Fri,May03,2024
ಕನ್ನಡ / English

ಸಿಎಂ ಸಿದ್ದರಾಮಯ್ಯ ಅವರನ್ನ ಭೇಟಿಯಾದ ಶಿವರಾಮ್​ ಹೆಬ್ಬಾರ್, ಭೇಟಿ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ! | JANATA NEWS

26 Aug 2023
1818

ಬೆಂಗಳೂರು : ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್​ ಹೆಬ್ಬಾರ್ ಶುಕ್ರವಾರ ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ.

ಶುಕ್ರವಾರ ರಾತ್ರಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಉಭಯ ಬಿಜೆಪಿ ಶಾಸಕರು ಚರ್ಚೆ ನಡೆಸಿದ್ದಾರೆ. ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಲಕ್ಷಣಗಳು ಈಗಾಗಲೇ ಗೋಚರವಾಗುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿರುವುದು ಇನ್ನಷ್ಟು ಕುತೂಹಲ ಮೂಡಿಸಿದೆ.

ಆಪರೇಷನ್​ ಹಸ್ತದ ಗಾಳಕ್ಕೆ ಸಿಲುಕಿ ಶಿವರಾಮ್​ ಹೆಬ್ಬಾರ್​ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ವಂದತಿಗಳು ಎದ್ದಿದ್ದವು. ಈ ಕುರಿತು ಶಿವರಾಮ್​ ಹೆಬ್ಬಾರ್​ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್​ಗೆ ಸೇರುವುದಿಲ್ಲ ಎಂದು ಹೇಳಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು ಸಾಕಷ್ಟು ಚರ್ಚೆಗೆ ಎಡೆ ಮಾಡಿಕೊಟ್ಟಿದೆ.

ಸಿಎಂ ಜೊತೆ ಹೆಬ್ಬಾರ್​ ಸುಮಾರು ಒಂದೂವರೆ ಗಂಟೆಗಳ ಕಾಲ ಚರ್ಚೆ ನಡೆಸಿದ್ದು, ಸಿಎಂ ಭೇಟಿ ವೇಳೆ ಬಿಜೆಪಿ ಶಾಸಕರು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚೆ ನಡೆಸಿದ್ದಾರಾ? ಎಂಬ ಬಗ್ಗೆ ಪ್ರಶ್ನೆಗಳು ಮೂಡಿದೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ವಿಧಾನಸಭಾ ಕ್ಷೇತ್ರವನ್ನು ಬರಗಾಲ ಪೀಡಿತ ಪ್ರದೇಶ ಎಂದುಇ ಘೋಷಣೆ ಮಾಡುವಂತೆ ಮನವಿ ಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ. ಕ್ಷೇತ್ರದಲ್ಲಿ ಶೇ 70 ಕ್ಕಿಂತ ಕಡಿಮೆ ಮಳೆ ಆಗಿರುವ ಹಿನ್ನಲೆಯಲ್ಲಿ ಬರಪೀಡಿತ ತಾಲೂಕು ಘೋಷಣೆಗೆ ಮನವಿ ಮಾಡಲಾಗಿದೆ. ಯಲ್ಲಾಪುರ – ಮುಂಡಗೋಡ – ಬನವಾಸಿಯನ್ನು ಬರಪೀಡಿತ ಎಂದು ಘೋಷಿಸಿ. ಮಳೆಯಿಲ್ಲದೆ ರೈತರು ಸಂಕಷ್ಟದಲ್ಲಿದ್ದಾರೆ. ಕ್ಷೇತ್ರಕ್ಕೆ ಹೆಚ್ಚಿನ ಅನುಧಾನ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಈ ಭಾಗದ ರೈತರು ತೊಂದರೆಗೊಳಗಾಗಿದ್ದು, ರೈತರ ಹಿತದೃಷ್ಠಿಯಿಂದ ಯಲ್ಲಾಪುರ, ಮುಂಡಗೋಡ ಮತ್ತು ಶಿರಸಿ ತಾಲೂಕಿನ ಪೂರ್ವ ಭಾಗವಾದ ಬನವಾಸಿ ಹೋಬಳಿಯನ್ನು “ಬರಗಾಲ ಪೀಡಿತ" ಪ್ರದೇಶವೆಂದು ಘೋಷಿಸುವಂತೆ ಕೋರಿದ್ದಾರೆ. ಅಲ್ಲದೆ ಜನ ಜಾನುವಾರಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವುದರಿಂದ ಯಲ್ಲಾಪುರ ವಿಧಾನ ಸಭಾ ಕ್ಷೇತ್ರಕ್ಕೆ ಕುಡಿಯುವ ನೀರು ಪೂರೈಕೆಗೆ ವಿಶೇಷ ಅನುದಾನ ಮಂಜೂರು ಮಾಡುವಂತೆ ಅವರು ಮನವಿ ಮಾಡಿದ್ದಾರೆ.

RELATED TOPICS:
English summary :Shivram Hebbar who met CM Siddaramaiah, raised a lot of discussion!

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...