Mon,May06,2024
ಕನ್ನಡ / English

ಸಿದ್ದರಾಮಯ್ಯ ಸರ್ಕಾರದಿಂದ ಐಎಎಸ್ ಅಧಿಕಾರಿಗಳ ಜೀತ ಪದ್ಧತಿ ಜಾರಿ | JANATA NEWS

18 Jul 2023
1475

ಬೆಂಗಳೂರು : ಕಾಂಗ್ರೆಸ್‌ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಬಿಜೆಪಿ ವಿರೋಧಿ ಪಕ್ಷಗಳ ಸಭೆ ನಡೆಯುತ್ತಿದೆ. ಈ ಸಭೆಗೆ ಬರುವ ರಾಜಕೀಯ ನಾಯಕರ ಆತಿಥ್ಯಕ್ಕೆ ಐಎಎಸ್‌ ಅಧಿಕಾರಿಗಳನ್ನು ನಿಯೋಜನೆ ಮಾಡಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಅಧಿಕಾರ ಬಂಧನಕ್ಕಾಗಿ ಘಟಬಂಧನಕ್ಕೆ ಒಳಗಾದ ಕಾಂಗ್ರೆಸ್ ಪಕ್ಷವು ಕರ್ನಾಟಕದ ಹೆಮ್ಮೆ, ಪರಂಪರೆ,ಸ್ವಾಭಿಮಾನಕ್ಕೆ ಘಟಶ್ರಾದ್ಧ ಮಾಡಿದೆ. ಘಟಬಂಧನಕ್ಕೆ ಬಂದ ಹೊರರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಹೆಮ್ಮೆಯ ಐಎಎಸ್ ಅಧಿಕಾರಿಗಳನ್ನು ಕಳಿಸಿದ ಕಾಂಗ್ರೆಸ್ ಸರಕಾರದ ನಡೆ ತಪ್ಪು. ನುಡಿದಂತೆ ನಡೆಯುವುದು ಎಂದರೆ ಇದೇನಾ? ಎಂದು ಪ್ರಶ್ನಿಸಿದ್ದಾರೆ.

ಇದು ರಾಜ್ಯ ಸರಕಾರಿ ಕಾರ್ಯಕ್ರಮ ಅಲ್ಲ, ಹೊಸ ಸರಕಾರದ ಪ್ರಮಾಣ ಸ್ವೀಕಾರವೂ ಅಲ್ಲ. ಕೇವಲ ರಾಜಕೀಯ ಸಭೆಯಷ್ಟೇ. ಇಂಥ ಸಭೆಗೆ ಬಂದ ರಾಜಕೀಯ ನಾಯಕರಿಗೆ ಅತಿಥ್ಯ ನೀಡಲು ಜವಾಬ್ದಾರಿಯುತ ಅಧಿಕಾರಿಗಳನ್ನು ಕಳಿಸಿದ್ದು ಆರೂವರೆ ಕೋಟಿ ಕನ್ನಡಿಗರಿಗೆ ಎಸಗಿದ ಘೋರ ಅಪಚಾರ ಹಾಗೂ ರಾಜ್ಯದ ಪಾಲಿಗೆ ಮಹಾ ದುರಂತ ಎಂದಿದ್ದಾರೆ.

ಯಾವುದೇ ಒಂದು ರಾಜ್ಯದ ಅಭಿವೃದ್ಧಿ, ಆಡಳಿತ, ಮುನ್ನಡೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಐಎಎಸ್ ಅಧಿಕಾರಿಗಳು ಕೇವಲ ಅಧಿಕಾರಿಗಳಷ್ಟೇ ಅಲ್ಲ; ಆಯಾ ರಾಜ್ಯಗಳ ಕ್ಷಮತೆ, ದಕ್ಷತೆಯ ಪ್ರತೀಕ. ಅಂಥವರನ್ನು ಇನ್ನೊಬ್ಬರ ಆಜ್ಞಾಪಾಲಕರನ್ನಾಗಿ ಮಾಡಿ, ಬಾಗಿಲು ಕಾಯುವ ಕೆಲಸ ಹಚ್ಚಿದ್ದು ಆಡಳಿತ ಪಕ್ಷದ ಅಹಂಕಾರದ ಪರಮಾವಧಿ ಎಂದಿದ್ದಾರೆ.

135 ಸೀಟು ಕೊಟ್ಟ ತಪ್ಪಿಗೆ ಕನ್ನಡಿಗರಿಗೆ ವಿಪರೀತ ದರ್ಪ ತೋರಿದೆ ಕಾಂಗ್ರೆಸ್. ಸತ್ಯಯುಗದಲ್ಲಿ ಹಿರಣ್ಯಕಶಿಪು ಅಷ್ಟದಿಕ್ಪಾಲಕರನ್ನು ಸೆರೆಹಿಡಿದು ಮೆಟ್ಟಿಲು ಮಾಡಿಕೊಂಡ ಪಾಪಕ್ಕೆ ಸರ್ವನಾಶವಾದ. ಕಾಂಗ್ರೆಸ್ ಕೂಡ 30 ಐಎಎಸ್ ಅಧಿಕಾರಿಗಳನ್ನು ರಾಜಕಾರಣಿಗಳ ದ್ವಾರಪಾಲಕರನ್ನಾಗಿ ಮಾಡುವ ಮೂಲಕ ತನ್ನ ನಾಶಕ್ಕೆ ತಾನೇ ನಾಂದಿ ಹಾಡಿದೆ ಎಂದು ಕಿಡಿಕಾರಿದ್ದಾರೆ.

ಬಂಡವಾಳಶಾಹಿ ವ್ಯವಸ್ಥೆಯಲ್ಲಿ ನಂಬಿಕೆ ಹೊಂದಿರುವ ಕಾಂಗ್ರೆಸ್ ಪಕ್ಷ, ರಾಜ್ಯದಲ್ಲಿ 'ಐಎಎಸ್ ಜೀತ ಪದ್ಧತಿ'ಯನ್ನು ಜಾರಿಗೆ ತರುವ ಮೂಲಕ ಹೊಸ ನಮೂನೆಯ 'ರಾಜಕೀಯ, ಆಡಳಿತ ವಸಾಹತುಶಾಹಿ'ಯನ್ನು ದೇಶಕ್ಕೆ ಪರಿಚಯ ಮಾಡಿದೆ. ಹೌದು; ಕಾಂಗ್ರೆಸ್ ಯಾವಾಗಲೂ ಕುಖ್ಯಾತಿಗಳಿಗೇ ಕುಖ್ಯಾತಿ. ಅಂಥ ಅಪಾಯಕಾರಿ ಹಸ್ತವಾಸಿಯೇ ಕೈ ಪಕ್ಷದ ಆಸ್ತಿ ಎಂದು ವಾಗ್ದಾಳಿ ನಡೆಸಿದ್ದಾರೆ.

RELATED TOPICS:
English summary :Siddaramaiah government implements servitude system for IAS officers

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...