Fri,May03,2024
ಕನ್ನಡ / English

ಕಾಂಗ್ರೆಸ್ I.N.D.I.A.ಗೆ ಜೀವದಾನ ಮಾಡಲು ರಾಜ್ಯದ ಕಾವೇರಿ ಹಿತ ಬಲಿದಾನ ಮಾಡಿದೆ - ಎಚ್.ಡಿ.ಕೆ | JANATA NEWS

17 Aug 2023
2249

ಬೆಂಗಳೂರು : ತಮಿಳುನಾಡು ರಾಜ್ಯಕ್ಕೆ ಕಾವೇರಿ ನೀರು ಹರಿಬಿಡುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಯನ್ನು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಹಿರಿಯ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

"ಮೇಕೆದಾಟು ಪಾದಯಾತ್ರೆ ಹೈಡ್ರಾಮಾ ಆಡಿ, ಕನ್ನಡಿಗರ ತಲೆ ಮೇಲೆ ಮಕ್ಮಲ್ ಟೋಪಿ ಇಟ್ಟ ಕಾಂಗ್ರೆಸ್, ಈಗ I.N.D.I.A.ಗೆ ಜೀವದಾನ ಮಾಡಲು ರಾಜ್ಯದ ಕಾವೇರಿ ಹಿತವನ್ನೇ ಬಲಿದಾನ ಮಾಡಿದೆ. ಅಂದುಕೊಂಡಿದ್ದೇ ಆಗಿದ್ದು,ನಮ್ಮ ಭಯ ನಿಜವಾಗಿದೆ. ಕಾಂಗ್ರೆಸ್ ಸರಕಾರ ಕನ್ನಡಿಗರಿಗೆ, ಅದರಲ್ಲೂ ಅನ್ನದಾತರಿಗೆ ಘೋರ ವಿಶ್ವಾಸದ್ರೋಹ ಎಸಗಿದೆ.", ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಹಿರಿಯ ನಾಯಕ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ತಮಿಳುನಾಡಿನ ಸರ್ಕಾರದ ಪರ ರಾಜ್ಯ ಕಾಂಗ್ರೆಸ್ ಸರ್ಕಾರದ ಮೃದು ದೊರಣೆಯನ್ನು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಸರಣಿ ಪೋಸ್ಟ್ ಮೂಲಕ ಎಚ್.ಡಿ.ಕೆ ತೀವ್ರವಾಗಿ ಖಂಡಿಸಿದ್ದಾರೆ.

"ಮಳೆ ಅಭಾವದಿಂದ ಜಲಾಶಯಗಳು ತುಂಬಿಲ್ಲ. ರೈತರ ಬೆಳೆಗೆ ನೀರಿಲ್ಲ, ಬೆಂಗಳೂರಿಗೆ ಕುಡಿಯುವ ನೀರಿಗೂ ತತ್ವಾರ. ನಮ್ಮ ಹೊಟ್ಟೆಗೇ ಹಿಟ್ಟಿಲ್ಲ, ನೆರೆಮನೆಯವರ ಜುಟ್ಟಿಗೆ ಮಲ್ಲಿಗೆ ಮುಡಿಸಲು ಹೊರಟಿದೆ ಸರಕಾರ. ಕನ್ನಡಿಗರಿಗೆ ವಂಚಿಸಿ ರಾಜಾರೋಷವಾಗಿ ನೀರು ಹರಿಸುವ ಮೂಲಕ ತಮಿಳುನಾಡು ಜತೆ ರಾಜಕೀಯ ಚೌಕಾಬಾರ ಆಡುತ್ತಿದೆ! ಇದೇನು ಇನ್ನೊಂದು ಗ್ಯಾರಂಟಿನಾ?

2024ರ ಲೋಕಸಭೆ ಗೆಲುವಿಗೆ ಕಾವೇರಿ ಹಿತವನ್ನು ನೆರೆರಾಜ್ಯಕ್ಕೆ ಅಡವಿಟ್ಟಿದೆ ಹಸ್ತಪಕ್ಷ ಸರಕಾರ! ತಮಿಳುನಾಡಿಗೆ ಬೆದರಿ ಶರಣಾಗಿದೆ!!ಕಾವೇರಿ ಜಲನಿರ್ವಹಣಾ ಪ್ರಾಧಿಕಾರದ ಸಭೆಯಿಂದಲೇ ಹೊರನಡೆದ, ರಾಜ್ಯದ ವಿರುದ್ಧ ಸುಪ್ರೀಂಕೋರ್ಟ್ ಗೆ ಅರ್ಜಿ ಹಾಕಿದ ರಾಜ್ಯದೆದುರು ದೈನೇಸಿಯಾಗಿ ಮಂಡಿಯೂರಿದ್ದು,ಕನ್ನಡಿಗರ ಸ್ವಾಭಿಮಾನಕ್ಕೆ ಕೊಟ್ಟ ಕೊಡಲಿಪೆಟ್ಟು.

1962ರಿಂದಲೂ ಕಾವೇರಿ ಕೊಳ್ಳದ ರೈತರಿಗಾಗಿ ಶ್ರೀ ಎಚ್.ಡಿ.ದೇವೇಗೌಡ ಅವರು ಜೀವವನ್ನೇ ತೇದರು. ಕಾವೇರಿಗಾಗಿ ಹಿಂದಿನ ಪ್ರತೀ ಸರಕಾರವೂ ಕೇಂದ್ರಕ್ಕೆ ಸಡ್ಡು ಹೊಡೆದು ತಮಿಳುನಾಡು ಅಬ್ಬರಕ್ಕೆ ಅಂಕೆ ಹಾಕಿದ್ದವು. ಇಂಥ ಕೆಚ್ಚಿನ ಕರ್ನಾಟಕದ ಇತಿಹಾಸದಲ್ಲೇ ಈ ಸರಕಾರವು, ನೆರೆರಾಜ್ಯ ಸುಪ್ರೀಂಕೋರ್ಟ್ ಗೆ ಅರ್ಜಿ ಹಾಕಿದಾಕ್ಷಣ ಬೆದರಿ ಕೈ ಚೆಲ್ಲಿದೆ.

