Sun,May05,2024
ಕನ್ನಡ / English

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ: ಚೈತ್ರಾ ಕುಂದಾಪುರ ಸೇರಿ ಐವರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ವಶಕ್ಕೆ | JANATA NEWS

13 Sep 2023
1091

ಉಡುಪಿ : ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ನೀಡುವುದಾಗಿ ನಂಬಿಸಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿದಂತೆ ಆರು ಆರೋಪಿಗಳನ್ನು ಸೆಪ್ಟೆಂಬರ್ 23ರವರೆಗೆ ಸಿಸಿಬಿ ಕಸ್ಟಡಿಗೆ ಆದೇಶಿಸಲಾಗಿದೆ.

ಪ್ರಕರಣ ಪ್ರಮುಖ ಆರೋಪಿತೆಯಾಗಿರುವ ಚೈತ್ರಾ ಕುಂದಾಪುರ, ರಮೇಶ್, ದೇವರಾಜ್, ಶ್ರೀಕಾಂತ್, ಪ್ರಜ್ವಲ್ ಅವರನ್ನು ಉಡುಪಿ ಹಾಗೂ ಚಿಕ್ಕಮಗಳೂರಿನಲ್ಲಿ ಬಂಧಿಸಿ ಇಂದು ನಗರದ ಸಿಸಿಬಿ ಕಚೇರಿಗೆ ಅಧಿಕಾರಿಗಳು ಕರೆತಂದರು‌.

ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಬಳಿಕ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಆರೋಪಿಗಳನ್ನ ಹಾಜರುಪಡಿಸಿದರು. ಆರೋಪಿಗಳ ವಿರುದ್ಧ 5 ಕೋಟಿಗೂ ಹೆಚ್ಚು ಹಣ ವಂಚನೆ ಇದ್ದು, ಕೃತ್ಯ ಎಸಗಲು ವ್ಯವಸ್ಥಿತವಾಗಿ ಸಂಚು‌ ರೂಪಿಸಿದ್ದರು.

ಈ ವೇಳೆ ಆರೋಪಿಗಳನ್ನು 14 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಮಾಡಿದರು. ಆದರೆ ಕೋರ್ಟ್ ಆರು ಮಂದಿ ಆರೋಪಿಗಳಿಗೂ 10 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿದೆ.

ಉಡುಪಿಯ ಉದ್ಯಮಿ ಗೋವಿಂದ ಪೂಜಾರಿ ಅವರಿಗೆ ಕರ್ನಾಟಕ ವಿಧಾನಸಭಾ ಚುನಾವಣೆ 2023ರಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ 5 ಕೋಟಿ ರೂ. ಹಣವನ್ನು ಪಡೆದಿದ್ದಾರೆ. ಹಂತ ಹಂತವಾಗಿ ಅವರಿಗೆ ವಿವಿಧ ಮಾರ್ಗದಲ್ಲಿ ವಂಚನೆ ಮಾಡಿ ದಿಕ್ಕು ತಪ್ಪಿಸಿದ್ದಾರೆ. ನಂತರ ಚುನಾವಣೆ ವೇಳೆ ಬಿಜೆಪಿ ಟಿಕೆಟ್‌ ಸಿಗದಿದ್ದರಿಂದ ಮೋಸ ಹೋಗಿರುವ ಬಗ್ಗೆ ಅರಿವಾಗಿ ಉದ್ಯಮಿ ದೂರು ಕೊಟ್ಟಿದ್ದರು. ಈ ವಂಚನೆ ಜಾಲದಲ್ಲಿ ಚೈತ್ರಾ ಕುಂದಾಪುರ ಸೇರಿದಂತೆ ಒಟ್ಟು 10 ಜನರು ಭಾಗಿಯಾಗಿದ್ದಾರೆ ಎಂದು ದೂರು ದಾಖಲಿಸಲಾಗಿದೆ. ನಿನ್ನೆ ರಾತ್ರಿ ವೇಳೆ ಉಡುಪಿಯ ಶ್ರೀಕೃಷ್ಣ ಮಠದ ಸಿನಿಮೀಯ ಶೈಲಿಯಲ್ಲಿ ದಾಳಿ ಮಾಡಿ ಚೈತ್ರಾ ಕುಂದಾಪುರ ಅವರನ್ನು ಬಂಧಿಸಲಾಗಿತ್ತು.

RELATED TOPICS:
English summary :BJP ticket fraud: Chaitra Kundapur and five accused in police custody for 10 days

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...