Sun,Apr28,2024
ಕನ್ನಡ / English

ಅಪಘಾತದಲ್ಲಿ ಮೃತಪಟ್ಟ ಕುಟುಂಬಕ್ಕೆ 1 ಕೋಟಿ ರೂ. ಚೆಕ್‌ | JANATA NEWS

15 Jul 2023
1287

ಬೆಂಗಳೂರು : ಅಪಘಾತದಲ್ಲಿ ಮೃತಪಟ್ಟ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಾಲನಾ ಸಿಬ್ಬಂದಿಗಳಾದ ಜಿ.ವಿ.ಚಲಪತಿ ಹಾಗೂ ಪಿ.ಎನ್. ನಾಗರಾಜು ಅವರ ಕುಟುಂಬದ ಅವಲಂಬಿತರಿಗೆ ಶನಿವಾರ ಕೆ.ಎಸ್.ಆರ್.ಟಿ.ಸಿ ಕೇಂದ್ರ ಕಛೇರಿಯಲ್ಲಿ ತಲಾ ರೂ.1 ಕೋಟಿ ಅಪಘಾತ ಪರಿಹಾರ ಚೆಕ್ ವಿತರಿಸಲಾಗಿದೆ.

ಸಾರಿಗೆ ಹಾಗೂ ಮುಜರಾಯಿ ಸಚಿವರೂ ಆಗಿರುವ KSRTC ಅಧ್ಯಕ್ಷ ರಾಮಲಿಂಗ ರೆಡ್ಡಿಯವರು ನಿಗಮದ ಕೇಂದ್ರ ಕಚೇರಿಯಲ್ಲಿ ಸಿಬ್ಬಂದಿ ಹಾಗೂ ಅವರ ಅವಲಂಭಿತರ ಕಲ್ಯಾಣಕ್ಕಾಗಿ ಜಾರಿಗೊಳಿಸಿರುವ ಯೋಜನೆಯಡಿ 1 ಕೋಟಿ ರೂ. ಅಪಘಾತ ಪರಿಹಾರ ವಿಮೆಯ ಚೆಕ್ ಹಸ್ತಾಂತರ ಮಾಡಲಾಯಿತು.

ಕೆ.ಎಸ್.ಆರ್.ಟಿ.ಸಿ ಯು ದೇಶದಲ್ಲಿಯೇ ಪ್ರಪ್ರಥಮವಾಗಿ ಕಾರ್ಮಿಕ ಕಲ್ಯಾಣದ ವಿನೂತನ ಯೋಜನೆ ಅಡಿಯಲ್ಲಿ ತನ್ನ ಸಿಬ್ಬಂದಿಗಳಿಗೆ ರೂ.1 ಕೋಟಿ ಮೊತ್ತದ ಅಪಘಾತ ವಿಮೆಯನ್ನು ಜಾರಿಗೊಳಿಸಿದೆ. ಈ ಯೋಜನೆಯಲ್ಲಿ, ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ ವತಿಯಿಂದ ಪ್ರೀಮಿಯಂ ರಹಿತ ರೂ 50 ಲಕ್ಷಗಳ ವಿಮೆ ಹಾಗೂ ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ರವರಿಂದ ವಾರ್ಷಿಕ ರೂ.885/- ಪ್ರೀಮಿಯಂ ಪಾವತಿಯ ಮೇರೆಗೆ ರೂ.50 ಲಕ್ಷಗಳ ವಿಮೆಯು ಒಳಗೊಂಡಿರುತ್ತದೆ.

