Fri,May03,2024
ಕನ್ನಡ / English

ರಾಜ್ಯದಲ್ಲಿ ಅಸಮರ್ಪಕ ಮುಂಗಾರು ಮಳೆ ಹಿನ್ನೆಲೆ: ಬರ ಘೋಷಣೆಗಾಗಿ ಕಠಿಣ ಮಾನದಂಡ ಸಡಿಲಿಸಲು ಕೋರಿ ಕೇಂದ್ರಕ್ಕೆ ಸಿಎಂ ಪತ್ರ | JANATA NEWS

13 Aug 2023
856

ಬೆಂಗಳೂರು : ರಾಜ್ಯದಲ್ಲಿ ವಾಡಿಕೆಗಿಂತ ಕಡಿಮೆ ಮಳೆ ಹಾಗೂ ಅಸಮಪರ್ಕ ಮುಂಗಾರು ಮಳೆ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಘೋಷಣೆಯ ಮಾನದಂಡ ಪರಿಷ್ಕರಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ.

ಕೇಂದ್ರದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ರಿಗೆ ಬರೆದಿರುವ ಈ ಪತ್ರದಲ್ಲಿ, ಈಗಿನ ನಿಯಮಗಳ ಪ್ರಕಾರ ರಾಜ್ಯದಲ್ಲಿ ಬರಪೀಡಿತ ಪ್ರದೇಶಗಳ ಘೋಷಣೆ ಮಾಡಿದರೆ ರೈತರು ಬೆಳೆ ವೈಫಲ್ಯದ ಸಂದರ್ಭದಲ್ಲಿ ಇನ್‌ಪುಟ್ ಸಬ್ಸಿಡಿಗಳನ್ನು ಕಳೆದುಕೊಳ್ಳುತ್ತಾರೆ. ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸುವುದಕ್ಕೆ ಕೇಂದ್ರ ಸರ್ಕಾರವು ಕೆಲವು ಕಠಿಣ ಮಾನದಂಡ ವಿಧಿಸಿದೆ. ಶೇ.60ರಷ್ಟು ಮಳೆ ಕೊರತೆ ಇರಬೇಕು. ಮೂರು ವಾರ ಮಳೆ ಇರಬಾರದೆಂಬ ನಿಯಮವಿದೆ. ಈಗ ಎಲ್ಲೂ ಶೇ.60 ಮಳೆ ಕೊರತೆ ಆಗಿಲ್ಲ. ಹೀಗಾಗಿ ಮಾನದಂಡ ಮರುಪರಿಶೀಲನೆಗೆ ಸಂಬಂಧಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ.

ಮುಖ್ಯಮಂತ್ರಿ ಕಚೇರಿಯಿಂದ ಕೇಂದ್ರದ ಕೃಷಿ ಸಚಿವಾಲಯಕ್ಕೆ ಪತ್ರ ಬರೆಯಲಾಗಿದ್ದು, ಬರ ಪರಿಹಾರ ನೀಡಲು ಕೇಂದ್ರದ ನಿಯಾಮಾವಳಿ ಪಾಲನೆ ಕಡ್ಡಾಯವಾಗಿದೆ. ಬರ ಪರಿಹಾರ ನಿಯಮಾವಳಿ ಪ್ರಕಾರ ಶೇಕಡಾ 75:25 ಅನುಪಾತದಲ್ಲಿ ಪರಿಹಾರವನ್ನು ಸರ್ಕಾರಗಳು ನೀಡಬೇಕಿದೆ.

ಕಡ್ಡಾಯ, ಕಟ್ಟುನಿಟ್ಟಿನ ನಿಯಮಾವಳಿ ಪಾಲಿಸಿದರೆ ಬರ ಘೋಷಣೆ ತಾಲೂಕುಗಳಿಗೆ ಅನ್ಯಾಯ ಆಗಲಿದೆ. ಈ ಹಿನ್ನೆಲೆಯಲ್ಲಿ ನಿಯಾಮವಳಿಗಳ ಸಡಿಲಿಕೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ರಾಜ್ಯ ಸರ್ಕಾರ ಮನವಿ ಸಲ್ಲಿಸಿದೆ.

ರೈತರು ಬಿತ್ತನೆ ಮಾಡಿಲ್ಲವೆಂದು ಪ್ರಮಾಣ ಪತ್ರ ಸಲ್ಲಿಸಬೇಕು, ಈ ನಿಯಮಾವಳಿಯೇ ಸರ್ಕಾರಕ್ಕೆ ತಲೆನೋವು ತಂದಿಟ್ಟಿದೆ. ಶೇಕಡಾ 33 ಬೆಳೆಹಾನಿಗೆ ಪರಿಹಾರದ ಅವಕಾಶವಿದೆ ಆದರೆ ಬರಕ್ಕೆ ಶೇಕಡಾ 50 ಹಾನಿ ಆಗಬೇಕು. ಅಥವಾ ಬಿತ್ತನೆಯೇ ಆಗಿರಬಾರದು.

ಅಲ್ಲದೇ, ಬರ ಘೋಷಣೆಗೆ ಕನಿಷ್ಠ ಶೇಕಡಾ 60 ಮಳೆ‌ ಕೊರತೆ ಬೇಕು, ಕನಿಷ್ಠ ಮೂರು ವಾರಗಳು ಕಡಿಮೆ ಇರದಂತೆ ಮಳೆ ಆಗದಿರಬೇಕು. ಆದ್ದರಿಂದ ಮಳೆ‌ ಕೊರತೆ ಪ್ರಮಾಣ 60 ರಿಂದ 30ಕ್ಕೆ ಇಳಿಸಬೇಕು ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.

RELATED TOPICS:
English summary :Background of inadequate monsoon rains in the state: CM letter to Center seeking relaxation of stringent criteria for drought declaration

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...