Wed,May08,2024
ಕನ್ನಡ / English

ಬೆಂಗಳೂರಿನಲ್ಲಿ ಮಹಾಘಟಬಂಧನ್ ಸಭೆ, ವಿಪಕ್ಷಗಳ ಶಕ್ತಿಪ್ರದರ್ಶನ! | JANATA NEWS

18 Jul 2023
1356

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನೇತತ್ವದಲ್ಲಿ 'ನಾವೆಲ್ಲ ಒಂದಾಗಿ ನಿಲ್ಲುತ್ತೇವೆ' ಎಂಬ ಘೋಷವಾಕ್ಯದಡಿ ಬೆಂಗಳೂರಿನಲ್ಲಿ ನಡೆದಿರುವ ವಿಪಕ್ಷಗಳ ಮಹಾಘಟಬಂಧನ್ ಸಭೆ ಮಂಗಳವಾರ ಮಹತ್ವದ ನಿರ್ಣಯ ಕೈಗೊಳ್ಳಲಿದೆ.

ಈ ಸಭೆಯಲ್ಲಿ 26 ಪಕ್ಷಗಳು ಭಾಗಿಯಾಗಲಿವೆ. ಈ ಸಭೆ ವಿಪಕ್ಷಗಳಿಗೆ ಗೇಮ್‌ ಚೇಂಜರ್‌ ಆಗಿದೆ. ಯುನಿಟೆಡ್‌ ವಿ ಸ್ಟ್ಯಾಂಡ್‌ ಘೋಷವಾಕ್ಯದಡಿ ಸಮಾಲೋಚನೆ ನಡೆಸಲಾಗುತ್ತಿದೆ. ಬಿಹಾರದ ಪಾಟ್ನಾದಲ್ಲಿ ವಿರೋಧ ಪಕ್ಷಗಳು ಈಗಾಗಲೇ ಮೊದಲ ಸಭೆಯನ್ನು ನಡೆಸಿವೆ. ಇಂದಿನ ಎರಡನೇ ಸಭೆಯಲ್ಲಿ ಮಹಾಮೈತ್ರಿ ಬಗ್ಗೆ ಮಹತ್ವದ ನಿರ್ಣಯಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ.

ಸೋಮವಾರ ಮಧ್ಯಾಹ್ನ 23 ಪಕ್ಷಗಳ ನಾಯಕರು ಬೆಂಗಳೂರಿಗೆ ಆಗಮಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಲ್ಲರನ್ನೂ ಆದರದಿಂದ ಬರಮಾಡಿಕೊಂಡರು.

ಈ 26 ಪಕ್ಷಗಳ ಮೈತ್ರಿಕೂಟಕ್ಕೆ ಹೊಸ ಹೆಸರು ನಾಮಕರಣ ಮಾಡುವ ಸಾಧ್ಯತೆ ಇದೆ. ಮಿತ್ರಪಕ್ಷಗಳ ದಂಡು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಹಾಕಲು ರಣತಂತ್ರ ರೂಪಿಸಲಿದೆ. ಬೆಂಗಳೂರಿನ ತಾಜ್ ವೆಸ್ಟೆಂಡ್ ನಲ್ಲಿ ಮಹಾಘಟಬಂಧನ್‌ ಸಭೆ ನಡೆಯಲಿದೆ.

ಲೋಕಸಭಾ ಚುನಾವಣೆಗೆ ಸಂಬಂಧಪಟ್ಟಂತೆ ಮೈತ್ರಿಯ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ಸೀಟು ಹಂಚಿಕೆ ವಿಚಾರಗಳು, ಚುನಾವಣಾ ಪ್ರಚಾರಕ್ಕೆ ಸಂಬಂಧಪಟ್ಟಂತೆ ಹಲವು ಮಹತ್ವದ ವಿಚಾರಗಳನ್ನು ಚರ್ಚಿಸಲಾಗುತ್ತಿದೆ.

ಬಿಹಾರದ ರಾಜಧನಿ ಪಾಟ್ನಾದಲ್ಲಿ ಜೂನ್‌ ತಿಂಗಳ ಅಂತ್ಯದಲ್ಲಿ ಮೊದಲ ಸುತ್ತಿನ ವಿಪಕ್ಷಗಳ ಸಭೆ ನಡೆದಿತ್ತು. ಆಗ 16 ಪಕ್ಷಗಳು ಈ ಸಭೆಯಲ್ಲಿ ಭಾಗವಹಿಸದ್ದವು. ಈ ಬಾರಿ ಹೊಸದಾಗಿ 8 ಪಕ್ಷಗಳು ಬೆಂಬಲ ಸೂಚಿಸಿದ್ದು 24 ಪಕ್ಷಗಳು ಭಾಗವಹಿಸುತ್ತಿವೆ. ಈ ಬಾರಿ ಸಭೆಯ ಉಸ್ತುವಾರಿಯನ್ನು ಕಾಂಗ್ರೆಸ್ ಪಕ್ಷಕ್ಕೆ ವಹಿಸಲಾಗಿದೆ. 7 ರಾಜ್ಯಗಳ ಮುಖ್ಯಮಂತ್ರಿಗಳು ವಿಪಕ್ಷಗಳ ಸಭೆಯಲ್ಲಿ ಭಾಗವಹಿಸಿರುವುದು ವಿಶೇಷವಾಗಿದೆ.

RELATED TOPICS:
English summary :Mahaghatabandhan meeting in Bengaluru, power show of opposition!

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...