Sun,May05,2024
ಕನ್ನಡ / English

ಬ್ರ‍್ಯಾಂಡ್ ಬೆಂಗಳೂರು : ಸ್ವಚ್ಚ ಬೆಂಗಳೂರು ವಿಷಯ ಕುರಿತು ವಿಚಾರ ಸಂಕಿರಣ | JANATA NEWS

03 Aug 2023
1568

ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದ ಸೆನೆಟ್ ಹಾಲ್ ನಲ್ಲಿ ಇಂದು ನಡೆದ ವಿಚಾರ ಸಂಕಿರಣದಲ್ಲಿ ನಾಗರಿಕರಿಂದ ಬಂದಿರುವಂತಹ ಸಲಹೆಗಳ ಸಂಬಂಧ ಪರಿಸರ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಪ್ರಕಾಶ್ ರವರು ಪ್ರಾತ್ಯಕ್ಷಿಕೆಯ ಮೂಲಕ ವಿವರಿಸಿದರು. ಇಂದು ನಡೆದಂತಹ ವಿಚಾರ ಸಂಕಿರಣದಲ್ಲಿ ಬಂದತಹ ಸಲಹೆಗಳು ಹಾಗೂ ನಾಗರಿಕರಿಂದ ಈಗಾಗಲೇ ಬಂದಿರುವಂತಹ ಎಲ್ಲಾ ಸಲಹೆಗಳನ್ನು ಕ್ರೋಢೀಕರಿಸಿ ಅಧ್ಯಯನ ನಡೆಸಿ ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ.

ಬ್ರ‍್ಯಾಂಡ್ ಬೆಂಗಳೂರಿನ ಸಲುವಾಗಿ 7 ವಿಭಾಗಗಗಳಲ್ಲಿ ಬಂದಿರುವಂತಹ ಸಾರ್ವಜನಿಕರ ಸಲಹೆಗಳನ್ನು ಈಗಾಗಲೇ ವಿಂಗಡಿಸಿದ್ದು, ಸ್ವಚ್ಚ ಬೆಂಗಳೂರು ವಿಭಾಗದ ಬಗ್ಗೆ 10,479 ಸಲಹೆಗಳು ಬಂದಿದ್ದು, ಬೆಂಗಳೂರು ವಿಶ್ವವಿದ್ಯಾಲಯ ಪರಿಸರ ವಿಜ್ಞಾನ ವಿಭಾಗದದಿಂದ ಬಂದಿರುವಂತಹ ಎಲ್ಲಾ ಸಲಹೆಗಳನ್ನು ಬೇರ್ಪಡಿಸಿ ವರದಿಯನ್ನು ಸಿದ್ದಪಡಿಸಲಿದೆ.

ಬೆಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟರ್ ಶೇಖ್ ಲತೀಫ್ ಮಾತನಾಡಿ, ಬ್ರ‍್ಯಾಂಡ್ ಬೆಂಗಳೂರು ಯೋಜನೆಯಡಿ ಸ್ವಚ್ಛ ಬೆಂಗಳೂರು ವಿಭಾಗಕ್ಕೆ ಬೆಂಗಳೂರು ವಿಶ್ವವಿದ್ಯಾಲಯವನ್ನು ಶೈಕ್ಷಣಿಕ ಪಾಲುದಾರರನ್ನಾಗಿ ಮಾಡಿದ್ದು, ಪರಿಸರ ವಿಜ್ಞಾನ ವಿಭಾಗದಿಂದ ಸ್ವಚ್ಚ ಬೆಂಗಳೂರು ವಿಭಾಗಗಕ್ಕೆ ಬಂದಂತಹ ಸಲಹೆಗಳನ್ನು ಈಗಾಗಲೇ ವಿಂಗಡಣೆ ಮಾಡಲಾಗಿದೆ. ಇಂದು ನಡೆದ ವಿಚಾರ ಸಂಕಿರಣದಲ್ಲಿ ಬಂದಂತಹ ಸಲಹೆಗಳನ್ನು ಒಟ್ಟುಗೂಡಿಸಿ ವರದಿಯನ್ನು ತಯಾರಿಸಿ ಸಲ್ಲಿಸಲಾಗುವುದು ಎಂದು ಹೇಳಿದರು.

