Tue,May07,2024
ಕನ್ನಡ / English

ಸರ್ಕಾರದ ವಿರುದ್ಧ ಅನಗತ್ಯವಾಗಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿದರೆ ಕಠಿಣ ಕ್ರಮ - ಸಿಎಂ ಸಿದ್ದರಾಮಯ್ಯ | JANATA NEWS

01 Aug 2023
1294

ಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿರುದ್ಧ ಅಥವಾ ಯಾವುದೇ ವ್ಯಕ್ತಿಯ ವಿರುದ್ಧ ಅನಗತ್ಯವಾಗಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿದರೆ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು, ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಈ ಕುರಿತು ರಾಜ್ಯ ಮುಖ್ಯಮಂತ್ರಿ ಅವರ ಅಧಿಕೃತ ಖಾತೆಯಿಂದ ಸರಣಿ ಟ್ವೀಟ್ ಮಾಡಿದ್ದಾರೆ, "ಉಡುಪಿ ಕಾಲೇಜೊಂದರಲ್ಲಿ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುವೋ ಮೋಟೋ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಎಫ್.ಐ.ಆರ್ ರಿಜಿಸ್ಟರ್ ಆಗಿದೆ. ತನಿಖೆಯನ್ನು ಡಿ.ವೈ.ಎಸ್.ಪಿ ಮಟ್ಟದ ಅಧಿಕಾರಿ ಮಾಡುತ್ತಿದ್ದು, ಪ್ರಕರಣವನ್ನು ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಉದ್ಭವವಾಗುವುದಿಲ್ಲ. ತನಿಖೆಯಾಗಿ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು.

ರಾಜ್ಯದಲ್ಲಿ ನೈತಿಕ ಪೊಲೀಸ್ ಗಿರಿ ಯಾರೇ ಮಾಡಿದರೂ ಅಂಥವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲಾಗುವುದು. ಯಾರೊಬ್ಬರೂ ಕಾನೂನನ್ನು ಕೈಗೆ ತೆಗೆದುಕೊಳ್ಳುವಂತಿಲ್ಲ ಎಂದು ಪೊಲೀಸರಿಗೆ ಸೂಚಿಸಿದ್ದೇನೆ.
ನಾಡಿನ ಜನರಿಗೆ ಸುರಕ್ಷಿತ, ನೆಮ್ಮದಿಯ ವಾತಾವರಣ ಕಲ್ಪಿಸುವುದು ನಮ್ಮ ಕರ್ತವ್ಯ. ಇದಕ್ಕೆ ಅಡ್ಡಿಪಡಿಸುವವರು ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ.

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಿಬಿಐ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ. ಅವರ ಪೋಷಕರು ಹಾಗೂ ಸಾಮಾಜಿಕ ಹೋರಾಟಗಾರರು ಈ ಪ್ರಕರಣದ ಮರುತನಿಖೆಗೆ ಒತ್ತಾಯಿಸಿದ್ದಾರೆ. ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬಹುದೆಂದು ಚರ್ಚಿಸಿ ತೀರ್ಮಾನ ಮಾಡುತ್ತೇವೆ. ನ್ಯಾಯಾಲಯದ ತೀರ್ಪನ್ನು ಓದಿ, ನಂತರ ಮೇಲ್ಮನವಿ ಸಲ್ಲಿಸಲು ಅವಕಾಶವಿದ್ದರೆ ಸಲ್ಲಿಸಲಾಗುವುದು.

ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿರುದ್ಧ ಅಥವಾ ಯಾವುದೇ ವ್ಯಕ್ತಿಯ ವಿರುದ್ಧ ಅನಗತ್ಯವಾಗಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿದರೆ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ರಚನಾತ್ಮಕ ಟೀಕೆ, ಟಿಪ್ಪಣಿಗಳಿಗೆ ನಾವು ಮುಕ್ತರಿದ್ದೇವೆ, ಆದರೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದುರುಪಯೋಗ ಪಡಿಸಿಕೊಂಡು ಒಬ್ಬ ವ್ಯಕ್ತಿಯ ಅಥವಾ ಆತನ ಕುಟುಂಬದವರ ಮೇಲೆ ಸುಳ್ಳು ಸುದ್ದಿ ಹಬ್ಬಿಸುವುದು, ವೈಯಕ್ತಿಕವಾಗಿ ತೇಜೋವಧೆ ಮಾಡುವುದು ಇಂತದ್ದನ್ನು ಸಹಿಸುವುದಿಲ್ಲ", ಎಂದು ಟ್ವೀಟ್ ಮಾಡಲಾಗಿದೆ.

English summary : Harsh action will be taken if fake news is spread unnecessarily against Govt - CM Siddaramaiah

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...