Sat,May04,2024
ಕನ್ನಡ / English

ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಸಚಿವ ಸತೀಶ್ ಜಾರಕಿಹೊಳಿ | JANATA NEWS

26 Jul 2023
1027

ಬೆಂಗಳೂರು : ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ ಇಂದು ದೆಹಲಿಯಲ್ಲಿ ಭೇಟಿ ಮಾಡಿ, ನೆನೆಗುದಿಗೆ ಬಿದ್ದಿರುವ ಕಾಮಗಾರಿ ಸೇರಿದಂತೆ 20 ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದಾರೆ.

ನಿತಿನ್ ಗಡ್ಕರಿ ಭೇಟಿಯಾದ ಬಳಿಕ ಮಾತನಾಡಿದ ಸತೀಶ್ ಜಾರಕಿಹೊಳಿ, ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳ ಬಗ್ಗೆ ಚರ್ಚೆ ಮಾಡಿದ್ದೇನೆ. ಈ ಕುರಿತಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಒಂದು ಒಪ್ಪಂದಕ್ಕೆ ಬಂದಿವೆ ಎಂದರು.

ಶಿರಾಡಿ ಘಾಟ್ ಸುರಂಗ ನಿರ್ಮಾಣ, ಗೋಕಾಕ್ ನಗರದಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣ, ಬೆಳಗಾವಿ ನಗರದ ಹಳೆಯ ಎನ್ಎಚ್-4ನ ಪುಣೆ-ಬೆಂಗಳೂರು ರಸ್ತೆಯಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಸೇರಿದಂತೆ ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಿರುವುದಾಗಿ ಜಾರಕಿಹೊಳಿ ತಿಳಿಸಿದ್ದಾರೆ.

ಗೊಂದಲ ಇರುವ ಬಗ್ಗೆ ನಾವು ಪರಿಹಾರ ಕಂಡುಕೊಂಡಿದ್ದೇವೆ. ಸ್ಪಷ್ಟವಾದ ಪ್ರಸ್ತಾವನೆಯೊಂದಿಗೆ ದೆಹಲಿಗೆ ಮತ್ತೊಮ್ಮೆ ಬರುತ್ತೇವೆ. ಶಿರಾಡಿಘಾಟ್​ನಲ್ಲಿ ಸುರಂಗ ನಿರ್ಮಾಣಕ್ಕೆ ಅರಣ್ಯ ಸಮಸ್ಯೆ ಇದೆ. ಒಂದು ಎಕರೆ ಜಮೀನು ಸಮಸ್ಯೆ ಇರಬಾರದು. ರಾಜ್ಯದಿಂದ ಸ್ಪಷ್ಟ ಪ್ರಸ್ತಾವನೆ ಬೇಕಾಗಿದ್ದು, ಸಿಎಂ ಸಿದ್ಧರಾಮಯ್ಯ ಜತೆ ಚರ್ಚಿಸುತ್ತೇನೆ ಎಂದು ಹೇಳಿದರು.

ಇನ್ನು ರಾಜ್ಯದ 38 ರಾಷ್ಟ್ರೀಯ ಹೆದ್ದಾರಿಗಳು ಅಪ್​ಗ್ರೇಡ್ ಆಗಬೇಕಿದೆ. ಬೆಂಗಳೂರಿನಲ್ಲಿ ಸುರಂಗ ನಿರ್ಮಿಸುವ ಬಗ್ಗೆ ಆಸಕ್ತಿ ವಹಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಪತ್ರ ಕೂಡ ಬರೆದಿದ್ದಾರೆ. ಅಂತಿಮವಾದ ಪ್ರಸ್ತಾವನೆ ಮುಂದಿನ ದಿನಗಳಲ್ಲಿ ಇಡಲಿದ್ದೇವೆ. ಯಾರು ಹಣ ಹೂಡಿಕೆ ಮಾಡಬೇಕೆಂದು ನಿರ್ಧಾರ ಮಾಡಬೇಕು ಎಂದರು.

RELATED TOPICS:
English summary :Union Minister Nitin Gadkari met Minister Satish Jarakiholi

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...