Sun,Apr28,2024
ಕನ್ನಡ / English

ನೈಸ್ ಅಕ್ರಮಗಳ ದಾಖಲೆಗಳನ್ನು ಪ್ರಧಾನಿ ಮೋದಿಗೆ ಕೊಡುತ್ತೇನೆ, ಎಚ್.ಡಿ.ಕುಮಾರಸ್ವಾಮಿ | JANATA NEWS

05 Aug 2023
1412

ಬೆಂಗಳೂರು : ನೈಸ್ ರಸ್ತೆ ಮಾಡುವ ಸಂದರ್ಭದಲ್ಲಿ ರೈತರ ಜಮೀನನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಇದೊಂದು ದೊಡ್ಡ ಹಗರಣವಾಗಿದ್ದು, ಈ ಬಗ್ಗೆ ದಾಖಲೆಗಳನ್ನು ಸಂಗ್ರಹಿಸಿದ್ದೇನೆ. ನೈಸ್ ಹಗರಣದ ದಾಖಲೆಗಳನ್ನು ದೆಹಲಿಯಲ್ಲಿ ಬಿಡುಗಡೆ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರೈತರ ಹೆಸರಿನಲ್ಲಿ ಕೋಟಿ ಕೋಟಿ ಲೂಟಿ ಹೊಡೆದಿದ್ದೀರಿ. ಆ ಎಲ್ಲ ದಾಖಲೆ ಸಂಗ್ರಹ ಮಾಡುತ್ತಿದ್ದೇನೆ. ಅಕ್ರಮಗಳ ಕುರಿತ ಎಲ್ಲ ದಾಖಲೆಗಳನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಖುದ್ದು ಭೇಟಿಯಾಗಿ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ಪ್ರಧಾನಿ, ಗೃಹ ಸಚಿವರ ಭೇಟಿಯ ನಂತರ ಈ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯ ಮಾಡುತ್ತೇನೆ. ರಾಜ್ಯ ವಿಧಾನಸಭೆಯಲ್ಲಿ ಈ ಬಗ್ಗೆ ಎಲ್ಲ ಮಾಹಿತಿ ಬಿಚ್ಚಿಡುವ ಪ್ರಯತ್ನ ಮಾಡಿದೆ. ಅದಕ್ಕೆ ಅವಕಾಶ ಸಿಗಲಿಲ್ಲ. ರಾಜ್ಯದ ಹಿತ ಮತ್ತು ಈ ಯೋಜನೆಗಾಗಿ ಭೂಮಿ ಕಳೆದುಕೊಂಡ ರೈತರಿಗೆ ನ್ಯಾಯ ಕೊಡಿಸುವ ದೃಷ್ಟಿಯಿಂದ ನೇರವಾಗಿ ಪ್ರಧಾನಿ ಅವರನ್ನೇ ಭೇಟಿ ಆಗಲಿದ್ದೇನೆ. ಒಂದೆರಡು ದಿನದಲ್ಲಿ ಪ್ರಧಾನಿಗಳು ಹಾಗೂ ಗೃಹ ಸಚಿವರ ಭೇಟಿಗೆ ಸಮಯಾವಕಾಶ ಕೋರಲಾಗುವುದು ಎಂದು ಹೇಳಿದರು.

ಬಿಜೆಪಿಯವರು ಭ್ರಷ್ಟಾಚಾರವನ್ನು ಮಟ್ಟ ಹಾಕಬೇಕು ಎಂದಿದ್ದರೆ ನೈಸ್ ವಿಚಾರದಲ್ಲಿ ಯಾವ ರೀತಿ ತನಿಖೆ ಮಾಡುತ್ತಾರೆಂದು ಕಾದು ನೋಡುತ್ತೇನೆ. ಕಳೆದ ಮೂವತ್ತು ವರ್ಷಗಳಿಂದ ಯೋಜನೆಯೂ ಪೂರ್ಣಗೊಂಡಿಲ್ಲ. ಜಮೀನುಗಳ ದುರುಪಯೋಗಗಳೂ ಕಡಿಮೆಯಾಗಿಲ್ಲ. ಈ ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದ ವೇಳೆ ಸಿಂಗಾಪುರ ಪ್ರವಾಸದಲ್ಲಿದ್ದೆ. ಆಗ ನೈಸ್ ಸಂಸ್ಥೆಯ ಮುಖ್ಯಸ್ಥ ಅಶೋಕ್ ಖೇಣಿ ನನ್ನನ್ನು ಅಲ್ಲಿಗೇ ಹುಡುಕಿಕೊಂಡು ಬಂದಿದ್ದರು. ಆದರೆ ನಾನು ಯಾವುದೇ ವಿಚಾರಗಳಿದ್ದರೂ ವಿಧಾನಸೌಧಕ್ಕೆ ಬಂದು ಚರ್ಚೆ ಮಾಡಿ, ಇಲ್ಲಿ ಬೇಡ ಎಂದು ನಾನು ಬೈದು ಕಳುಹಿಸಿದ್ದೆ ಎಂದು ಹೇಳಿದರು.

