Sun,Apr28,2024
ಕನ್ನಡ / English

ನೇಣುಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ, ಅಳಿಯನೇ ಕೊಲೆ ಮಾಡಿದ್ದಾನೆ ಎಂದು ಮೃತಳ ಪೋಷಕರ ದೂರು | JANATA NEWS

05 Oct 2023
1034

ಬೆಂಗಳೂರು : ಬೆಂಗಳೂರಿನಲ್ಲಿ ವಿವಾಹಿತ ಮಹಿಳೆಯೊಬ್ಬರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಹೆಂಡತಿಯನ್ನು ಕೊಲೆ ಮಾಡಿ ಆತ್ಮಹತ್ಯೆ ಅಂತ ಬಿಂಬಿಸಲು ಪ್ರಯತ್ನಿಸಿದ್ದಾನೆ ಎಂದು ಮಗಳನ್ನು ಕಳೆದುಕೊಂಡ ಪೋಷಕರು ಆರೋಪಿಸಿದ್ದಾರೆ.

ಯಲಹಂಕ ನ್ಯೂಟೌನ್​ನಲ್ಲಿ ವಾಸವಾಗಿದ್ದ ಮನೆಯಲ್ಲಿ ರೇಖಾ ಎಂಬಾಕೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪತಿ ಸಂತೋಷ್ ಕೊಲೆ ಮಾಡಿರುವುದಾಗಿ ರೇಖಾಳ ಪೋಷಕರು ದೂರು ನೀಡಿದ್ದು, ಈ ಸಂಬಂಧ ಸಂತೋಷ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೃತ ರೇಖಾ ಮತ್ತು ಸಂತೋಷ್​ ಇಬ್ಬರು ತಮಿಳುನಾಡು ಮೂಲದವರಾಗಿದ್ದು, ಬೆಂಗಳೂರಿನಲ್ಲೇ ನೆಲೆಸಿದ್ದರು, ಶಾಲೆಯಿಂದಲೇ ಪರಸ್ಪರ ಇಬ್ಬರು ಪ್ರೀತಿಸುತ್ತಿದ್ದ ಜೋಡಿ, ಕಳೆದ ಒಂದೂವರೆ ವರ್ಷದ ಹಿಂದಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರಂತೆ. ಇಬ್ಬರ ದಾಂಪತ್ಯ ಜೀವನಕ್ಕೆ ಸಾಕ್ಷಿಯಾಗಿ 6 ತಿಂಗಳ ಹೆಣ್ಣು ಮಗು ಕೂಡ ಇದೆ.

ಸಂತೋಷ್ ವೆಲ್ಡಿಂಗ್ ಕೆಲಸ ಮಾಡುತ್ತಿದ್ದರೆ ರೇಖಾ ಗೃಹಿಣಿಯಾಗಿದ್ದಳು. ಇಬ್ಬರು ನಡುವೆ ಅನೋನ್ಯತೆಯಿಂದಲೇ ಇದ್ದರು. ಕಾಲಕ್ರಮೇಣ ವರದಕ್ಷಿಣೆ ನೀಡುವಂತೆ ಸಂತೋಷ್‌‌ ಪೀಡಿಸುತ್ತಿದ್ದ. ಮದುವೆ ವೇಳೆ ಚಿನ್ನ ಹಾಗೂ ಹಣವನ್ನು ವರದಕ್ಷಿಣೆ ರೂಪದಲ್ಲಿ ರೇಖಾ ಮನೆಯವರು ನೀಡಿದ್ದರು.

ಮದುವೆ ಆದಾಗಿನಿಂದಲೂ ಸಂತೋಷ್​ ಹಣಕ್ಕಾಗಿ ಹೆಂಡತಿಯನ್ನು ಪೀಡಿಸುತ್ತಿದ್ದನಂತೆ. ಹಣ, ಒಡವೆ ಕೊಟ್ಟು ಅದ್ದೂರಿಯಾಗಿ ಮದುವೆ ಮಾಡಿದ್ದರೂ, ಸೈಟ್ ತಗೋಬೇಕು ತವರು ಮನೆಯಿಂದ ಹಣ ತರುವಂತೆ ಒತ್ತಾಯ ಮಾಡುತ್ತಿದ್ದನಂತೆ. ಇದೇ ವಿಚಾರಕ್ಕಾಗಿ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.

ಸಾವಿನ ಹಿಂದೆ ಅಳಿಯ ಸಂತೋಷ್ ಕೈವಾಡವಿದೆ. ರೇಖಾಳನ್ನು ಸಾಯಿಸಿ ಬಂಧನ ಭೀತಿಯಿಂದ ತಪ್ಪಿಸಿಕೊಳ್ಳಲು ನೇಣುಬಿಗಿದುಕೊಂಡಿರುವ ಹಾಗೆ ಬಿಂಬಿಸಿದ್ದಾನೆ ಎಂದು ಮೃತಳ ಪೋಷಕರು ದೂರು ನೀಡಿದ್ದಾರೆ.

ಸದ್ಯ ರೇಖಾ ಮೃತದೇಹವನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಆರೋಪಿ ಸಂತೋಷ್ ನನ್ನು ಯಲಹಂಕ ನ್ಯೂ ಟೌನ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

RELATED TOPICS:
English summary :The dead body of the woman was found in a hanging state and the parents of the deceased complained that her son-in-law had killed her

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...