Sun,Apr28,2024
ಕನ್ನಡ / English

ಚೈತ್ರಾ ಕುಂದಾಪುರ ವಂಚನೆ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ | JANATA NEWS

14 Sep 2023
1491

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಉದ್ಯಮಿಯೊಬ್ಬರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್​ ಕೊಡಿಸುವುದಾಗಿ ನಂಬಿಸಿ ಬಹುಕೋಟಿ ರೂಪಾಯಿ ವಂಚಿಸಿರುವ ಆರೋಪ ಎದುರಿಸುತ್ತಿರುವ ಚೈತ್ರಾ ಕುಂದಾಪುರ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಪ್ರಕರಣಕ್ಕೂ ಬಿಜೆಪಿಗೂ ಸಂಬಂಧವಿಲ್ಲ. ಪ್ರಕರಣದಲ್ಲಿ ಶಾಮೀಲಾಗಿರುವ ಎಲ್ಲರನ್ನೂ ಬಂಧಿಸಲಿ. ತನಿಖೆಯ ನಂತರ ಸತ್ಯ ಹೊರಬೀಳಲಿದೆ. ಪಕ್ಷವನ್ನು ದುರುಪಯೋಗ ಪಡಿಸಿಕೊಂಡಾಗ ಬಿಜೆಪಿ ಆ ವಿಷಯದ ಬಗ್ಗೆ ಗಂಭೀರವಾಗಿ ಯೋಚಿಸುತ್ತದೆ ಎಂದು ಹೇಳಿದರು. ಪ್ರಕರಣದಲ್ಲಿ ಪ್ರಮುಖರ ಹೆಸರು ಹೊರಬೀಳಲಿದೆ ಎಂಬ ಚೈತ್ರಾ ಕುಂದಾಪುರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಹೆಸರು ಬಹಿರಂಗವಾಗಲಿ. ತನಿಖೆ ನಡೆಯುತ್ತಿದೆ ಮತ್ತು ಅದರಲ್ಲಿ ಶಾಮೀಲಾಗಿರುವವರು ಶಿಕ್ಷೆಗೆ ಅರ್ಹರು ಎಂದು ಹೇಳಿದ್ದಾರೆ.

ಟಿಕೆಟ್​ ಕೊಡಿಸುವುದಾಗಿ ವಂಚನೆ ಎಸಗಿರುವುದನ್ನು ಪಕ್ಷ ಗಂಭೀರವಾಗಿ ಪರಿಗಣಿಸಿದ್ದು, ಬಿಜೆಪಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟವಾಗಿ ಹೇಳುತ್ತೇವೆ. ತನಿಖೆ ನಂತರ ಸತ್ಯಾಂಶ ಹೊರಬರಲಿದ್ದು, ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರನ್ನೂ ಬಂಧಿಸಬೇಕು ಎಂದರು. .

ಸ್ವಾಮೀಜಿ ಸಿಕ್ಕಿಹಾಕಿಕೊಳ್ಳಲಿ, ಇನ್ನೂ ದೊಡ್ಡ ದೊಡ್ಡ ಹೆಸರು ಹೊರಗೆ ಬರುತ್ತದೆ ಎಂಬ ಚೈತ್ರಾ ಕುಂದಾಪುರ ಹೇಳಿಕೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಹೆಸರು ಹೊರಬರಲಿ. ತನಿಖೆ ಆರಂಭವಾಗಿದ್ದು, ಭಾಗಿಯಾದ ಎಲ್ಲರಿಗೂ ಶಿಕ್ಷೆಯಾಗಬೇಕು ಎಂದರು.

ಮುಂಬರುವ ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಜೆಡಿಎಸ್ ಜೊತೆಗಿನ ಮೈತ್ರಿ ವಿಚಾರಕ್ಕೆ ಕುರಿತಂತೆ ಮಾತನಾಡಿದ ಅವರು, ಸೀಟು ಹಂಚಿಕೆ ಕುರಿತು ಚರ್ಚೆಗಳು ಪ್ರಾಥಮಿಕ ಹಂತದಲ್ಲಿವೆ. ಹಿರಿಯ ನಾಯಕರು ಮಾತುಕತೆ ನಡೆಸಿ ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷವಾಗಿ ಹೆಚ್ಚು ಸ್ಥಾನ ಪಡೆಯುವ ಉದ್ದೇಶ ಹೊಂದಿದ್ದೇವೆ. ನಾವು ಅಮತಿಮ ಅಭಿಪ್ರಾಯಕ್ಕೆ ಬಂದಿಲ್ಲ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

RELATED TOPICS:
English summary :We have nothing to do with the Chaitra Kundapur fraud case

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...