ನಗರದಲ್ಲಿ ಘನತ್ಯಾಯ ನಿರ್ವಹಣೆ ಪ್ರಕ್ರಿಯೆ ಪಾಲಿಕೆಯ ಕರ್ತವ್ಯ ಮಾತ್ರವಲ್ಲ, ನಗರದಲ್ಲಿರುವ ಎಲ್ಲಾ ವರ್ಗ/ನಾಗರಿಕರ ಕರ್ತವ್ಯವಾಗಿದ್ದು, ಎಲ್ಲರೂ ತಮ್ಮ-ತಮ್ಮ ಜವಾಬ್ದಾರಿಗಳನ್ನು ಅರಿತು ಮೂಲದಲ್ಲಿಯೇ ಸ್ವಚ್ಛತೆ ಕಾಪಾಡಿದರೆ ಸ್ವಚ್ಛ ಬೆಂಗಳೂರನ್ನಾಗಿಸಲು ಸಾಧ್ಯ ಎಂದರು.

ನಗರದಲ್ಲಿ ಮನೆಯಲ್ಲಿ ಉತ್ಪತ್ತಿಯಾಗುವ ಕಸವನ್ನು ರಸ್ತೆ ಬದಿ, ಖಾಲಿ ಜಾಗದಲ್ಲಿ ಬಿಸಾಡುವ ಸಂಖ್ಯೆ ಹೆಚ್ಚಿದೆ. ಅದನ್ನು ಪಾಲಿಕೆ ವತಿಯಿಂದ ಸ್ವಚ್ಛ ಮಾಡುತ್ತಾರೆ. ರಸ್ತೆಬದಿ ತ್ಯಾಜ್ಯ ಬಿಸಾಡುವುದನ್ನು ಬಿಡಬೇಕು. ಇದರ ಬಗ್ಗೆ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.

ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ಸಂಸ್ಥೆಯ ಮುಖ್ಯ ಪ್ರಧಾನ ಅಭಿಯಂತರರಾದ ಬಸವರಾಜ್ ಕಬಾಡೆ ರವರು ಮಾತನಾಡಿ, ಬೆಂಗಳೂರು ನಗರವನ್ನು ಬ್ರ್ಯಾಂಡ್ ಬೆಂಗಳೂರನ್ನಾಗಿ ರೂಪಿಸುವ ಸಲುವಾಗಿ 7 ವಿಭಾಗಗಳನ್ನಾಗಿ ವಿಗಂಡಿಸಿದ್ದು, ಅದರಲ್ಲಿ ಸ್ವಚ್ಛ ಬೆಂಗಳೂರು ವಿಭಾಗದ ಅಭಿವೃದ್ಧಿಗಾಗಿ ಬೆಂಗಳೂರು ವಿಶ್ವವಿದ್ಯಾಲಯದೊಂದಿಗೆ ಶೈಕ್ಷಣಿಕ ಪಾಲುದಾರಿಕೆ ಮಾಡಿಕೊಂಡು ಸ್ವಚ್ಛ ಬೆಂಗಳೂರು ವಿಭಾಗಕ್ಕೆ ನಾಗರಿಕರಿಂದ ಬಂದಂತಹ ಸಲಹೆಗಳನ್ನು ಕ್ರೋಢೀಕರಿಸಿ ವರದಿಯನ್ನು ತಯಾರಿಸಿ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲಾಗುವುದು ಎಂದು ಹೇಳಿದರು.

