ಕಡೂರು ಕಾಂಗ್ರೆಸ್ ಶಾಸಕರ ವಿರುದ್ಧ ವಾಟ್ಸ್ಆಯಪ್ ಸ್ಟೇಟಸ್, ಮಹಿಳಾ ಕಾನ್ಸ್ಟೆಬಲ್ ಸಸ್ಪೆಂಡ್ | JANATA NEWS
ಚಿಕ್ಕಮಗಳೂರು : ಕಡೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎಸ್. ಆನಂದ್ ವಿರುದ್ಧ ವಾಟ್ಸ್ಆಯಪ್ ಸ್ಟೇಟಸ್ ಹಾಕಿ ಆಕ್ರೋಶ ಹೊರಹಾಕಿದ ಮಹಿಳಾ ಕಾನ್ಸ್ಟೆಬಲ್ರನ್ನ ಅಮಾನತು ಮಾಡಲಾಡಿದೆ.
ಲತಾ ಅವರು ಕಡೂರು ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು. ಅವರನ್ನು ಕಡೂರಿನಿಂದ ತರೀಕೆರೆಗೆ ವರ್ಗಾವಣೆ ಮಾಡಲಾಗಿದೆ. ಇದು ದ್ವೇಷದ ವರ್ಗಾವಣೆ ಎಂದು ಶಾಸಕರ ವಿರುದ್ಧ ಅಸಮಾಧಾನಗೊಂಡಿದ್ದಾರೆ.
ಅಲ್ಲದೆ, ವರ್ಗಾವಣೆ ವಿರೋಧಿಸಿ ಸಬ್ ಇನ್ಸ್ಪೆಕ್ಟರ್ ಜತೆಯೂ ಲತಾ ಮಾತಿನ ಚಕಮಕಿ ನಡೆಸಿದ್ದಾರೆಂದು ತಿಳಿದುಬಂದಿದೆ.
ಲತಾ ಅವರ ಈ ವರ್ತನೆ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರ ಗಮನಕ್ಕೆ ಬಂದಿದ್ದು, ಮಹಿಳಾ ಪೇದೆಯನ್ನ ಅಮಾನತು ಮಾಡಿ ಎಸ್ಪಿ ಆದೇಶ ಹೊರಡಿಸಿದ್ದರು. ಇದರಿಂದಾಗಿ ಮಹಿಳಾ ಪೊಲೀಸ್ ಪೇದೆ ಲತಾ ವಾಟ್ಸಾಪ್ ಸ್ಟೇಟಸ್ನಲ್ಲಿ ಶಾಸಕರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.