ಸಂಕಷ್ಟ ಸ್ಥಿತಿಯ ಬಗ್ಗೆ ಕಾಂಗ್ರೆಸ್ ಸರಕಾರ ಸುಪ್ರೀಂಕೋರ್ಟ್ ಗೆ ಮನವರಿಕೆ ಮಾಡಿಕೊಡಲಿಲ್ಲ, ಯಾಕೆ? ಕಾನೂನು ತಜ್ಞರ ಜತೆ, ಪ್ರತಿಪಕ್ಷ ಮುಖಂಡರ ಜತೆ ಸಮಾಲೋಚನೆ ನಡೆಸದೇ ವಾಯುವೇಗದಲ್ಲಿ ತಮಿಳುನಾಡಿಗೆ ನೀರು ಹರಿಸಿದ ಒಳಗುಟ್ಟೇನು? ಜನತೆಗೆ ಗೊತ್ತಾಗಬೇಕಿದೆ.

ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿವರ್ಯರು, ತಾವು ಮಂತ್ರಿ ಆಗಿರುವುದು ಕರ್ನಾಟಕಕ್ಕೋ ಅಥವಾ ತಮಿಳುನಾಡಿಗೋ? ಅವರು ಸ್ಪಷ್ಟಪಡಿಸಬೇಕಿದೆ. ಕಾವೇರಿ ಕೀಲಿ ಕೇಂದ್ರ ಬಳಿ ಇದೆ ಎಂದಾದರೆ ಇವರ ಹೊಣೆ ಏನು? ಆ ಕೀಲಿ ಈಗ ಸ್ಟಾಲಿನ್ ಅವರ ಕೈಯ್ಯಲ್ಲಿದೆಯೋ ಅಥವಾ ಸೋನಿಯಾ ಗಾಂಧಿ ಅವರ ಕೈಯ್ಯಲ್ಲಿದೆಯೋ?

ತಾಕತ್ತಿದ್ದರೆ ಕೋರ್ಟಿಗೆ ಹೋಗಿ ಎಂದು ರೈತರಿಗೆ ಉಪ ಮುಖ್ಯಮಂತ್ರಿಗಳು ಹೇಳಿರುವುದು ದರ್ಪ, ದುರಹಂಕಾರದ ಪರಾಕಾಷ್ಠೆ. ನಿತ್ಯವೂ ಸಾವಿರಾರು ಕ್ಯೂಸೆಕ್ ಕಾವೇರಿ ನೀರು ನೆರೆರಾಜ್ಯಕ್ಕೆ ಹರಿದು ಹೋಗುತ್ತಿದೆ. ಇನ್ನೂ 10 ಟಿಎಂಸಿ ಬಿಡುತ್ತೇವೆ ಎಂದು ಅವರು ಹೇಳಿರುವುದು ಸರಿಯಲ್ಲ?

ಕನ್ನಡಿಗರು ಕೊಟ್ಟ ಪೆನ್ ಈಗ ಗನ್ ರೂಪ ತಳೆದಿದೆಯಾ ಹೇಗೆ? ಕನ್ನಡಿಗರನ್ನು ಕೇಳಿಕೇಳಿ ಪಡೆದುಕೊಂಡ ಪೆನ್ ಈಗ ಪೆಚ್ಚಗೆ, ತೆಪ್ಪಗೆ ಮಲಗಿದೆಯಾ? ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರವೇ ರಾಜ್ಯದ ಜಲ ಸಂಕಷ್ಟದ ಬಗ್ಗೆ ಸಭೆಯಲ್ಲೇ ಅಂಕಿ-ಅಂಶ ಸಮೇತ ಹೇಳಿದೆ. ಪಾಪ.. ಜಲ ಸಂಪನ್ಮೂಲ ಸಚಿವರಿಗೆ ಈ ಬಗ್ಗೆ ಮಾಹಿತಿ ಇಲ್ಲವೇ?

ಕಾವೇರಿ ವಿಷಯದಲ್ಲಿ ಕಾಂಗ್ರೆಸ್ಸಿನದು ಸದಾ ಎರಡು ನಾಲಿಗೆ! ಕಾವೇರಿ ಪಾಲಿಗೆ ಆ ಪಕ್ಷ ನಯವಂಚನೆ,ನಂಬಿಕೆ ದ್ರೋಹದ ಪ್ರತೀಕ.ಅಧಿಕಾರಕ್ಕೆ ಬಂದು 100 ದಿನ ಕಳೆಯುವ ಮುನ್ನವೇ ಕೊಳ್ಳಿ ಇಡುವ ಕೆಲಸ ಮಾಡಿಬಿಟ್ಟಿದೆ.ಈ ಅನ್ಯಾಯ ಸಹಿಸುವ ಪ್ರಶ್ನೆಯೇ ಇಲ್ಲ.ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು. ಸಂಕಷ್ಟಸೂತ್ರದ ಪಾಲನೆಗೆ ಒತ್ತಡ ಹೇರಬೇಕು.", ಎಂದು ಮಾಜಿ ಸಿಎಂ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

English summary : Congress sacrifices states Cauvery interests to give life to I.N.D.I.A. - H.D.K.

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...