Fri,May03,2024
ಕನ್ನಡ / English

ಕಾವೇರಿ ನೀರು ಸಂಕಷ್ಟ ಸೂತ್ರ ರೆಡಿ ಮಾಡ್ತೇವೆ: ಡಿ.ಕೆ.ಶಿವಕುಮಾರ್ | JANATA NEWS

29 Sep 2023
1670

ಬೆಂಗಳೂರು : ಮಳೆ ಇಲ್ಲದ ಸಂಕಷ್ಟದ ಕಾಲದಲ್ಲಿ ನೀರು ಹರಿಸುವ ಹೊಸ ಸೂತ್ರ ರೂಪಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಗೆ ಆಗ್ರಹ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಸಂಕಷ್ಟ ಸೂತ್ರ ಆಗ್ರಹ ಮಾಡುವ ಮೊದಲು ನಮಗೆ ಅದರ ಬಗ್ಗೆ ಸ್ಪಷ್ಟತೆ ಇರಬೇಕು. ಅದಕ್ಕೆ ನಾವು ಮೊದಲು ಒಂದು ಸೂತ್ರದ ಬಗ್ಗೆ ಚರ್ಚೆ ಮಾಡುತ್ತೇವೆ. ಅದಕ್ಕಾಗಿ ಇಂದು ಸಂಜೆ ಸಭೆ ಕರೆಯಲಾಗಿದೆ. ರಾಜ್ಯದ ಹಿತವನ್ನು ಸುಪ್ರೀಂಕೋರ್ಟಿನಲ್ಲಿ ಕಾಪಾಡಿದಂತಹ ಹಿರಿಯ ನ್ಯಾಯವಾದಿಗಳು, ಅಡ್ವೋಕೇಟ್ ಜನರಲ್ ಹಾಗೂ ಹಿರಿಯ ನೀರಾವರಿ ತಜ್ಞರ ಜೊತೆ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಚರ್ಚೆ ನಡೆಸುತ್ತೇವೆ ಎಂದರು.

ಇಂದು ನಡೆಯುವ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಗೆ ಆನ್‌ಲೈನ್ ಮೂಲಕ ಭಾಗವಹಿಸದೇ ಖುದ್ದಾಗಿ ಭಾಗವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ನೀರಿನ ಬಿಡುಗಡೆ ಬಗ್ಗೆ ವಿರೋಧ ಪಕ್ಷದವರು, ಬೇರೆಯವರು ಏನೇನೋ ಹೇಳುತ್ತಾರೆ.

ನನಗೆ ಅವರಿಗಿಂತ, ಬೇರೆಯವರಿಗಿಂತ ಹೆಚ್ಚು ಜವಾಬ್ದಾರಿ ಇದೆ. ಬಾಯಿಗೆ ಬಂದಂತೆ ಮಾತನಾಡುವ ಜಾಯಮಾನ ನನ್ನದಲ್ಲ, ನಾನು ಸಹ ರೈತ ಎಂದು ವಿರೋಧ ಪಕ್ಷದವರಿಗೆ ತಿರುಗೇಟು ನೀಡಿದರು.

ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಬಂದ್ ನಿರ್ವಹಣೆ ಮಾಡಿದ್ದೇವೆ. ಕರ್ನಾಟಕ ಬಂದ್ ಮಾಡುವುದು ಅವಶ್ಯಕತೆ ಇರಲಿಲ್ಲ. ಪ್ರತಿಭಟನೆ ಮಾಡಲು ಯಾರಿಗೂ ನಾವು ಅಡ್ಡಿ ಮಾಡುವುದಿಲ್ಲ ಎಂದು ಹೇಳಿದ್ದೆವು, ಅದರಂತೆ ಬಂದ್ ವೇಳೆಯಲ್ಲಿ ಸಾವರ್ಜನಿಕರಿಗೆ ತೊಂದರೆಯಾಗದಂತೆ ರಕ್ಷಣೆ ಕೊಟ್ಟಿದ್ದೇವೆ. ಸಾರಿಗೆ, ದಿನನಿತ್ಯ ಬಳಕೆಯ ವಸ್ತುಗಳ ಲಭ್ಯತೆಗೆ ತೊಂದರೆ ಆಗದಂತೆ ನೋಡಿಕೊಂಡಿದ್ದೇವೆ ಎಂದು ತಿಳಿಸಿದರು.

ಕೆಲವರು ನನ್ನ ಬೇಜವಾಬ್ದಾರಿ ಬಗ್ಗೆ ಮಾತನಾಡುತ್ತಾರೆ. ಅವರ ಹಾಗೆ ನಾನು ಮಾತನಾಡಲ್ಲ. ನನಗೆ ಅವರಗಿಂತ ಜವಾಬ್ದಾರಿ ಹೆಚ್ಚಿದೆ. ಜವಾಬ್ದಾರಿಯುತ ಸಚಿವನಾಗಿ ನಾನು ಮಾತನಾಡಬೇಕು. ಈ ಬಂದ್ ಎಲ್ಲ ಮುಗಿಯಲಿ, ನಾವು ಚರ್ಚೆ ಮಾಡುತ್ತಿದ್ದೇವೆ ಎಂದರು.

RELATED TOPICS:
English summary :Cauvery water shortage formula ready: D.K.Sivakumar

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...