Sun,Apr28,2024
ಕನ್ನಡ / English

ಅಮೆರಿಕಾದಲ್ಲಿ ದಾವಣಗೆರೆ ಮೂಲದ ಪತಿ, ಪತ್ನಿ, ಮಗು ಅನುಮಾನಾಸ್ಪದ ಸಾವು | JANATA NEWS

19 Aug 2023
2145

ದಾವಣಗೆರೆ : ಅಮೆರಿಕಾದಲ್ಲಿ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹಾಲೆಕಲ್ಲು ಗ್ರಾಮ ಪತಿ, ಪತ್ನಿ ಹಾಗೂ ಅವರ ಗಂಡು ಮಗು ಮೃತಪಟ್ಟ ಘಟನೆ ನಡದಿದೆ.

ಮೃತರನ್ನು ಯೋಗೇಶ್ ಹೊನ್ನಾಳ (37), ಪ್ರತಿಭಾ ಹೊನ್ನಾಳ್ (35) ಹಾಗೂ ಅವರ ಪುತ್ರ ಯಶ್ ಹೊನ್ನಾಳ್(6) ಸಾವನ್ನಪ್ಪಿದ್ದಾರೆ. ಇವರು ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಹಾಲೆಕಲ್ಲು ಗ್ರಾಮದವರಾಗಿದ್ದಾರೆ.

ಕಳೆದ 9 ವರ್ಷಗಳ ಹಿಂದೆ ದಂಪತಿ ಮದುವೆಯಾಗಿದ್ದು, ಬಳಿಕ ಅಮೆರಿಕಾದಲ್ಲಿ ವಾಸವಾಗಿದ್ದರು. ಮೃತ ಪತಿ ಹಾಗೂ ಪತ್ನಿ ಇಬ್ಬರೂ ವೃತ್ತಿಯಲ್ಲಿ ಎಂಜಿನಿಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮದುವೆಯ ನಂತರ ದಂಪತಿಗಳು ಅಮೆರಿಕಾದ ಮೇರಿಲ್ಯಾಂಡ್​ ರಾಜ್ಯದಲ್ಲಿರುವ ಬಾಲ್ಟಿಮೋರ್​ ಎಂಬ ಪ್ರದೇಶದಲ್ಲಿ ನೆಲೆಸಿದ್ದರು.

ಅಮೇರಿಕಾ ಪೊಲೀಸರು ನೀಡಿರುವ ಮಾಹಿತಿಯಂತೆ ಅವರ ವಾಸವಿದ್ದ ನಿವಾಸದಲ್ಲೇ ಮೂವರ ಮೃತದೇಹ ಪತ್ತೆಯಾಗಿದೆ.ಮೂರು ದಿನಗಳಾದ್ರು ಮನೆ ಹೊರಗೆ ಯಾವುದೆ ಚಟುವಟಿಕೆ ಬಾರದ ಹಿನ್ನಲೆಯಲ್ಲಿ ಪೊಲೀಸರು ಮನೆಯ ಬಾಗಿಲು ಹೊಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸಾವಿನ ಬಗ್ಗೆ ಅಮೇರಿಕಾ ಪೊಲೀಸರು ತನಿಖೆ ನಡೆಸಿದ್ದು ಸಾವಿನ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ, ಈ ಕುಟುಂಬದ ಸಾವಿನ ಹಿನ್ನೆಲೆಯಲ್ಲಿ ಹಲವುಯ ಅನುಮಾನಗಳು ಸೃಷ್ಟಿಯಾಗಿವೆ.

ಮೃತದೇಹಗಳನ್ನು ಸ್ವದೇಶಕ್ಕೆ ತರಿಸಿಕೊಡುವಂತೆ ಮೃತರ ಕುಟುಂಬಸ್ಥರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

RELATED TOPICS:
English summary :Suspicious death of husband, wife, child from Davangere in America

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...