Fri,May03,2024
ಕನ್ನಡ / English

ರಾತ್ರಿ ನಾಪತ್ತೆಯಾದ ಯುವತಿ ಮುಂಜಾನೆ ಶವವಾಗಿ ಪತ್ತೆ! | JANATA NEWS

12 Aug 2023
1985

ಬೆಂಗಳೂರು : ರಾತ್ರಿ ನಾಪತ್ತೆಯಾಗಿದ್ದ ಯುವತಿಯೊಬ್ಬಳು ಮುಂಜಾನೆ ಮನೆಯ ಹೊರ ಆವರಣದಲ್ಲೇ ಶವವಾಗಿ ಪತ್ತೆಯಾಗಿರುವ ಘಟನೆ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ.

ಮಹೇಶ್ವರಿ ನಗರ ನಿವಾಸಿ ಮಹಾನಂದಾ (21) ಮೃತಪಟ್ಟ ಯುವತಿಯಾಗಿದ್ದಾರೆ. ಯುವತಿಯ ಮೃತದೇಹ ಆಕೆ ವಾಸವಿದ್ದ ಮನೆಯ ಮುಂದೆಯೇ ಪತ್ತೆಯಾಗಿತ್ತು. ಮಹಾನಂದಾಳ ಅಕ್ಕ ಬೆಳಗ್ಗೆ ಎದ್ದು ನೋಡಿದಾಗ ಈ ಪ್ರಕರಣ ಬೆಳಕಿಗೆ ಬಂದಿತ್ತು.

ಮೃತ ಯುವತಿ ಹಾಗೂ ಆಕೆಯ ಅಕ್ಕ ಕಳೆದ 3 ಮೂರು ವರ್ಷಗಳಿಂದ ಮಹದೇವಪುರದ ಮಹೇಶ್ವರಿ ನಗರದ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು, ಇಲ್ಲಿನ ಖಾಸಗಿ ಪೆಟ್ರೋಲ್ ಬಂಕ್ ನಲ್ಲಿ ಇಬ್ಬರು ಕೆಲಸ ಮಾಡುತ್ತಿದ್ದರು. ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ ಮಹಾನಂದಾ ನಾಪತ್ತೆಯಾದ್ದಳು. ಈ ಸಂಬಂಧ ಯುವತಿಯ ಸಹೋದರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪಕ್ಕದ ಮನೆಯಲ್ಲಿ ವಾಸ ಮಾಡುತ್ತಿದ್ದ ಒಡಿಶಾ ಮೂಲದ ಕೃಷ್ಣ ಚಂದ ಸೇಟಿ ಕೊಲೆಯಾಗಿದೆ ಎಂಬುದು ಬಯಲಾಗಿದೆ.

ಒಡಿಶಾ ಮೂಲದ ಕೃಷ್ಣ ಚಂದ ಸೇಟಿ ನಗರದ ಟೆಕ್ ಪಾರ್ಕ್​ವೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಗುರುವಾರ ರಾತ್ರಿ ಅಡುಗೆ ಮನೆಯಲ್ಲಿ ಅನ್ನ ಮಾಡಲು ಪಾತ್ರೆ ಇಟ್ಟಿದ್ದ ಯುವತಿ ಮನೆಯಿಂದ ಹೊರಗೆ ಬಂದಿದ್ದಾಳೆ. ಈ ವೇಳೆ ಕೃಷ್ಣ ಚಂದ್​ನ ಮನೆಯ ಬಾಗಿಲಿನ ಬಳಿ ಯುವತಿ ಬಂದಾಗ ಅರೋಪಿಯು ಆಕೆಯನ್ನು ಒಳಗಡೆ ಎಳೆದುಕೊಂಡಿದ್ದಾನೆ. ಬಳಿಕ ಆಕೆಯ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿ, ಬಲವಂತವಾಗಿ ಚುಂಬಿಸಲು ಮುಂದಾಗಿದ್ದಾನೆ, ಬಳಿಕ ಯುವತಿ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ್ದಾನೆ.

ಅದಕ್ಕೆ ನಿರಾಕರಿಸಿ, ಮಹಾನಂದಾ ಕಿರುಚಾಡಲು ಯತ್ನಿಸಿದ್ದಾಳೆ. ಇದರಿಂದ ಎಲ್ಲರಿಗೂ ಗೊತ್ತಾಗಿ ಬಿಡುತ್ತದೆ ಎಂದು ಹೆದರಿದ ಆರೋಪಿ, ಮಹಾನಂದಾಳನ್ನು ಹಿಂಬದಿಯಿಂದ ತಬ್ಬಿ, ಆಕೆಯ ಮೂಗು ಮತ್ತು ಬಾಯಿಯನ್ನು ಒಂದು ಕೈನಲ್ಲಿ ಮುಚ್ಚಿ, ಮತ್ತೊಂದು ಕೈನಿಂದ ಕುತ್ತಿಗೆ ಹಿಸುಕಿದ್ದಾನೆ. ಈ ವೇಳೆ ಕಿರುಚಾಡಲು ಸಾಧ್ಯವಾಗದೆ ಮಹಾನಂದಾ ಉಸಿರುಗಟ್ಟಿ ಮೃತಪಟ್ಟಿದ್ದಾಳೆ.

ಕೊಲೆ ಬಳಿಕ ಬೆಡ್​ಶೀಟ್​ನಲ್ಲಿ ಮಹಾನಂದಾಳ ಮೃತದೇಹವನ್ನು ಸುತ್ತಿ, ಮನೆಯ ಮೂಲೆಯೊಂದರಲ್ಲಿ ಇಟ್ಟಿದ್ದ. ಹನ್ನೆರಡು ಗಂಟೆ ಸುಮಾರಿಗೆ ಆರೋಪಿಯ ಪತ್ನಿ ಮನೆಗೆ ಬಂದಿದ್ದಾರೆ. ತಾನೂ ಏನು ಮಾಡೇ ಇಲ್ಲ ಎನ್ನುವಂತೆ ನಟಿಸಿದ ಆರೋಪಿ, ಬೆಳಗಿನ ಜಾವ ಮನೆಯೊಳಗಿದ್ದ ಶವವನ್ನು ತಂದು ಮೃತಳ ಮನೆ ಮುಂದೆ ಹಾಕಿದ್ದಾನೆ.

ತನಿಖೆಯಲ್ಲಿ ಆರೋಪಿ ಕೃಷ್ಣ ಸಿಕ್ಕಿಬಿದ್ದಿದ್ದು, ಆತನನ್ನ ಬಂಧಿಸಿರುವ ಮಹದೇವಪುರ ಠಾಣಾ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

English summary :The young woman who disappeared at night was found dead early in the morning!

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...