Sat,May04,2024
ಕನ್ನಡ / English

ಬೆಂಗಳೂರಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್ ಹಾಕಿದ್ರೆ 50 ಸಾವಿರ ರೂಪಾಯಿ ದಂಡ | JANATA NEWS

08 Aug 2023
1983

ಬೆಂಗಳೂರು : ಬೆಂಗಳೂರು ನಗರದಲ್ಲಿ ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಅನಧಿಕೃತ ಫ್ಲೆಕ್ಸ್ ನಿರ್ಬಂಧ ಹೇರಲಾಗುವುದು, ಒಂದು ವೇಳೆ ನಿಯಮ ಮೀರಿದರೆ ಪಾಲಿಕೆ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿ, ಒಂದು ಫ್ಲೆಕ್ಸ್ ಗೆ ತಲಾ 50 ಸಾವಿರ ದಂಡ ವಿಧಿಸಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಾದ್ಯಂತ ಫ್ಲೆಕ್ಸ್ ಸಂಪೂರ್ಣವಾಗಿ ನಿಷೇಧ ಮಾಡುತ್ತೇವೆ. ಅನಧಿಕೃತ ಫ್ಲೆಕ್ಸ್​ಗಳಿಂದ ನನಗೆ ಅಸಹ್ಯ ಆಗುತ್ತಿದೆ. ಕೋರ್ಟ್​ನಿಂದ ಕೂಡ ನಿರ್ದೇಶನ ಇದೆ. ಎಲ್ಲಾ ಫ್ಲೆಕ್ಸ್, ಹೋರ್ಡಿಂಗ್ ತೆಗೆಯಲು ಸೂಚನೆ ನೀಡಲಾಗಿದೆ.

ಬೆಂಗಳೂರಿನಾದ್ಯಂತ ಆ.15ರೊಳಗೆ ಎಲ್ಲಾ ಫ್ಲೆಕ್ಸ್, ಹೋರ್ಡಿಂಗ್ಸ್ ತೆರವು ಮಾಡಬೇಕು ಎಂದು ಹೇಳಿದ್ದಾರೆ.ಯಾರಾದರು ಫ್ಲೆಕ್ಸ್, ಹೋರ್ಡಿಂಗ್ಸ್ ಹಾಕಿದ್ದು ಕಂಡುಬಂದರೆ ಅಂತವರಿಗೆ ದಂಡ ಹಾಕಬೇಕು.

ಯಾರು ಅನಧಿಕೃತವಾಗಿ ಫ್ಲೆಕ್ಸ್ ಹಾಕುತ್ತಾರೋ ಅವರಿಗೆ 50,000 ರೂ. ದಂಡ ಹಾಕಲು ಸೂಚನೆ ನೀಡಲಾಗಿದೆ. ಯಾವ ಪಾರ್ಟಿಯವರೂ ಹಾಕುವುದು ಬೇಡ. ಸಿಎಂ ಅವರ ಫ್ಲೆಕ್ಸ್ ಹಾಕುವ ಹಾಗಿಲ್ಲ. ಡಿಕೆಶಿ ಫ್ಲೆಕ್ಸ್ ಹಾಕುವ ಹಾಗಿಲ್ಲ. ಯಾರ ಶಿಫಾರಸು ನಡೆಯುವುದಿಲ್ಲ ಎಂದು ಡಿಕೆಶಿ ಖಡಕ್​ ಸಂದೇಶ ನೀಡಿದ್ದಾರೆ.

ರಾಜಕೀಯ ಪಕ್ಷಗಳ ನಾಯಕರು ಸೇರಿದಂತೆ ಎಲ್ಲ ಅನಧಿಕೃತ ಫ್ಲೆಕ್ಸ್ ಗಳನ್ನು ನಿಷೇಧಿಸಲಾಗುವುದು. ಈ ವಿಚಾರವಾಗಿ ನಮ್ಮ ಸಚಿವರು ಹಾಗೂ ನಾಯಕರಿಗೆ ಮನವಿ ಮಾಡಿದ್ದೇನೆ.

ಫ್ಲೆಕ್ಸ್ ನಿಷೇಧ ಕುರಿತು ಮುಂದಿನ ದಿನಗಳಲ್ಲಿ ನೀತಿ ರೂಪಿಸುತ್ತೇವೆ ಎಂದರು. ಇನ್ನು ಮುಂದೆ ಜನ್ಮದಿನ, ಶ್ರದ್ಧಾಂಜಲಿ, ಶುಭ ಸಂದೇಶ, ಸಾಮಾಜಿಕ, ರಾಜಕೀಯ ಹಾಗೂ ಧಾರ್ಮಿಕ ವಿಚಾರ ಸೇರಿದಂತೆ ಯಾವುದೇ ಅನಧಿಕೃತ ಫ್ಲೆಕ್ಸ್ ಹಾಕುವಂತಿಲ್ಲ. ಇದಕ್ಕೆ ಎಲ್ಲಾ ಪಕ್ಷಗಳು ಹಾಗೂ ನಾಗರೀಕರು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ

ಈಗಾಗಲೇ ನಗರದಲ್ಲಿ 59 ಸಾವಿರ ಅನಧಿಕೃತ ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಲಾಗಿದೆ. 134 ದೂರುಗಳು ಬಂದಿದ್ದು, 40 ಎಫ್‌ಐಆರ್ ದಾಖಲಿಸಲಾಗಿದೆ ಖಾಸಗಿ ಸ್ಥಳಗಳಲ್ಲಿ ಫ್ಲೆಕ್ಸ್ ಹಾಕಲು ನಿರ್ಬಂಧ ಇರುವುದಿಲ್ಲ. ಅದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ತಿಳಿಸಿದರು.

RELATED TOPICS:
English summary :50 thousand rupees fine for putting up unauthorized flex, banner, hoarding in Bangalore

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...