Tue,May07,2024
ಕನ್ನಡ / English

ಆಲ್ಕೋಹಾಲಾದರೇನು, ಹಾಲಾದರೇನು? ಇವರಿಗೆ ಖಜಾನೆ ತುಂಬಬೇಕಷ್ಟೇ | JANATA NEWS

22 Jul 2023
1342

ಬೆಂಗಳೂರು : ಹಾಲಿನ ದರವನ್ನು ಲೀಟರಿಗೆ ಮೂರು ರೂ. ಹೆಚ್ಚಿಸಿದ ರಾಜ್ಯ ಸರ್ಕಾರದ ತೀರ್ಮಾನಕ್ಕೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿ, ಆಲ್ಕೋಹಾಲಾದರೇನು? ಹಾಲಾದರೇನು? ಖಜಾನೆ ತುಂಬಬೇಕಷ್ಟೇ ಎಂದಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಅವರು, ಆಲ್ಕೋಹಾಲಿನ ಬೆಲೆ ಏರಿಸಿದ ನಂತರ ಕಾಂಗ್ರೆಸ್ ಸರಕಾರ ಹಾಲಿನ ಬೆಲೆಯನ್ನೂ ಲೀಟರಿಗೆ 3 ರೂ ಹೆಚ್ಚಿಸಿ ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ.

ಒಂದು ಕೈಯ್ಯಲ್ಲಿ ಕೊಟ್ಟು, ಇನ್ನೊಂದು ಕೈಯ್ಯಲ್ಲಿ ಕಸಿದುಕೊಳ್ಳುತ್ತಿದೆ! ಸ್ವತಃ ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿದ್ದ ಕಾಂಗ್ರೆಸ್ಸಿಗರು, ಜನರ ತಲೆಯ ಮೇಲೆ ಫ್ಲವರ್ ಪಾಟ್ ಇಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಆರಂಭದಲ್ಲಿಯೇ ವಿದ್ಯುತ್ ಶಾಕ್ ಕೊಟ್ಟಿದ್ದ ಸರ್ಕಾರ, ಗೃಹಜ್ಯೋತಿಯನ್ನು ಜನರ ಪಾಲಿಗೆ ಸುಡುಜ್ಯೋತಿ ಮಾಡಿತ್ತು. ಏರಿದ ಬೆಲೆಗಳನ್ನು ಕೆಳಗಿಳಿಸಲು ಕೈಲಾಗದ ಈ ಸರ್ಕಾರ, ವಿಧಾನ ಕಲಾಪ ಮುಗಿಯುತ್ತಿದ್ದಂತೆಯೇ ಜನತೆಗೆ ಹೊಸದಾಗಿ ಬೆಲೆ ಏರಿಕೆ ಗ್ಯಾರಂಟಿ, ಬೆಲೆಭಾಗ್ಯವನ್ನು ಕರುಣಿಸಿ ಕೈತೊಳೆದುಕೊಂಡಿದೆ.

ಆಲ್ಕೊಹಾಲಿನ ಬೆಲೆ ಏರಿಸಿದ ನಂತರ ಕಾಂಗ್ರೆಸ್‌ ಸರ್ಕಾರ ಹಾಲಿನ ಬೆಲೆಯನ್ನೂ ಲೀಟರಿಗೆ ₹3 ಹೆಚ್ಚಿಸಿ ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ. ಒಂದು ಕೈಯ್ಯಲ್ಲಿ ಕೊಟ್ಟು, ಇನ್ನೊಂದು ಕೈಯ್ಯಲ್ಲಿ ಕಸಿದುಕೊಳ್ಳುತ್ತಿದೆ. ಸ್ವತಃ ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿದ್ದ ಕಾಂಗ್ರೆಸ್ಸಿಗರು, ಜನರ ತಲೆಯ ಮೇಲೆ ಫ್ಲವರ್ ಪಾಟ್ ಇಡುತ್ತಿದ್ದಾರೆ.

ಸದನ ಸಮಿತಿಯ ಕೊನೆ ಪ್ಯಾರಾ ಓದಿಕೊಳ್ಳಿ. ಸಮಿತಿ ಸಿಬಿಐ ತನಿಖೆಗೆ ಶಿಫಾರಸು ಮಾಡಿದೆ. ನಿಮಗೆ ಧೈರ್ಯವಿದ್ದರೆ ಸಿಬಿಐ ತನಿಖೆ ನಡೆಸಿ, ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಿ. ನೂರಾ ಮೂವತ್ತೈದು ಸೀಟುಗಳ ಬಹುಮತ ಸರ್ಕಾರ ನಿಮ್ಮದಲ್ಲವೇ? ನುಡಿದಂತೆ ನಡೆಯುವ ಸರ್ಕಾರ ನಿಮ್ಮದಲ್ಲವೇ? ನೀವು ನುಡಿದಂತೆ ನಡೆಯುವ ಸಮಯ ಬಂದಿದೆ. ನಡೆದು ತೋರಿಸುವಿರಾ?

ತಾವು ಈಗ ಫುಲ್ ಬ್ಯುಸಿ, ನಾನು ಬಲ್ಲೆ. ಆದರೂ ಕೊಂಚ ಬಿಡುವು ಮಾಡಿಕೊಳ್ಳಿ. ಸದನ ಸಮಿತಿ ವರದಿಯ ಮೇಲೆ ಕಣ್ಣಾಡಿಸಿ. ದೇವೇಗೌಡರು ಸಿಎಂ ಆಗಿದ್ದ 1995ರ ಅಕ್ಟೋಬರ್, ನವೆಂಬರಿನಲ್ಲಿ ಈ ಯೋಜನೆಗೆ ಸಹಿ ಹಾಕುವ ವೇಳೆ ಇಂದಿನ ಮುಖ್ಯಮಂತ್ರಿಗಳೂ ಅಂದು ಹಣಕಾಸು ಸಚಿವರಾಗಿದ್ದರು. ಅವರಿಗೂ ಸತ್ಯ ಗೊತ್ತಿರುತ್ತದೆ. ಒಮ್ಮೆ ವಿಚಾರಿಸಲು ನಿಮಗೇನು ಸಮಸ್ಯೆ?

ಚುನಾವಣೆ ಪ್ರಣಾಳಿಕೆಯಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ ಭರವಸೆ ಕೊಟ್ಟಿದ್ದವರು ಎರಡೇ ತಿಂಗಳಲ್ಲಿ ಅದನ್ನು ಮರೆತೇ ಹೋಗಿದ್ದಾರೆ! ಹಸುಗಳ ಹಿಂಡಿ, ಬೂಸಾ ಬೆಲೆ ಇಳಿಕೆಗೂ ಯಾವ ಗ್ಯಾರಂಟಿಯೂ ಇಲ್ಲ. ಇವರಿಗೆ ಆಲ್ಕೋಹಾಲಾದರೇನು? ಹಾಲಾದರೇನು? ಖಜಾನೆ ತುಂಬಬೇಕಷ್ಟೇ. ಈಗ ಜನರ ಬದುಕೇ ಹಾಲಾಹಲವಾಗಿದೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

RELATED TOPICS:
English summary :What is alcohol, what is milk? They just need to fill the treasury

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...