Sat,May04,2024
ಕನ್ನಡ / English

ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ - ಬಿಜೆಪಿ | JANATA NEWS

21 Sep 2023
1142

ಬೆಂಗಳೂರು : ಕನ್ನಡಿಗರು ನೀರಿಲ್ಲದೆ ಪರಿತಪಿಸುತ್ತಿದ್ದರೂ ಪರವಾಗಿಲ್ಲ, ಕಾಂಗ್ರೆಸ್ಸಿಗೆ I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಬೇಕಿದೆ‌, ಎಂದು ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿರೋಧಪಕ್ಷವಾದ ಬಿಜೆಪಿ ಗಂಭೀರ ಆರೋಪ ಮಾಡಿದೆ.

"ಕಾವೇರಿ ನದಿ ನೀರಿನ ಹಂಚಿಕೆಯ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ ಮತ್ತೊಮ್ಮೆ ಬಯಲಾಗಿದೆ. ಸುಪ್ರೀಂಕೋರ್ಟ್‌ನಲ್ಲಿ ಕರ್ನಾಟಕದ ಪರ ಸಮರ್ಥವಾಗಿ ವಾದ ಮಂಡಿಸುವಲ್ಲಿ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದ್ದು, ಮಿತ್ರಪಕ್ಷ ಡಿಎಂಕೆಯ ಸರ್ಕಾರದ ಮುಂದೆ ಮಂಡಿಯೂರಿ ಕುಳಿತು ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತಂದಿದೆ.

ತಮಿಳುನಾಡಿಗೆ ಪ್ರತಿದಿನ 5000 ಕ್ಯೂಸೆಕ್ಸ್ ನೀರು ಬಿಡಲು ಸಿದ್ದರಾಮಯ್ಯರವರ ಸರ್ಕಾರ ಒಪ್ಪಿಕೊಂಡು ಬಂದಿದೆ. ಕನ್ನಡಿಗರು ನೀರಿಲ್ಲದೆ ಪರಿತಪಿಸುತ್ತಿದ್ದರೂ ಪರವಾಗಿಲ್ಲ, ಕಾಂಗ್ರೆಸ್ಸಿಗೆ I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಬೇಕಿದೆ‌.

"ನಾನು ಸತ್ತಂತೆ ಮಾಡುವೆ, ನೀನು ಅತ್ತಂತೆ ಮಾಡು" ಎನ್ನುವ ಧೋರಣೆಯ ಮೂಲಕ ಕಾಂಗ್ರೆಸ್ ಸರ್ಕಾರ ಕನ್ನಡನಾಡಿಗೆ ದ್ರೋಹ ಬಗೆದಿದೆ. ಕೊಡಗಿನ ಕಾವೇರಿಯ ಕೊನೆ ಹನಿ ಕೂಡ ತಮಿಳುನಾಡು ಪಾಲಾಗುವುದು ನಿಶ್ಚಿತ", ಎಂದು ಬಿಜೆಪಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.

ಕರ್ನಾಟಕ ಮತ್ತು ತಮಿಳುನಾಡು ಎರಡು ರಾಜ್ಯಗಳ ನಡುವಿನ ಕಾವೇರಿ ನದಿ ನೀರು ಹಂಚಿಕೆ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ನಡೆಸಿದ್ದು, ಅಂತಾರಾಜ್ಯ ಗಡಿ ಬಿಳಿಗುಂಡ್ಲುವಿನಲ್ಲಿ 5000 ಕ್ಯೂಸೆಕ್ ಕಾವೇರಿ ನದಿ ನೀರು ಬಿಡುವಂತೆ ಸಿಡಬ್ಲೂಆರ್ಸಿ ಮತ್ತು ಸಿಡಬ್ಲೂಎಂಎ ನಿರ್ದೇಶನದ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದ ಬೆನ್ನಲ್ಲೇ ವಿರೋಧಪಕ್ಷದ ಗಂಭೀರ ಆರೋಪ ಬಂದಿದೆ.

English summary :Karnataka lost case in Supreme Court : Congress govt hypocrisy to survive I.N.D.I.Alliance - BJP

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...