Thu,May02,2024
ಕನ್ನಡ / English

ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ - ಎಚ್.ಡಿ.ಕೆ | JANATA NEWS

08 Aug 2023
1313

ಬೆಂಗಳೂರು : ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ವಿರುದ್ಧ ಮಂಡ್ಯ ಜಿಲ್ಲೆಯ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿರುವುದು ನಕಲಿ ಪತ್ರ ಎಂದು ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ತೀವ್ರವಾಗಿ ಖಂಡಿಸಿದ್ದಾರೆ.

ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಿಂದ ತೀವ್ರ ಟೀಕೆ ನಡೆಸಿರುವ ನಾಜಿ ಸಿಎಂ ಅವರು, "ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ!! ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ 'ಸಿದ್ದಕಲೆ' ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ.

ನಕಲಿ ಪತ್ರ ಎಂದಾದರೆ ರಾಜ್ಯಪಾಲರ ಕಾರ್ಯಾಲಯ ನಕಲಿ (!?) ಪತ್ರದ ಮೇರೆಗೆ ಕ್ರಮ ಜರುಗಿಸಿ ಎಂದು ಷರಾ ಬರೆದಿದೆಯೇ? ಸುಳ್ಳಿನ ಪತ್ರಕ್ಕೆ ಮಾನ್ಯ ರಾಜ್ಯಪಾಲರು ಸ್ಪಂದಿಸಿದ್ದಾರೆಯೇ? ರಾಜಧರ್ಮದ ಪ್ರವಚನಕಾರರೇ ರಾಜಭವನದ ಪಾವಿತ್ರ್ಯವನ್ನೇ ಶಂಕಿಸುವುದು ತರವೇ? ಸ್ವಯಂ ಘೋಷಿತ ನಕಲಿ ಸಂವಿಧಾನ ತಜ್ಞನಿಗೆ ಇದು ಭೂಷಣವಲ್ಲ.

ಕಂಡೋರ ಭುಜದ ಮೇಲೆ ಬಂದೂಕಿಟ್ಟು ಇನ್ನೊಬ್ಬರ ರಾಜಕೀಯ ಜೀವನ ಎತ್ತಿಬಿಡುವ ನಿಮ್ಮಂಥ 'ಎತ್ತುವಳಿ ಗಿರಾಕಿ'ಗೆ ನಕಲಿಪತ್ರಗಳ ಸೃಷ್ಟಿ ಬೆಣ್ಣೆ ಕಡಿದಷ್ಟೇ ಸಲೀಸು. ಮತ್ತೊಬ್ಬರ ಶ್ರಮದ ಬೆವರೇ ನಿಮ್ಮ ಸ್ವಾರ್ಥ ರಾಜಕಾರಣಕ್ಕೆ ಹವಿಸ್ಸು.

ನಿಮ್ಮ ಸಚಿವರ ವಿರುದ್ಧ ನಿಮ್ಮ ಕಾಂಗ್ರೆಸ್ ಶಾಸಕರೇ ಬರೆದ ಪತ್ರವನ್ನೇ ನಕಲಿ ಎಂದು ಬಿಂಬಿಸಿದ 'ನಕಲಿರಾಮ'ನ ಉಪ್ಪುಹುಳಿ ಖಾರದ ಬಗ್ಗೆ ನನಗೆ ಗೊತ್ತಿಲ್ಲದ್ದೇನಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಉಗಿದು ಉಪ್ಪಾಕಿದ ಮೇಲೆ ಆ ನಕಲಿ ಪತ್ರ 'ಅಸಲಿ'ಯಾದ ಕಥೆಯ ಹಕೀಕತ್ತು ಏನಿರಬಹುದು ಸಿಎಂ ಸಾಹೇಬರೇ?

ನಿಮ್ಮ ರಾಜಕೀಯ ಬದುಕಿಗೆ ಬ್ಲ್ಯಾಕ್'ಮೇಲೇ ಬಂಡವಾಳ. ಗೃಹ ಸಚಿವರು, ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ನಡೆದ 'ಅಪ್ಪಯ್ಯ ಮತ್ತು ಅತೀಂದ್ರನ ಆಟಾಟೋಪ' ಕಂಡು ಹೌಹಾರಿದವರು ಯಾರು? ವರ್ಗಾವಣೆ ಪಟ್ಟಿಗೆ ಅಲ್ಲಿ ಬಿದ್ದ ಟಿಕ್ಕುಗಳ ಲೆಕ್ಕ ಹೇಳಬೇಕಾ ಟಿಕ್ ಟಿಕ್ ಸಿದ್ದರಾಮಯ್ಯ??" ಎಂದು ಪ್ರಶ್ನಿಸಿದ್ದಾರೆ.

English summary :Shameless Chief Minister who justifies the disgraceful acts of the ministers - HDK

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...