Fri,May03,2024
ಕನ್ನಡ / English

ಮತ್ತೆ ಆಪರೇಷನ್ ಕಮಲ ಫಿಕ್ಸ್, ಬೇಕಿದ್ದರೆ ಕಾದು ನೋಡಲಿ: ಕೆ.ಎಸ್​. ಈಶ್ವರಪ್ಪ | JANATA NEWS

02 Sep 2023
1591

ಶಿವಮೊಗ್ಗ : 2024ರ ಲೋಕಸಭೆ ಚುನಾವಣೆಗೆ ಮುನ್ನ ಅಥವಾ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಸ್ಪೋಟಕ ಹೇಳಿಕೆಯನ್ನು ನೀಡಿದ್ದಾರೆ.

ಆಪರೇಷನ್​​ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಕೆ.ಎಸ್​. ಈಶ್ವರಪ್ಪ ಲೋಕಸಭೆ ಚುನಾವಣೆಗೂ ಮುನ್ನ ಅಥವಾ ನಂತರ ಕಾಂಗ್ರೆಸ್​ ಸರ್ಕಾರ ಪತನವಾಗಲಿದೆ ಎಂದು ಹೇಳಿದ್ದಾರೆ.

ನಮ್ಮ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬೇಜವಾಬ್ದಾರಿ ಹೇಳಿಕೆ ನೀಡಲು ಸಾಧ್ಯವಿಲ್ಲ. ಸಂತೋಷ್ ಹೇಳಿಕೆಗೆ ಪುಷ್ಟಿ ನೀಡುವ ಹಲವು ಬೆಳವಣಿಗೆಗಳು ಕರ್ನಾಟಕದಲ್ಲಿ ನಡೆಯುತ್ತಿವೆ ಎಂದು ಅವರು ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ನಡುವೆ ಸಮನ್ವಯತೆ ಇಲ್ಲ. ಅನೇಕ ಕಾಂಗ್ರೆಸ್ ಶಾಸಕರು ತಮ್ಮ ಸರ್ಕಾರದ ಬಗ್ಗೆ ಅತೃಪ್ತರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ಹಿಂದೆ ಕಾಂಗ್ರೆಸ್-ಜೆಡಿಎಸ್ ಸರ್ಕಾರದ ಅವಧಿಯಲ್ಲೇ ಅಂದು 17 ಜನ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. ಆಗ ಕಾಂಗ್ರೆಸ್ ಸರ್ಕಾರ ಬಿದ್ದು ಹೋಗಿ ಬಿಜೆಪಿ ಅಧಿಕಾರಕ್ಕೆ ಬಂದಿತ್ತು. ಇದನ್ನು ಕಾಂಗ್ರೆಸ್ ನೆನಪಿಟ್ಟುಕೊಳ್ಳಲಿ ಎಂದು ಕೆಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದರು.

ನಮಗೆ ತಾಕತ್ ಇರೋದಕ್ಕೆ ಸರ್ಕಾರ ಬೀಳಿಸಿ ತೋರಿಸಿದ್ದು. ಈಗ ಸಹ ಕಾದು ನೋಡಿ ಎಂದು ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದರು. ಕಾಂಗ್ರಸ್​ಗೆ ಅವರ ಶಾಸಕರ ಮೇಲೆ ನಂಬಿಕೆ ಇರದ ಕಾರಣ ಅಂದು ಸರ್ಕಾರ ಬಿದ್ದಿತ್ತು ಎಂದರು.

ಈಗ ಸರ್ಕಾರ ಬಂದು ಮೂರು ತಿಂಗಳಾಗಿದೆ. ಈಗಲೇ ಅಸಮಾಧಾನ ಶುರುವಾಗಿದೆ. ಪ್ರಿಯಾಂಕ್ ಖರ್ಗೆ ಲೋಕಸಭೆ ಚುನಾವಣೆವರೆಗೂ ಕಾಯಲಿ. ನೂರಕ್ಕೆ ನೂರು ಆಪರೇಷನ್ ಕಮಲ ಆಗುತ್ತದೆ ಎಂದು ಸ್ಫೋಟಕ ಹೇಳಿಕೆ ನೀಡಿದರು.

ನೂರಕ್ಕೆ ನೂರರಷ್ಟು ಆಪರೇಷನ್ ಕಮಲ ಆಗುತ್ತದೆ. ಈ ದೇಶದಲ್ಲಿ ಕಾಂಗ್ರೆಸ್‌ಗೆ ಭವಿಷ್ಯ ಇಲ್ಲ. ಹೀಗಾಗಿ ಎಲ್ಲಾ ನಾಯಕರು ಬಿಜೆಪಿಗೆ ಬರುತ್ತಾರೆ ಎಂದು ತಿಳಿಸಿದರು.

RELATED TOPICS:
English summary :Operation Kamala Fix again, let wait and see: K.S. Eshwarappa

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...