Sun,Apr28,2024
ಕನ್ನಡ / English

4,860 ಕೋಟಿ ರೂ.ಗಳ ಪರಿಹಾರವನ್ನು ಕೇಂದ್ರದಿಂದ ಕೋರಲಾಗಿದೆ: ಸಿಎಂ ಸಿದ್ದರಾಮಯ್ಯ | JANATA NEWS

06 Oct 2023
1086

ಚಿತ್ರದುರ್ಗ : 4,860 ಕೋಟಿ ರೂ.ಗಳ ಪರಿಹಾರವನ್ನು ಕೇಂದ್ರದಿಂದ ಕೋರಲಾಗಿದೆ, ಕೇಂದ್ರ ಸರ್ಕಾರ ಎಷ್ಟಾದರೂ ಬರ ಪರಿಹಾರ ಹಣವನ್ನು ಕೊಡಲಿ. ರಾಜ್ಯ ಸರ್ಕಾರ ಬರಗಾಲವನ್ನು ಸಮರ್ಥವಾಗಿ ಎದುರಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಜಿಲ್ಲೆಯ ಹಿರಿಯೂರಿನ ಬಬ್ಬೂರು ಫಾರಂನಲ್ಲಿ ಆಯೋಜಿಸಿದ್ದ ಕೃಷಿ ಕೇಂದ್ರದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ಯಾರಂಟಿಗಳಿಗಾಗಿ ರಾಜ್ಯದ ಅಭಿವೃದ್ಧಿಗಳು ಕುಂಥಿತಗೊಂಡಿವೆ ಅನ್ನೋದು ಸುಳ್ಳು. ಬಿಜೆಪಿ ನಾಯಕರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಹಾಳು ಮಾಡಿದ್ದೇ ಅವರು.​ ನಾವು ಈ ಹಿಂದೆ ಆಡಳಿತ ನಡೆಸಿದ್ದೆವು. ಯಾವುತ್ತೂ ಇಷ್ಟು ಪ್ರಮಾಣದ ಸಾಲ ಮಾಡಿರಲಿಲ್ಲ. ಹಾಗಾಗಿ ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕತೆಯೂ ಅವರಿಗಿಲ್ಲ ಎಂದು ಕಿಡಿ ಕಾರಿದರು.

ರಾಜ್ಯದಲ್ಲಿ ಬರಪರಿಸ್ಥಿತಿಯಿಂದ ಸುಮಾರು 30 ಸಾವಿರ ಕೋಟಿ ರೂ. ಬೆಳೆಹಾನಿಯಾಗಿದೆ. NDRF ಮಾರ್ಗಸೂಚಿಯಂತೆ 4,860 ಕೋಟಿ ರೂ. ಪರಿಹಾರವನ್ನು ಕೋರಲಾಗಿದ್ದು, ಈ ಮೊತ್ತವನ್ನು ಬಿಡುಗಡೆ ಮಾಡಬೇಕೆಂದು ಕೇಂದ್ರವನ್ನು ಒತ್ತಾಯಿಸಿದ್ದೇವೆ ಎಂದು ಹೇಳಿದ್ದಾರೆ.

195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಇನ್ನೂ 15-20 ತಾಲೂಕುಗಳು ಬರಪೀಡಿತ ಎಂದು ಘೋಷಣೆ ಮಾಡುತ್ತೇವೆ. ಆಗಸ್ಟ್​ ತಿಂಗಳಿನಲ್ಲಿ ಮಳೆ ಸಂಪೂರ್ಣ ಕೈಕೊಟ್ಟಿದೆ. ಕೃಷಿ ವಿವಿ, ತೋಟಗಾರಿಕೆ ವಿವಿಗಳಲ್ಲಿ ಹೆಚ್ಚು ಸಂಶೋಧನೆ ಆಗಬೇಕು ಎಂದಿದ್ದಾರೆ.

ಕೃಷ್ಣಾ ಮೇಲ್ದಂಡೆ ಹಾಗೂ ನಾರಾಯಣಪುರ ಜಲಾಶಯಗಳನ್ನು ಹೊರತುಪಡಿಸಿ, ಕಾವೇರಿ ಸೇರಿದಂತೆ ಇನ್ನುಳಿದ ಜಲಾನಯನ ಪ್ರದೇಶಗಳಲ್ಲಿ ನೀರಿನ ಸಂಗ್ರಹವಿಲ್ಲ. ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ 4,860 ಕೋಟಿ ರೂ.ಗಳ ಪರಿಹಾರವನ್ನು ಕೇಂದ್ರದಿಂದ ಕೋರಲಾಗಿದೆ. ಈ ಬಾರಿ ಹಸಿರು ಬರ ಉಂಟಾಗಿದೆ. ಕೇಂದ್ರದ ಅಧ್ಯಯನ ತಂಡ ಮೂರು ತಂಡಗಳಲ್ಲಿ ರಾಜ್ಯದ 11 ಜಿಲ್ಲೆಗಳಿಗೆ ಭೇಟಿ ನೀಡುತ್ತಿದೆ. ಅವರು ಕೇಂದ್ರಕ್ಕೆ ವರದಿ ಸಲ್ಲಿಸಿದ ನಂತರ, ವರದಿ ಆಧರಿಸಿದಂತೆ ಕೇಂದ್ರ ಪರಿಹಾರ ನೀಡಲಿದೆ.” ಎಂದು ಹೇಳಿದ್ದಾರೆ.

RELATED TOPICS:
English summary :A compensation of Rs 4,860 crore has been sought from the Centre: CM Siddaramaiah

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...