Sun,May05,2024
ಕನ್ನಡ / English

ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿಗೆ ಕೊಲೆ ಸುಲಿಗೆ ಹೆಚ್ಚಾಗಿದೆ | JANATA NEWS

21 Jul 2023
1622

ಬೆಂಗಳೂರು : ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿಗೆ ಕೊಲೆ ಸುಲಿಗೆ ಹೆಚ್ಚಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಬಿಜಿಪಿ ಸದಸ್ಯರನ್ನು ವಿಧಾನಸಭೆ ಕಲಾಪದಿಂದ ಹೊರಹಾಕಿರುವುದನ್ನು ಖಂಡಿಸಿ ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಬಳಿ ಪಕ್ಷದ ವತಿಯಿಂದ ನಡೆಸಿದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಸರ್ಕಾರ ಬಂದ ಮೇಲೆ ಕರ್ನಾಟಕದ ಜನರ ಬದುಕು ದುಸ್ತರವಾಗಿದೆ. ರೈತರು ಎರಡು ಬಾರಿ ಬಿತ್ತನೆ ಮಾಡಿದರು ಬೆಳೆ ಬರದೇ ರೈತರು ಸಂಕಷ್ಟಕ್ಕೆ ಸಿಕಿದ್ದಾರೆ. ಸರ್ಕಾರ ಅವರ ರಕ್ಷಣೆಗೆ ಬಂದಿಲ್ಲ. 2013 ರಿಂದ 18ರ ವರೆಗೆ ಅತಿ ಹೆಚ್ಚು ರೈತರು ಸುಮಾರು 4000ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡ ದಾಖಲೆ ಇದೆ ಎಂದು ಹೇಳಿದರು.

ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿಗೆ ಕೊಲೆ ಸುಲಿಗೆ ಹೆಚ್ಚಾಗಿದೆ. ಪೊಲಿಸ್ ಠಾಣೆಯಲ್ಲಿ ಮಾಮೂಲು ಕೇಳುವ ಕೆಲಸ ಶುರುವಾಗಿದೆ. ವಿದ್ಯಾರ್ಥಿಗಳು, ರೈತರು, ಸರ್ಕಾರಿ ನೌಕರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ದುಡಿಯುವ ಸಾಮಾನ್ಯ ಜನರ ಬದುಕು ಅಸ್ಥಿರಗೊಳಿಸಿದ್ದಾರೆ. ಇವರು ಮಂಡಿಸಿರುವುದು ಜನ ವಿರೋಧಿ ಬಜೆಟ್‌ ಇವರು ಗ್ಯಾರೆಂಟಿ ಗಳಿಗೆ ಹಣ ಹೊಂದಿಸಲು ಪರದಾಡುತ್ತಿದ್ದಾರೆ.

ನಾವು ನಮ್ಮ ಬಜೆಟ್ ನಲ್ಲಿ ಡಿಗ್ರಿವರೆಗೆ ಉಚಿತ ವಿದ್ಯಾಭ್ಯಾಸ ನಿಡುವುದಾಗಿ ಹೇಳಿದ್ದೇವು. ಶಾಲಾ ಮಕ್ಕಳಿಗೆ ಪ್ರತ್ಯೇಕ ಬಸ್ ವ್ಯವಸ್ಥೆ ಮಾಡುವುದಾಗಿ ಹೇಳಿದ್ದೆವು ಇವರು ಅದನ್ನು ಕೈ ಬಿಟ್ಟಿದ್ದಾರೆ.

ನಿಜಲಿಂಗಪ್ಪ ರಿಂದ ಹಿಡಿದು ಜಗದೀಶದ ಶೆಟ್ಟವರೆಗೆ ಒಂದು ಲಕ್ಷ ಕೋಟಿ ಸಾಲವಾಗಿತ್ತು‌. ಸಿದ್ದರಾಮಯ್ಯ ಅವರ ಅವಧಿಯಲ್ಲಿ ಒಂದು ಲಕ್ಷ ಮೂವತ್ತು ಸಾವಿರ ಕೋಟಿ ಸಾಲ ಮಾಡಿದ್ದಾರೆ‌. ದಲಿತರ ಕಲ್ಯಾಣಕ್ಕಾಗಿ‌ ಮೀಸಲಿಟ್ಟ ಎಸ್ಸಿಪಿ, ಟಿಎಸ್ ಪಿ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ‌.

ಗೃಹ ಲಕ್ಷ್ಮೀ ಯೋಜನೆಗೆ 6 ಸಾವಿರ ಕೋಟಿ ರೂ. ಎಸ್ ಸಿಪಿ ಟಿಎಸ್ಪಿ ಹಣ ಬಳಕೆ ಮಾಡಿಕೊಂಡಿದ್ದಾರೆ. ಗ್ಯಾರೆಂಟಿ ಗಳಿಗೆ 13000 ಕೋಟಿ ರೂ. ವರ್ಗಾವಣೆ ಮಾಡಿದ್ದಾರೆ. ಕಾಂಗ್ರೆಸ್ ನಲ್ಲಿರುವ ದಲಿತ ಶಾಸಕರು ಹಾಗೂ ಸಚಿವರು ಏನು ಮಾಡುತ್ತಿಧ್ದಿರಿ. ಅದನ್ನು ಕೇಳಲು ದೈರ್ಯ ಇಲ್ಲವೆ ನರ ಇಲ್ಲವೇ ಎಂದು ಪ್ರಶ್ನಿಸಿದರು.

ಅಂಬೇಡ್ಕರ್ ಅವರ ಹೆಸರಿನಲ್ಲಿ ನಾವು 100 ಹಾಸ್ಟೇಲ್ ನಿರ್ಮಾಣ ಮಾಡಲು ಘೋಷಣೆ ಮಾಡಿದ್ದೇವು, ಹಿಂದುಳಿದ ವರ್ಗದ ಹಾಸ್ಟೆಲ್ ನಿರ್ಮಾಣ ಮಾಡಲು ಘೋಷಣೆ ಮಾಡಿದ್ದೇವು. ಅವುಗಳನ್ನು ನಿಮ್ಮ ಬಜೆಟ್ ನಲ್ಲಿ ಘೋಷಣೆ ಮಾಡಲಿಲ್ಲ. ನೀವು ದಲಿತರ ವಿರೋಧಿಗಳು ಎಂದು ಆರೋಪಿಸಿದರು.

ಗ್ಯಾರೆಂಟಿ ಗಳಲ್ಲಿ ಜನರಿಗೆ ಮೋಸ ಮಾಡಿದ್ದೀರಿ, ಕರೆಂಟ್ ದರ ಹೆಚ್ಚಳ ಮಾಡಿದ್ದೀರಿ, ಗೃಹಲಕ್ಷ್ಮೀಗೆ ಇನ್ನೂ ಯಜಮಾನಿಯನ್ನು ಹುಡುಕಾಟ ನಡೆಸಿದ್ದಾರೆ. ಯುವ ನಿಧಿ ಅಯೋಮಯವಾಗಿದೆ. ಎಂದು ವಾಗ್ದಾಳಿ ನಡೆಸಿದರು.

RELATED TOPICS:
English summary :Law and order has completely deteriorated and extortion has increased

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...