KSRTC ಚಾಲನಾ ಸಿಬ್ಬಂದಿ ಜಿ.ವಿ.ಚಲಪತಿ (41) ಬೆಂಗಳೂರು ಕೇಂದ್ರೀಯ ವಿಭಾಗದ ನಿಗಮದಲ್ಲಿ 11 ವರ್ಷಗಳ ಸೇವೆ ಸಲ್ಲಿಸಿದ್ದರು. 2023ರ ಜನವರಿ 29ರಂದು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದು ಅಫಘಾತ ಸಂಭವಿಸಿ ಮೃತಪಟ್ಟಿದ್ದರು. ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಜಿ.ವಿ.ಚಪತಿಯವರ ಕುಟುಂಬದವರಿಗೆ ವಿಮಾ ಪರಿಹಾರ 1 ಕೋಟಿ ರೂ. ಹೊರತುಪಡಿಸಿ, ನಿಗಮದ ವತಿಯಿಂದ 17.21 ರೂ. ಲಕ್ಷ ಪರಿಹಾರ ನೀಡಲಾಗಿದೆ. ಈ ಪೈಕಿ 12.71 ಲಕ್ಷ ರೂ. ಪರಿಹಾರವನ್ನು ಈಗಾಗಲೇ ವಿತರಿಸಲಾಗಿದೆ. ಬಾಕಿ 4.50 ಲಕ್ಷ ರೂ.ವನ್ನು ಮೃತ ಅವಲಂಬಿತರು ಸೂಕ್ತ ದಾಖಲಾತಿ ಸಲ್ಲಿಸಿದರೆ ಭವಿಷ್ಯ ನಿಧಿ ಇಲಾಖೆಯಿಂದ ಶೀಘ್ರದಲ್ಲಿ ಪಾವತಿಯಾಗಲಿದೆ.

ಹಾಸನ ವಿಭಾಗದ ನಿಗದಲ್ಲಿ 17 ವರ್ಷಗಳ ಸೇವೆ ಸಲ್ಲಿಸಿರುವ ಪಿ.ಎನ್.ನಾಗರಾಜು(52) 2023ರ ಫೆಬ್ರವರಿ 1ರಂದ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಕಾರು ಡಿಕ್ಕಿಯಾದ ಪರಿಣಾಮ ಸಾವನ್ನಪ್ಪಿದ್ದರು. ಮೃತರು ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಪಿ.ಎನ್.ನಾಗರಾಜ ಕುಟುಂಬಸ್ಥರಿಗೆ ವಿಮಾ ಪರಿಹಾರವಾಗಿ 1 ಕೋಟಿ ರೂ. ಹೊರತುಪಡಿಸಿ, ನಿಗಮದ ವತಿಯಿಂದ 21.94 ಲಕ್ಷ ರೂ. ಪರಿಹಾರ ನೀಡಲಾಗಿದೆ. ಈ ಪೈಕಿ 16.19 ಲಕ್ಷ ರೂ.ವನ್ನು ಈಗಾಗಲೇ ವಿತರಿಸಲಾಗಿದ್ದು, ಬಾಕಿ 5.75 ಲಕ್ಷ ರೂ.ವನ್ನು ಸೂಕ್ತ ದಾಖಲಾತಿ ಸಲ್ಲಿಸಿದ ಬಳಿಕ ಭವಿಷ್ಯ ನಿಧಿ ಇಲಾಖೆಯಿಂದ ಶೀಘ್ರವೇ ವಿತರಿಸಲಾಗುತ್ತದೆ.

ಈ ಕಾರ್ಯಕ್ರಮದಲ್ಲಿ ಕೆಎಸ್‌ಆರ್‌ಟಿಸಿ ಎಂಡಿ ವಿ. ಅನ್ಬುಕುಮಾರ್, ಎಸ್ ಬಿ.ಐ ಬ್ಯಾಂಕಿನ ವ್ಯವಸ್ಥಾಪಕ ಹೆಚ್.ವಿ. ಅನಂತ ಸುಬ್ಬರಾವ್, ಇತರೆ ಅಧಿಕಾರಿಗಳಾದ ಬಿ. ಜಯದೇವರಾಜೇ ಅರಸು, ಜಿ.ಎಸ್. ಮಹದೇವಯ್ಯ, ಹೆಚ್.ಡಿ. ರೇವಪ್ಪ, ಎಸ್. ನಾಗರಾಜ, ವೆಂಕಟರಮಣಪ್ಪ ಮತ್ತು ನಿಗಮದ ಅಧಿಕಾರಿ/ಸಿಬ್ಬಂದಿಗಳು ಭಾಗವಹಿಸಿದ್ದರು.

RELATED TOPICS:
English summary :1 crore to the family of the deceased in the accident. Check

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...