ನಗರದಲ್ಲಿ ಘನತ್ಯಾಜ್ಯ ವಿಭಾಗದಲ್ಲಿ ಸಮಗ್ರ ಬದಲಾವಣೆಗಾಗಿ ಸಾಕಷ್ಟು ಕಾರ್ಯರೂಪಗಳನ್ನು ಹಮ್ಮಿಕೊಳ್ಳಲಾಗಿದೆ. ಸ್ವಚ್ಛ ಬೆಂಗಳೂರು ಕುರಿತಾಗಿ ವೆಬ್ ಸೈಟ್ ನಲ್ಲಿ ನಾಗರಿಕರಿಂದ ಸಲಹೆಗಳನ್ನು ಪಡೆಯಲಾಗಿದ್ದು, ಅದರಂತೆ ಸ್ವಚ್ಛ ಬೆಂಗಳೂರಿಗೆ ಸಂಬಂಧಿಸಿದಂತೆ 10 ಸಾವಿರಕ್ಕೂ ಹೆಚ್ಚು ಸಲಹೆಗಳು ಬಂದಿವೆ. ಅದನ್ನೆಲ್ಲಾ ಬೆಂಗಳೂರು ವಿಶ್ವವಿದ್ಯಾಲಯದ ಪರಿಸರ ವಿಜ್ಞಾನದ ವಿಭಾಗದಿಂದ ಕ್ರೋಢೀಕರಿಸಿ ಅಧ್ಯಯನ ನಡೆಸಿ ಬಂದಿರುವಂತಹ ಸಲಹೆಗಳನ್ನು ವಿಭಾಗಗಳಾಗಿ ಬೇರ್ಪಡಿಸಿ ಅಂತಿಮ ವರದಿಯನ್ನು ಸಿದ್ದಪಡಿಸಿದ ಬಳಿಕ ಎಲ್ಲಾ ಅಂಶಗಳನ್ನು ವೈಜ್ಞಾನಿಕವಾಗಿ ಅಳವಡಿಸಿಕೊಳ್ಳಲು ಯೋಜನೆ ರೂಪಿಸಲಾಗುವುದೆಂದು ತಿಳಿಸಿದರು.

ನಗರದಲ್ಲಿ ಸುಮಾರು 1.4 ಕೋಟಿ ಲಕ್ಷ ಜನಸಂಖ್ಯೆಯಿದ್ದು, ಪ್ರತಿನಿತ್ಯ 5,500 ಮೆಟ್ರಿಕ್ ಟನ್ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ವೈಜ್ಞಾನಿಕವಾಗಿ ತ್ಯಾಜ್ಯವನ್ನು ವಿಲೇವಾರಿ ಮಾಡದಿದ್ದಲ್ಲಿ ಮುಂದಿನ 15 ವರ್ಷಗಳಲ್ಲಿ 12,000 ಮೆ.ಟ ಉತ್ಪತ್ತಿಯಾಗಲಿದೆ. ಆದ್ದರಿಂದ ನಗರದಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಒಣ ತ್ಯಾಜ್ಯ ಸಂಗ್ರಹಣಾ ಘಟಕ, 7 ತ್ಯಾಜ್ಯ ಸಂಸ್ಕರಣಾ ಘಕಟಕ, ವೇಸ್ಟ್ ಟು ಎನರ್ಜಿ ಘಟಕ, ಬಯೋ ಸಿ.ಎನ್.ಜಿ ಸೇರಿದಂತೆ ಮೂಲದಲ್ಲಿಯೇ ಸಂಸ್ಕರಣೆ ಮಾಡುವುದರಿಂದ ತ್ಯಾಜ್ಯ ಸಮಸ್ಯೆಯನ್ನು ಬಗೆಹರಸಿಬಹುದಾಗಿದೆ ಎಂದು ಹೇಳಿದರು.

ಬ್ರ್ಯಾಂಡ್ ಬೆಂಗಳೂರು ಅಡಿ ಸ್ವಚ್ಛ ಬೆಂಗಳೂರು ವಿಭಾಗದಲ್ಲಿ ನಾಗರಿಕರಿಂದ ಬಂದಿರುವಂತಹ ಸಲಹೆಗಳಿಂದ ತಿಳಿದ ಪ್ರಮುಖ ಅವಲೋಕನಗಳು:

• ಮೂಲದಲ್ಲಿಯೇ ತ್ಯಾಜ್ಯವನ್ನು ವಿಂಗಡಿಸುವುದು.
• ತ್ಯಾಜ್ಯದಿಂದ ವೇಸ್ಟ್ ಟು ಎನರ್ಜಿ ಯಾಗಿ ಪರಿವರ್ತಿಸುವುದು.
• ಘನತ್ಯಾಜ್ಯ ನಿರ್ವಹಣೆಯನ್ನು ಕೇಂದ್ರೀಕೃತ ಮತ್ತು ವಿಕೇಂದ್ರೀಕೃತ ಪದ್ದತಿ ಅಳವಡಿಸಿಕೊಳ್ಳುವುದು.
• ತ್ಯಾಜ್ಯ ವಿಲೇವಾರಿಯ ಬಗ್ಗೆ ಯುವ ಪೀಳಿಗೆ ಮತ್ತು ಮಕ್ಕಳಲ್ಲಿ ಜಾಗೃತಿ ಮತ್ತು ಶಿಕ್ಷಣ ನೀಡುವುದು.

