Tue,May07,2024
ಕನ್ನಡ / English

ಬಾಯಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಕಾಂಗ್ರೆಸ್ ನಾಯಕರಿಂದ ಮೌನ ಪ್ರತಿಭಟನೆ | JANATA NEWS

12 Jul 2023
907

ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ರಾಜಕೀಯ ಜೀವನ ಮುಗಿಸಲು ಕೇಂದ್ರ ಸರ್ಕಾರ ಪಿತೂರಿ ರೂಪಿಸಿರುವುದನ್ನು ಖಂಡಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಇಂದು ಮೌನ ಪ್ರತಿಭಟನೆ ನಡೆಸಿತು.

ಫ್ರೀಡಂ ಪಾರ್ಕ್​ನಲ್ಲಿ ನಡೆದ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಸೇರಿದಂತೆ ಸಚಿವರು ಹಾಗೂ ಶಾಸಕರು ಪಾಲ್ಗೊಂಡರು.

ಪ್ರತಿಭಟನೆಯ ವೇಳೆ ಸಿಎಂ ಸಿದ್ದರಾಮಯ್ಯ ಮೊಳಗಲಿ ಮೊಳಗಲಿ ಸತ್ಯದ ಘರ್ಜನೆ ಮೊಳಗಲಿ ಎಂದು ಬರೆದಿರುವ ಹಾಗೂ ರಾಹುಲ್​ ಗಾಂಧಿ ಫೋಟೋ ಇರುವ ಭಿತ್ತಿ ಫಲಕವನ್ನು ಪ್ರದರ್ಶಿಸಿದರು.

ರಾಹುಲ್ ಗಾಂಧಿ ಸಂಸತ್ ಸ್ಥಾನ ಅನರ್ಹತೆಯನ್ನು ಕೋರ್ಟ್ ಎತ್ತಿ ಹಿಡಿದಿದ್ದು, ರಾಗಾ ಹಿನ್ನಡೆಯನ್ನು ಖಂಡಿಸಿ ಕಾಂಗ್ರೆಸ್ ಈ ಪ್ರತಿಭಟನೆಯನ್ನು ಕೈಗೊಂಡಿದೆ. ರಾಹುಲ್ ಗಾಂಧಿಯ ಸತ್ಯದ ನುಡಿಗಳನ್ನು ಸಹಿಸಿಕೊಳ್ಳದ ಪ್ರಧಾನ ಮಂತ್ರಿಗಳು ಅವರ ಮೇಲೆ ಎಲ್ಲಾ ಸೇಡಿನ ಕ್ರಮಗಳನ್ನು ಅನುಸರಿಸುತ್ತಿದ್ದಾರೆ.

ರಾಹುಲ್ ಗಾಂಧಿ ಅವರಿಗೆ ನೀಡಿರುವ ಶಿಕ್ಷೆ ಮತ್ತು ಅನರ್ಹತೆಯನ್ನು ಇಡೀ ರಾಷ್ಟ್ರವೇ ಖಂಡಿಸುತ್ತಿದೆ. ಬಿಜೆಪಿಯ ದ್ವೇಷ ರಾಜಕಾರಣವನ್ನು ಖಂಡಿಸಿ ಈ ಪ್ರತಿಭಟನೆ ಎಂದು ರಾಜ್ಯ ಕಾಂಗ್ರೆಸ್ ನಾಯಕರು ಇಂದು ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದಾರೆ.

ಅನರ್ಹತೆಯನ್ನು ಪ್ರಶ್ನಿಸಿ ಸೂರತ್​ ನ್ಯಾಯಾಲಯದಲ್ಲಿ ರಾಹುಲ್​ ಗಾಂಧಿ ಮೇಲ್ಮನವಿ ಸಲ್ಲಿಸಿದ್ದರು. ಆದರೆ, ನ್ಯಾಯಾಲಯ ಅರ್ಜಿ ತಿರಸ್ಕರಿಸಿತ್ತು. ಇದಾದ ಬಳಿಕ ರಾಹುಲ್​, ಗುಜರಾತ್​ ಹೈಕೋರ್ಟ್​ ಮೆಟ್ಟಿಲೇರಿದ್ದರು. ಕಳೆದ ಜುಲೈ 7ರಂದು ತೀರ್ಪು ಪ್ರಕಟಿಸಿದ ನ್ಯಾಯಾಲಯ ಸೂರತ್​ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿತ್ತು. ಇದೀಗ ಸುಪ್ರೀಂಕೋರ್ಟ್​ ಮೆಟ್ಟಿಲೇರಲು ರಾಹುಲ್​ ಗಾಂಧಿ ನಿರ್ಧಾರ ಮಾಡಿದ್ದಾರೆ.

RELATED TOPICS:
English summary :Silent protest by Congress leaders with a black band tied around their mouths ​

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...