ನೈಸ್ ಹಗರಣದ ಕುರಿತು ವರದಿ ನೀಡಿರುವ ಕಾಂಗ್ರೆಸ್​ನ ಹಿರಿಯ ಶಾಸಕ ಟಿ.ಬಿ.ಜಯಚಂದ್ರ ಅವರಿಗೆ ರೈತರ ಹೆಸರಿನಲ್ಲಿ ಬೆದರಿಕೆ ಹಾಕಿದವರು ಯಾರು?. ಜಯಚಂದ್ರ ಅವರೇ ಯಾವುದೋ ಸ್ಥಾನಕ್ಕಾಗಿ ಮೌನವಾಗಿರಬೇಡಿ, ಯಾರು ಬೆದರಿಕೆ ಹಾಕಿದ್ದಾರೆ ಎಂಬುದನ್ನು ರಾಜ್ಯದ ಜನತೆ ಮುಂದೆ ಹೇಳಿ. ಬಡ ರೈತರ ಭೂಮಿ ಉಳಿಸುವುದಕ್ಕೆ ಪ್ರಾಮಾಣಿಕ ಕೆಲಸ ಮಾಡಿದ್ದೀರಿ. ಪಕ್ಷ ರಾಜಕೀಯ ಸ್ಥಾನಮಾನಕ್ಕಿಂತ ನಾಡಿನ ಜನತೆಯ ಬದುಕಿನ ಪ್ರಶ್ನೆ ಮುಖ್ಯ ಎಂದು ಹೆಚ್​​ಡಿಕೆ ಹೇಳಿದರು.

ನೈಸ್ ಯೋಜನೆಯಲ್ಲಿ ಅಕ್ರಮಗಳ ಸರಣಿಯೇ ನಡೆದಿದೆ. ಯೋಜನೆಗೆ ಸ್ವಾಧೀನಕ್ಕೆ ಗುರುತಿಸಲಾಗಿದ್ದ, ಪ್ರಾಥಮಿಕ ಅಧಿಸೂಚನೆ ಮಾಡಲಾಗಿದ್ದ ಭೂಮಿಯನ್ನೇ ಖರೀದಿ ಮಾಡಿದ್ದ ಆ ಮಹಾನುಭಾವರಿಗೆ ಇದೆಲ್ಲವನ್ನೂ ಜೀರ್ಣ ಮಾಡುವ ತಾಕತ್ತು ಇದೆ. ಅಧಿಸೂಚನೆ ಆಗಿದ್ದ ಬಡ ರೈತರ ಭೂಮಿಯನ್ನೇ ಸ್ವಾಹಾ ಮಾಡಿದವರು ಇಂದು ಬ್ರ್ಯಾಂಡ್ ಬೆಂಗಳೂರು ಭಜನೆ ಮಾಡುತ್ತಿದ್ದಾರೆ. ಎಲ್ಲಿ ಯಾರ ಭೂಮಿ ಹಿಡಿದುಕೊಳ್ಳೋಣ ಎಂದು ಹೊಂಚು ಹಾಕುವವರಿಂದ ಬೆಂಗಳೂರು ಉದ್ಧಾರ ಸಾಧ್ಯವೇ? ಎಂದು ಪ್ರಶ್ನಿಸಿದರು.

ನಾನು ಹಿಟ್ ಅಂಡ್ ರನ್ ಮಾಡುವ ಜಾಯಮಾನದ ವ್ಯಕ್ತಿಯಲ್ಲ, ಕೆಲವೊಂದು ವಿಚಾರವನ್ನು ಪ್ರಸ್ತಾಪ ಮಾಡುವುದು ಹುಡುಗಾಟಿಕೆಗೆ ಅಲ್ಲ. ಸಿಎಂ ಸಿದ್ದರಾಮಯ್ಯ ಅವರು ನನ್ನದು ಹಿಟ್ ಅಂಡ್ ರನ್ ಎಂದಿದ್ದಾರೆ. ಹಿಟ್ ಅಂಡ್ ರನ್ ಕಾಂಗ್ರೆಸ್ ನಾಯಕರು ಹಿಂದೆ 40 ಪರ್ಸೆಂಟ್, ಪೇ ಸಿಎಂ ಆರೋಪ ಮಾಡಿದ್ದರು. ಒಂದಕ್ಕಾದರೂ ದಾಖಲೆ ಬಿಡುಗಡೆ ಮಾಡಿದ್ದಾರಾ?, ಈಗ ನಿಮ್ಮದೇ ಸರ್ಕಾರವಿದೆ ದಾಖಲೆ ಏಕೆ ಬಿಡುಗಡೆ ಮಾಡಿಲ್ಲ ಎಂದು ತೀವ್ರ ವಾಗ್ದಾಳಿ ನಡೆಸಿದರು.

RELATED TOPICS:
English summary :I will give the documents of Nice irregularities to PM Modi, HD Kumaraswamy

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...