Thu,May09,2024
ಕನ್ನಡ / English

ಡಿ.ಕೆ.ಶಿವಕುಮಾರ್ ಸೂಪರ್ ಸಿಎಂ ಸೇರಿದಂತೆ ಒಟ್ಟು ಇಬ್ಬರು ಮುಖ್ಯಮಂತ್ರಿಗಳಿದ್ದಾರೆ: ಬಸವರಾಜ ಬೊಮ್ಮಾಯಿ | JANATA NEWS

10 Aug 2023
1248

ಬೆಂಗಳೂರು : ರಾಜ್ಯದಲ್ಲಿ ಡಿ. ಕೆ ಶಿವಕುಮಾರ್ ಸೂಪರ್ ಸಿಎಂ ಆಗಿದ್ದಾರೆ. ಬಿಬಿಎಂಪಿ ಅಧಿಕಾರಿಗಳ ಟ್ರಾನ್ಸಫರ್ ತನ್ನ ಗಮನಕ್ಕೆ ತಂದು ಮಾಡಬೇಕು ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಹೀಗಾಗಿ ಡಿ.ಕೆ.ಶಿವಕುಮಾರ್ ಸೂಪರ್ ಸಿಎಂ ಆಗಿದ್ದಾರೆ. ಆದ್ದರಿಂದ ರಾಜ್ಯದಲ್ಲಿ ಸಿಎಂ ಮತ್ತು ಸೂಪರ್ ಸಿಎಂ ಸೇರಿದಂತೆ ಒಟ್ಟು ಇಬ್ಬರು ಮುಖ್ಯಮಂತ್ರಿಗಳಿದ್ದಾರೆ. ಇನ್ನು ಸರ್ಕಾರದ ವಿರುದ್ದ ಬರುವ ಎಲ್ಲ ಪತ್ರಗಳೂ ಫೇಕ್ ಎಂದು ಸರ್ಕಾರ ಅಲ್ಲಗಳೆಯುತ್ತಿದೆ. ಅವರದೇ ಪಕ್ಷದ ಶಾಸಕರು ಬರೆದ ಪತ್ರವನ್ನೂ ಫೇಕ್ ಎನ್ನುತ್ತಾರೆ. ಈ ಸರ್ಕಾರವೇ ಫೇಕ್ ಎಂದು ಆರೋಪಿಸಿದರು.

ಬಿಬಿಎಂಪಿ ಗುತ್ತಿಗೆದಾರರ ಸಂಘದವರು ಕಾಂಗ್ರೆಸ್ ಸರ್ಕಾರದಲ್ಲಿ 65% ಕಮಿಷನ್ ಕೇಳುತ್ತಿದ್ದಾರೆ ಎಂದು ಕಾಂಗ್ರೆಸ್ ‌ನಾಯಕ ರಾಹುಲ್ ಗಾಂಧಿ ಗಮನಕ್ಕೆ ತಂದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬಿಬಿಎಂಪಿಯಲ್ಲಿ ಕಾಮಗಾರಿ ಮಾಡಿರುವ ಗುತ್ತಿಗೆದಾರರು ಭೇಟಿ ಮಾಡಿದ್ದಾರೆ. ಅವರು ಮಾಡಿರುವ ಕೆಲಸಕ್ಕೆ ಹಣ ಬಿಡುಗಡೆ ಮಾಡಿಸಲು ಸರ್ಕಾರವನ್ನು ಆಗ್ರಹಿಸಲು ಮನವಿ‌ ಮಾಡಿದ್ದಾರೆ. ನಾನು ಮುಖ್ಯಮಂತ್ರಿ ಆಗಿದ್ದಾಗ ಬಿಲ್ ಪಾವತಿಗೆ ಆನ್ಲೈನ್ ಮಾಡಿ ಸ್ಟ್ರೀಮ್ ಲೈನ್ ಮಾಡಿದ್ದೆನು‌. ಕಾಮಗಾರಿ ಪೂರ್ಣಗೊಳಿಸಿದ ಹಿರಿತನದ ಆಧಾರದ ಮೇಲೆ ಹಣ ಬಿಡುಗಡೆ ಮಾಡಲಾಗುತ್ತಿತ್ತು.‌ ಇದರಿಂದ ಅವರ ಬಾಕಿ ಕೂಡ ಕಡಿಮೆ ಉಳಿದಿತ್ತು ಎಂದರು.

