ದರೋಡೆಕೋರನ ಕಾಲಿಗೆ ಗುಂಡು ಹಾರಿಸಿ ಬಂಧನ! | JANATA NEWS
ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿದ್ದು,ದರೋಡೆಕೋರ ಯಾಸರ್ (26) ಎಂಬಾತನ ಕಾಲಿಗೆ ಶೇಷಾದ್ರಿಪುರಂ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.
ಸುಲ್ತಾನ್ ಪಾಳ್ಯದ ಭುವನೇಶ್ವರಿ ನಗರದ ನಿವಾಸಿಯಾಗಿರುವ ಈತನ ವಿರುದ್ಧ ಸುಲಿಗೆ, ರಾಬರಿಗಳಂತಹ 7ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.
ಯಾಸರ್ ಸುಲ್ತಾನ್ ಪಾಳ್ಯದ ಭುವನೇಶ್ವರ್ ನಗರದ ನಿವಾಸಿಯಾಗಿದ್ದು, ಅಪ್ರಾಪ್ತನಾಗಿದ್ದಾಗಿನಿಂದಲೇ ಸುಲಿಗೆ ರಾಬರಿಯಲ್ಲಿ ತೊಡಗಿದ್ದ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಸುಲಿಗೆ ಮಾಡುತ್ತಿದ್ದ.
ಆರೋಪಿಯ ಬಲಗಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
English summary :Robber shot in the leg and arrested!