Sun,Apr28,2024
ಕನ್ನಡ / English

ವಿಪಕ್ಷ ನಾಯಕ ಆಯ್ಕೆ ವಿಳಂಬ, ಬಿಜೆಪಿಯವರು ವಿಪಕ್ಷ ನಾಯಕನನ್ನು ನೇಮಿಸದಿರುವುದು ದುರಂತ: ಲಕ್ಷ್ಮಣ್​ ಸವದಿ | JANATA NEWS

31 Jul 2023
1324

ಬೆಳಗಾವಿ : ರಾಷ್ಟ್ರೀಯ ಪಕ್ಷ ಬಿಜೆಪಿಗೆ ಅಧಿವೇಶನ ಮುಗಿದರೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗುತ್ತಿಲ್ಲ. ಇದು ಬಿಜೆಪಿಯ ದುರಂತದ ಕತೆ ಎಂದು ಅಥಣಿ ಶಾಸಕ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ವ್ಯಂಗ್ಯವಾಡಿದ್ದಾರೆ.

ಬೆಳಗಾವಿಯಲ್ಲಿ ಈ ಕುರಿತು ಮಾತನಾಡಿದ ಸವದಿ, ಬಿಜೆಪಿ ಪಕ್ಷಕ್ಕೆ ಯಾರು ರಾಜ್ಯಾಧ್ಯಕ್ಷ ಆಗುತ್ತಾರೆ ಎನ್ನುವುದರ ಅವಶ್ಯಕತೆ ನಮಗಿಲ್ಲ. ಆದರೆ, ದುರ್ದೈವದ ಸಂಗತಿ ಎಂದರೆ, ರಾಷ್ಟ್ರೀಯ ಪಕ್ಷ ಬಿಜೆಪಿಗೆ ಅಧಿವೇಶನ ಮುಗಿದರೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗುತ್ತಿಲ್ಲ. ಇಂತಹದೊಂದು ಬೆಳವಣಿಗೆ ನಡೆದಿರುವುದು ಇತಾಹಸದಲ್ಲೇ ಇದೇ ಮೊದಲು. ಇಂತಹ ಇತಿಹಾಸವನ್ನು ಸೃಷ್ಟಿಸಲು ಬಿಜೆಪಿಯವರಿಂದ ಮಾತ್ರ ಸಾಧ್ಯ ಎಂದು ವ್ಯಂಗ್ಯವಾಡಿದ್ದಾರೆ. ಈ ಮೂಲಕ ಬಿಜೆಪಿ ಹೊಸ ಹೊಸ ಇತಿಹಾಸ ಬರೆಯುವ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.

ಹೊಸ ಸರ್ಕಾರ ರಚನೆಯಾದ ಮೇಲೆ ಶಾಸಕರು ತಮ್ಮ ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಬಳಿ ತಿಳಿಸುವುದು ವಾಡಿಕೆ. ರಾಹುಲ್​ ಗಾಂಧಿ ಹಿರಿಯ ಕಾಂಗ್ರೆಸ್​ ನಾಯಕರ ಸಭೆ ಕರೆದಿದ್ದ ಕಾರಣ ಶಾಸಕಾಂಗ ಪಕ್ಷದ ಸಭೆಯನ್ನು ಮುಂದೂಡಲಾಗಿತ್ತು. ಕಾಂಗ್ರೆಸ್​ನಲ್ಲಿ ಯಾವುದೇ ಅಸಮಾಧಾನವಿಲ್ಲ. ವಿರೋಧ ಪಕ್ಷ ಮಾಡುತ್ತಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ ಎಂದಿದ್ದಾರೆ.

ಲಕ್ಷ್ಮಣ ಸವದಿ ಹಾಗೂ ಜಗದೀಶ್ ಶೆಟ್ಟರ್ ಅವರಿಗೆ ಮುಂಬರುವ ಲೋಕಸಭಾ ಚುನಾವಣಾ ಟಾಸ್ಕ್ ನೀಡಿರುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಅದು ಟಾಸ್ಕ್ ಅಲ್ಲ. ಪಕ್ಷ ನೀಡಿರುವ ಜವಾಬ್ದಾರಿ. ಸಮರ್ಥವಾಗಿ‌ ನಿಭಾಯಿಸುತ್ತೇವೆ. ಆಗಸ್ಟ್‌ 2 ರಂದು ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕರೆದಿರುವ ಸಭೆಗೂ ಹೋಗುತ್ತೇವೆ. ಅಲ್ಲಿ ಕೊಡುವ ಜವಾಬ್ದಾರಿಗಳನ್ನೂ ಸಮರ್ಥವಾಗಿ ನಿಭಾಯಿಸುತ್ತೇವೆ ಎಂದು ತಿಳಿಸಿದರು.

RELATED TOPICS:
English summary :Delay in electing opposition leader, BJP failure to appoint opposition leader is a tragedy: Laxman Savadi

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...