ರಾಹುಲ್ ಗಾಂಧಿ ಭ್ರಷ್ಟಾಚಾರ ಸಹಿಸದಿದ್ದರೆ ತಕ್ಷಣ ಮಧ್ಯ ಪ್ರವೇಶ ಮಾಡಿ, ಗುತ್ತಿಗೆದಾರರ ಬಿಲ್ ಬಿಡುಗಡೆಗೆ ಸೂಚಿಸಬೇಕು. ಇಲ್ಲವಾದಲ್ಲಿ ಕರ್ನಾಟಕ ಕಾಂಗ್ರೆಸ್ ಕೇಂದ್ರಕ್ಕೆ ಎಟಿಎಂ ಎನ್ನುವುದು ಸಾಬೀತಾದಂತೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕೆ ಮಾಡಿದ್ದಾರೆ.

ಗುತ್ತಿಗೆದಾರರು ಹಿಂದಿನ ಸರ್ಕಾರದ ಅವಧಿಯಲ್ಲಿ ಮಾಡಿದ ಕೆಲಸಕ್ಕೆ ಈಗ ಲಂಚ ಕೇಳುತ್ತಿದ್ದಾರೆ ಎಂದು ಗುತ್ತಿಗೆದಾರರು ಆರೋಪಿಸಿದ್ದಾರೆ. ಎಲ್ಲ ಇಲಾಖೆಗಳಲ್ಲಿ ಹಿಂದಿನ ಸರ್ಕಾರದ ಅವಧಿಯ ಕಾಮಗಾರಿಗಳಿಗೆ ಲಂಚ ಕೇಳುತ್ತಿರುವುದು ಸರ್ವವಿಧಿತವಾಗಿದೆ. ಮುಖ್ಯಮಂತ್ರಿಗಳು ಇದರ ಬಗ್ಗೆ ಮೌನ ವಹಿಸಿದ್ದಾರೆ. ಇದು ಅವರ ಸಮ್ಮತಿ ಅಂತ ಸೂಚಿಸುತ್ತದೆ ಎಂದು ಆರೋಪಿಸಿದರು‌.

ಸಿಎಂ ವರ್ಗಾವಣೆಗೆ ಹಣ ಪಡೆದಿಲ್ಲ ಅಂತ ಹೇಳಿದ್ದಾರೆ‌. ಆದರೆ, ಅವರ ಕಚೇರಿಯಿಂದ ವರ್ಗಾವಣೆ ಆಗಿರುವ ಆದೇಶಗಳು ಯಾಕೆ ಬದಲಾವಣೆ ಆಗುತ್ತಿವೆ? ನಮ್ಮ ಅವಧಿಯಲ್ಲಿ ಕಾಮಗಾರಿಗಳಲ್ಲಿ ಪಾರದರ್ಶಕತೆ ತರಲು 3 ಜನರ ಸಮಿತಿ ರಚನೆ ಮಾಡಿದ್ದೆವು. ಆ ಆದೇಶಗಳನ್ನು ಈಗ ಪಾಲನೆ ಮಾಡುತ್ತಿಲ್ಲ ಎಂದು ಹೇಳಿದರು.

ಗುತ್ತಿಗೆದಾರರು ಕೆಲಸ ನಿಲ್ಲಿಸಿದರೆ ಬ್ರ್ಯಾಂಡ್ ಬೆಂಗಳೂರು ಸ್ಥಗಿತ ಆಗುತ್ತದೆ. ಕಮಿಷನ್ ಎಷ್ಟು ಪಡೆಯಬೇಕು ಎನ್ನುವುದು ಸ್ಯಾಂಗ್ರಿಲಾ ಹೊಟೆಲ್ ನಲ್ಲಿ ಮಾತುಕತೆ ನಡೆಯುತ್ತಿದೆಯಂತೆ ಎಷ್ಟಕ್ಕೆ ಆಗುತ್ತದೆಯೋ ನೊಡೊಣ ಲಂಚ ಪಡೆಯುವುದು ಕೊಡುವುದು ಎರಡೂ ಅಪರಾಧ. ಗುತ್ತಿಗೆದಾರರು ಎಷ್ಟು ಪರ್ಸೆಂಟೇಜಿಗೆ ಒಪ್ಪುತ್ತಾರೊ, ಭ್ರಷ್ಟಾಚಾರದ ಭಾಗವಾಗುತ್ತಾರೊ, ಇಲ್ಲವೋ ನೋಡೊಣ ಎಂದು ಹೇಳಿದರು.

RELATED TOPICS:
English summary :65% Commission in Congress Government: Basavaraja Bommai

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...