Sun,May05,2024
ಕನ್ನಡ / English

ತಮಿಳುನಾಡಿಗೆ ಪ್ರತಿ ದಿನ 3000 ಕ್ಯೂಸೆಕ್ ನೀರು ಹರಿಸುವಂತೆ ಮತ್ತೆ ಆದೇಶ, ರೈತರ ಆಕ್ರೋಶ | JANATA NEWS

29 Sep 2023
1666

ಬೆಂಗಳೂರು : ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಶುಕ್ರವಾರ ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲೂ ಅಕ್ಟೊಬರ್15ರವರೆಗೆ ಪ್ರತಿದಿನ 3000 ಕ್ಯೂಸೆಕ್ ನೀರು ಹರಿಸುವಂತೆ ಆದೇಶ ನೀಡಿದೆ.

ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಒತ್ತಾಯಿಸಿ ಇಂದು ಕನ್ನಡ ಪರ ಸಂಘಟನೆಗಳು ಮತ್ತು ರೈತರು ಸೇರಿದಂತೆ ಹಲವಾರು ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದವು. ತಮಿಳುನಾಡಿಗೆ ನೀರು ಹರಿಸದಂತೆ ಒತ್ತಾಯಿಸಿ ಒಂದು ವಾರದಲ್ಲಿ ನಡೆದ ಎರಡನೇ ಬಂದ್ ಇದಾಗಿದೆ.

ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿ ದಿನ 3 ಸಾವಿರ ಕ್ಯೂಸೆಕ್ ನೀರು ಹರಿಸಬೇಕೆಂದು ಮಂಗಳವಾರ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಆದೇಶವನ್ನು ಪಾಲಿಸುವಂತೆ ಸಿಡಬ್ಲ್ಯುಎಂಎ ಸೂಚನೆ ನೀಡಿದೆ.

ಸರ್ಕಾರ ಈ ವಿಚಾರವಾಗಿ ಮಾತನಾಡಬೇಕು. ಸಂಜೆ ಆರು ಗಂಟೆ ಒಳಗೆ ನಿಮ್ಮ ಅಭಿಪ್ರಾಯವನ್ನ ಸರ್ಕಾರ ತಿಳಿಸಬೇಕು. ಇಲ್ಲವಾದರೇ ಹೋರಾಟದ ರೂಪ ಬದಲಾಗುತ್ತದೆ ಎಂದು ರೈತರು ಆಕ್ರೋಶ ಹೊರಹಾಕಿದ್ದು, ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ಬೆಂಗಳೂರು ಮೈಸೂರು ಹೆದ್ದಾರಿ ತಡೆದು ಪ್ರತಿಭಟಿಸಿದರು.

ಜೂನ್​ನಿಂದ ಸೆಪ್ಟೆಂಬರ್​ವರೆಗೆ ಕರ್ನಾಟಕ 123 ಟಿಎಂಸಿ ನೀರು ಹರಿಸಬೇಕಿತ್ತು. ಆದರೆ, ಈವರೆಗೆ ಕೇವಲ 40 ಟಿಎಂಸಿ ನೀರು ಮಾತ್ರ ಹರಿಸಿದೆ. ಬಾಕಿ 83 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಸೂಚಿಸಬೇಕು ಎಂದು ಸಿಡಬ್ಲ್ಯುಎಂಎ ಸಭೆಯಲ್ಲಿ ತಮಿಳುನಾಡು ಸರ್ಕಾರದ ಪರ ಅಧಿಕಾರಿಗಳು ವಾದ ಮಂಡನೆ ಮಾಡಿದರು.

ತಮಿಳುನಾಡು, ಕರ್ನಾಟಕ, ಕೇರಳ ಪುದುಚೇರಿಯ ಅಧಿಕಾರಿಗಳು ಇದರಲ್ಲಿ ಭಾಗವಹಿಸಿದ್ದರು. ಈ ಸಭೆಯಲ್ಲಿ ಕಾವೇರಿ ನೀರು ನಿರ್ವಹಣಾ ಸಮಿತಿ ಶಿಫಾರಸನ್ನು ಪರಿಶೀಲಿಸಿ ಅ.15ರವರೆಗೆ ಪ್ರತಿ ದಿನ 3000 ಕ್ಯೂಸೆಕ್ ನೀರು ಹರಿಸುವಂತೆ ಆದೇಶ ಹೊರಬಂದಿದೆ.

ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಎಂದು ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಿದ ಕನ್ನಡ ಪರ ಸಂಘಟನೆಗಳು ರಾಜ್ಯದಂತ ಪ್ರತಿಭಟನೆ ಮತ್ತು ಹೋರಾಟ ನಡೆಸುತ್ತಿದ್ದು ಕರ್ನಾಟಕ ಬಂದ್ ಬಹುತೇಕ ಯಶಸ್ವಿಯಾಗಿ ನಡೆಯುತ್ತಿದೆ.

English summary :Again the order to release 3000 cusecs of water to Tamilnadu every day, farmers are outraged

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...