ಇಂದಿನ ವಿಚಾರ ಸಂಕಿರಣದಲ್ಲಿ ಬಂದಂತಹ ಪ್ರಮುಖ ಸಲಹೆಗಳು:

• ತ್ಯಾಜ್ಯ ಸಂಸ್ಕರಣಾ ಘಟಕಗಳನ್ನು ಉನ್ನತೀಕರಿಸಿ ವೈಜ್ಞಾನಿಕವಾಗಿ ನಿರ್ವಹಣೆ ಮಾಡುವುದು.
• ಘನತ್ಯಾಜ್ಯ ನಿರ್ವಹಣೆಯಲ್ಲಿ ವಿಕೇಂದ್ರಿಕರಣ ಮಾಡಿ ವಿಲೇವಾರಿ ಮಾಡುವುದು.
• ಡೋರ್ ಟು ಡೋರ್ 100% ತ್ಯಾಜ್ಯ ವಿಂಗಡಣೆ ಮಾಡುವ ಸಲುವಾಗಿ ಲಿಂಕ್ ವರ್ಕರ್ಸ್ ಗಳನ್ನು ಸರಿಯಾಗಿ ಬಳಸಿಕೊಳ್ಳುವುದು.
• ವೇಸ್ಟ್ ಟು ಎನರ್ಜಿ ಘಟಕವನ್ನು ಸ್ಥಾಪಿಸುವುದು.
• ಬಯೋ ಸಿ.ಎನ್.ಜಿ ಸ್ಥಾಪಿಸುವುದು.
• ಆಟೋ ಟಿಪ್ಪರ್ ಗಳ ಮೇಲೆ ಸರಿಯಾಗಿ ನಿಗಾವಹಿಸಿ ಮೇಲ್ವಿಚಾರಣೆ ನಡೆಸುವುದು. ಎಲ್ಲಾ ಆಟೋ ಟಿಪ್ಪರ್ ಗಳಿಗೂ ಜಿಪಿಎಸ್ ಅಳವಡಿಸುವುದು.
• ಪ್ರತಿ ವಲಯದಲ್ಲೂ ಕಂಟ್ರೋಲ್ ಕಮಾಂಡ್ ಸೆಂಟರ್ ಸ್ಥಾಪಿಸಿ ಮೇಲ್ವಿಚಾರಣೆ ಮಾಡಬೇಕು.
• ನಗರದ ಎಲ್ಲಾ ಮನೆಗಳಲ್ಲೂ ತ್ಯಾಜ್ಯ ಸಂಸ್ಕರಣೆ ಮಾಡುವ ಪದ್ಧತಿ ಜಾರಿಯಾಗೊಳಿಸಬೇಕು.
• ಒಣ ತ್ಯಾಜ್ಯ ಸಂಗ್ರಹಣಾ ಘಟಕಗಳು ಪ್ರತಿ ವಾರ್ಡ್ ನಲ್ಲೂ ತೆರೆಯುವುದು.
• ಘನತ್ಯಾಜ್ಯ ನಿರ್ವಹಣೆ ಬಗ್ಗೆ ಯುವಕರು ಮತ್ತು ಮಕ್ಕಳಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು.
• ನಗರದಲ್ಲಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಸಂಪೂರ್ಣವಾಗಿ ನಿಷೇಧಿಸುವುದು.
• ಮೈಕ್ರೋ ಪ್ಲಾನ್ 2016 ರಲ್ಲಿ ಮಾಡಿದ್ದು ಹಳೆಯದಾಗಿದೆ. ಕಳೆದ 8 ವರ್ಷಗಳಿಂದ ಕುಟುಂಬಗಳ ಸಂಖ್ಯೆ ಹೆಚ್ಚಿರುವುದರಿಂದ ಅದನ್ನು ಪರಿಷ್ಕರಿಸಬೇಕು.
• ತ್ಯಾಜ್ಯವನ್ನು ಸರಿಯಾದ ಮಾದರಿಯಲ್ಲಿ ವಿಂಗಡಣೆ ಮಾಡುವುದು.
• ಸ್ಮಾರ್ಟ್ ವೇಸ್ಟ್ ಮ್ಯಾನೇಜ್ಮೆಂಟ್ ವ್ಯವಸ್ಥೆ ಜಾರಿಗೊಳಿಸುವುದು.
