ಗಾಂಧಿ ಬೆಂಬಲಿಸಿ ಬುಧವಾರ ಫ್ರೀಡಂಪಾರ್ಕ್​ನಲ್ಲಿ ಮೌನ ಪ್ರತಿಭಟನೆ ಮಾಡಲಿದ್ದೇವೆ. ಸಿಎಂ ಸೇರಿ ಎಲ್ಲಾ ಶಾಸಕರು ಭಾಗಿಯಾಗಲಿದ್ದಾರೆ ಎಂದರು. ಎಲ್ಲ ವಿರೋಧ ಪಕ್ಷದವರು ರಾಹುಲ್‌ ಪರ ನಿಲ್ಲುತ್ತಿದ್ದೇವೆ ಎನ್ನುವ ಸಂದೇಶ ಕಳಿಸಬೇಕಿದೆ. ರಾಹುಲ್ ಕರ್ನಾಟಕದಲ್ಲಿ ಮಾಡಿದ್ದ ಭಾಷಣಕ್ಕೆ ಕೋರ್ಟ್ ತೀರ್ಪಿನ ಬಗ್ಗೆ ಮಾತಾಡುವುದಿಲ್ಲ.

ರಾಹುಲ್ ಗಾಂಧಿ ಅವರು ಎಂದಿಗೂ ದೇಶದ ಸ್ವಾಭಿಮಾನಕ್ಕೆ ಧಕ್ಕೆ ತಂದಿಲ್ಲ. ರಾಜ್ಯದಲ್ಲಿ ಅವರು ಮಾಡಿದ ಭಾಷಣವನ್ನೇ ಮುಂದಿಟ್ಟುಕೊಂಡು ರಾಜಕೀಯವಾಗಿ ಅವರನ್ನು ಮುಗಿಸುವ ಷಡ್ಯಂತ್ರ ನಡೆಯುತ್ತಿದೆ. ಅದನ್ನು ನಾವು ಖಂಡಿಸುತ್ತೇವೆ. ದೇಶದ ಪರವಾಗಿ, ಸತ್ಯದ ಪರವಾಗಿ ಧ್ವನಿ ಎತ್ತುತ್ತಿರುವ ರಾಹುಲ್ ಗಾಂಧಿ ಅವರ ಪರವಾಗಿ ಇಡೀ ದೇಶ ಹಾಗೂ ವಿರೋಧ ಪಕ್ಷಗಳು ನಿಲ್ಲುವ ಸಂದೇಶ ರವಾನಿಸಬೇಕಾಗಿದೆ ಎಂದು ಹೇಳಿದ್ದಾರೆ.

ಭಾರತ್ ಜೋಡೋ ಯಾತ್ರೆಯಲ್ಲಿ ಅವರು ನಡೆದ ಶಕ್ತಿಯಿಂದಾಗಿ ಕರ್ನಾಟಕಕ್ಕೂ ಶಕ್ತಿ ಬಂತು. ರಾಹುಲ್ ನಡೆದ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಕಂಡಿದೆ. ಅವರು ಎಲ್ಲೆಲ್ಲಿ ಹೆಜ್ಜೆ ಹಾಕಿದ್ದರೋ ಅಲ್ಲೆಲ್ಲಾ ಗೆದ್ದು ಶಕ್ತಿ ಬಂದಿದೆ ಎಂದು ಹೇಳಿದರು.

ಮುಂದೆ ಅವರಿಗೆ ದೇಶದ ಪೂರ್ವದಿಂದ ಪಶ್ಚಿಮದವರೆಗೆ ಯಾತ್ರೆ ಮಾಡುವ ಸಲಹೆ ಬಂದಿದ್ದು, ಅವರ ಈ ಯಶಸ್ಸು, ಜನಪ್ರಿಯತೆ ಸಹಿಸಲಾಗದೇ ಈ ಷಡ್ಯಂತ್ರ ಮಾಡಲಾಗಿದೆ. ಹೀಗಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ದೇಶದ ಎಲ್ಲಾ ಪ್ರಮುಖ ಕೇಂದ್ರಗಳಲ್ಲಿ ಮೌನ ಪ್ರತಿಭಟನೆ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ. ರಾಜ್ಯದಲ್ಲಿ ಪಕ್ಷದ ಎಲ್ಲ ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಎಂದು ಈ ಮೂಲಕ ಮನವಿ ಮಾಡುತ್ತೇನೆ ಎಂದು ಹೇಳಿದರು.

ಈ ಮೌನ ಪ್ರತಿಭಟನೆಯಲ್ಲಿ ನಾನು, ಮುಖ್ಯಮಂತ್ರಿಗಳು ಹಾಗೂ ಎಐಸಿಸಿ ಪ್ರಧಾನಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಸೇರಿದಂತೆ ಎಲ್ಲಾ ಮಂತ್ರಿಗಳು, ಸಂಸದರು, ಶಾಸಕರು, ಕಾರ್ಯಕರ್ತರು, ಬ್ಲಾಕ್ ಕಾಂಗ್ರೆಸ್, ಮುಂಚೂಣಿ ಘಟಕದ ಅಧ್ಯಕ್ಷರು, ಕೌನ್ಸಿಲರ್‌ಗಳು ಭಾಗವಹಿಸುತ್ತೇವೆ" ಎಂದಿದ್ದಾರೆ.

RELATED TOPICS:
English summary :There is a conspiracy going on to finish off Rahul politically

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...