Fri,May03,2024
ಕನ್ನಡ / English

ಗೃಹ ಲಕ್ಷ್ಮಿ ನೋಂದಣಿಗೆ ಹಣ ಕೇಳುವ ಸೈಬರ್ ಸೆಂಟರ್‌ಗಳ ಪರವಾನಗಿ ರದ್ದು | JANATA NEWS

25 Jul 2023
1279

ಬೆಂಗಳೂರು : ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷೆಯ ಐದು ಗ್ಯಾರಂಟಿಗಳಲ್ಲಿ ಪ್ರಮುಖವಾದ 'ಗೃಹಲಕ್ಷ್ಮಿ' ಯೋಜನೆ ಜಾರಿಯಾಗಿದೆ. ಮನೆ ಯಜಮಾನಿಗೆ ಮಾಸಿಕ 2000 ನೀಡುವ ಈ 'ಗೃಹಲಕ್ಷ್ಮಿ' ಯೋಜನೆಗೆ ಆನ್​ಲೈನ್​ ಮೂಲಕ ಈಗಾಗಲೇ ನೋಂದಣಿ ಪ್ರಕ್ರಿಯೆ ಶುರುವಾಗಿದೆ.

ರಾಜ್ಯ ಸರ್ಕಾರದ ಗೃಹ ಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಳ್ಳಲು ಹಣ ಕೇಳುವ ಸೈಬರ್‌ ಸೆಂಟರ್‌ಗಳು ವಿರುದ್ಧ ಸರ್ಕಾರ ಕಟ್ಟಪ್ಪಣೆ ಹೊರಡಿಸಿದೆ. ಯೋಜನೆಗೆ ನೋಂದಾಯಿಸಿಕೊಳ್ಳಲು ಹಣ ಕೇಳಿದ ಸೈಬರ್‌ ಸೆಂಟರ್‌ಗಳ ಪರವಾನಗಿಯನ್ನೇ ರದ್ದುಗೊಳಿಸುವುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ನೋಂದಣಿಗಾಗಿ ಹಣವನ್ನು ಸಂಗ್ರಹಿಸಲಾಗುತ್ತಿದೆ ಎಂಬ ದೂರಗಳು ಬಂದರೆ, ಅಂತಹ ಸೈಬರ್‌ ಸೆಂಟರ್‌ಗಳ ಪರವಾನಗಿಯನ್ನು ರದ್ದುಗೊಳಿಸುತ್ತೇವೆ ಎಂದು ಸಂತೋಷ್‌ ಲಾಡ್‌ ತಿಳಿಸಿದ್ದಾರೆ.

ಗೃಹ ಲಕ್ಷ್ಮಿ ಫಲಾನುಭವಿಗಳ ನೋಂದಣಿಗಾಗಿ ಧಾರವಾಡದ ಮೂರು ಸೈಬರ್ ಕೇಂದ್ರಗಳು ಹಣವನ್ನು ವಸೂಲು ಮಾಡುತ್ತಿದ್ದವು. ಈ ಕುರಿತು ದೂರುಗಳನ್ನು ಸ್ವೀಕರಿಸಿರುವ ಪೊಲೀಸರು ಸೈಬರ್‌ ಕೇಂದ್ರಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮೂರು ಸೈಬರ್ ಕೇಂದ್ರಗಳನ್ನು ಮುಚ್ಚುವಂತೆ ತಹಶೀಲ್ದಾರ್ ಆದೇಶಿಸಿದ್ದಾರೆ.

ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣ ಠಾಣೆ ಪೊಲೀಸರು ಸೈಬರ್‌ ಸೆಂಟರ್‌ಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ಗೃಹ ಲಕ್ಷ್ಮಿ ಯೋಜನೆಗೆ ಫಲಾನುಭವಿಗಳ ನೋಂದಣಿ ಮಾಡಿಸಿ ಅಕ್ರಮವಾಗಿ ಹಣ ಪಡೆಯಲಾಗಿತ್ತು. ದೂರಿನ ಆಧಾರದ ಮೇಲೆ, ಮೂರು ಸೈಬರ್ ಕೇಂದ್ರಗಳ ವಿರುದ್ಧ ಐಟಿ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 420 ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಮೂರು ಕೇಂದ್ರಗಳನ್ನು ಮುಚ್ಚಲು ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.

RELATED TOPICS:
English summary :Cancellation of license of cyber centers asking money for Griha Lakshmi registration

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...