• ಸಿ & ಡಿ ವೇಸ್ಟ್ ಸಂಗ್ರಹಿಸುವ ಪ್ರಕ್ರಿಯೆ ಸಮರ್ಪಕವಾಗಿ ಜಾರಿಯಾಗಬೇಕು. OLA ರೀತಿಯಲ್ಲಿಯೇ ತಂತ್ರಾಂಶವನ್ನು ಸಿದ್ದಪಡಿಸಿಕೊಂಡು ವಾಹನಗಳನ್ನು ನೊಂದಾಯಿಸಿಕೊಂಡು ಮನೆಯಿಂದ ಸಿ & ಡಿ ತ್ಯಾಜ್ಯವನ್ನು ತೆರವುಗೊಳಿಸುವ ವ್ಯವಸ್ಥೆ ಮಾಡಬೇಕು.
• ಸಾರ್ವಜನಿಕ ಶೌಚಾಲಯಗಳು ಹೆಚ್ಚಿಸುವ ಜೊತೆಗೆ ಸರಿಯಾಗಿ ನಿರ್ವಹಣೆ ಮಾಡಬೇಕು.
• ಘನತ್ಯಾಜ್ಯ ನಿರ್ವಹಣೆಗೆ ಸರಿಯಾದ ಮೂಲಸೌಕರ್ಯದ ವ್ಯವಸ್ಥೆ ಮಾಡಬೇಕು.
• ಪ್ರಮುಖ ರಸ್ತೆಗಳಲ್ಲಿ ತ್ಯಾಜ್ಯ ಬಿನ್ ಗಳನ್ನು ಅಳವಡಿಸಿ, ಅದರಲ್ಲಿಯೇ ತ್ಯಾಜ್ಯವನ್ನು ಬಿಸಾಡುವ ಪದ್ದತಿಯನ್ನು ರೂಢಿಸಿಕೊಳ್ಳಬೇಕು.
• ಪುನರ್ ಬಳಕೆ ಮಾಡಬಹುದಾದ ವಸ್ತು/ಉತ್ಪನ್ನಗಳನ್ನು ಬಿಸಾಡದೆ ಸರಿಯಾದ ಅನುಕ್ರಮದಲ್ಲಿ ಪುನರ್ ಬಳಕೆ ಮಾಡುವ ವ್ಯವಸ್ಥೆ ಜಾರಿಗೊಳಿಸುವುದು.
• ಪ್ರಸ್ತುತ 1.40 ಕೋಟಿ ಜನಸಂಖ್ಯೆಗೆ ಕೇವಲ 15000 ಪೌರಕಾರ್ಮಿಕರು ಮಾತ್ರ ಕಾರ್ಯನಿರ್ವಹಿಸುತ್ತಿದ್ದು, ಅವಶ್ಯಕತೆಯ ಆಧಾರದ ಮೇಲೆ ಪೌರಕಾರ್ಮಿಕರನ್ನು ನೇಮಿಸುವುದು.
• ಸ್ವಚ್ಛ ಬೆಂಗಳೂರು ಅಡಿಯಲ್ಲಿ ಬ್ರಾಂಡ್ ಬೆಂಗಳೂರಿಗೆ ಬ್ರಾಂಡ್ ಅಂಬಾಸಿಡರ್ ಆಗಿ ಪೌರಕಾರ್ಮಿಕರ ಪ್ರತಿನಿಧಿಯನ್ನು ಸೇರಿಸಿ‌
• ಅಪಾಯಕಾರಿ ಮತ್ತು ಪ್ರಾಣಿ ತ್ಯಾಜ್ಯವನ್ನು ಸರಿಯಾಗಿ ನಿರ್ವಹಿಸಿ.

ಸಭೆಯಲ್ಲಿ ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತರಾದ ಧರ್ಮಪಾಲ್, ಪರಿಸರ ವಿಜ್ಞಾನ ವಿಭಾಗದ ಸಿಬ್ಬಂದಿ, ವಿದ್ಯಾರ್ಥಿಗಳು ಸೇರಿದಂತೆ ಪಾಲಿಕೆ ಘನತ್ಯಾಜ್ಯ ವಿಭಾಗದ ಅಧಿಕಾರಿ/ಸಿಬ್ಬಂದಿ, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು, ಎನ್.ಜಿ.ಒಗಳು ಉಪಸ್ಥಿತರಿದ್ದರು.

English summary : Brand Bangalore: Seminar on Clean Bangalore

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...