Thu,May02,2024
ಕನ್ನಡ / English

ಐಟಿ ದಾಳಿ: ಗುತ್ತಿಗೆದಾರ ಅಂಬಿಕಾಪತಿ ಸೋದರನ ಮನೆಯಲ್ಲಿ 42 ಕೋಟಿ ರೂ. ಹಣ ಪತ್ತೆ! | JANATA NEWS

13 Oct 2023
988

ಬೆಂಗಳೂರು : ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಕಾರ್ಯಾಚರಣೆ ನಡೆಸಿದ್ದ ವೇಳೆ ಆತ್ಮಾನಂದ ಕಾಲೋನಿಯ ಫ್ಲಾಟ್ ಒಂದರ ಕೊಠಡಿಯ ಮಂಚದಡಿ ಬಚ್ಚಿಟ್ಟಿದ್ದ ಕೋಟ್ಯಂತರ ರೂಪಾಯಿ ಕಂತೆ ಕಂತೆ ನೋಟುಗಳು ಪತ್ತೆಯಾಗಿತ್ತು.

ತೆರಿಗೆ ವಂಚನೆ ಸಂಬಂಧ ನಗರದ 10ಕ್ಕೂ ಹೆಚ್ಚು ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಮಲ್ಲೇಶ್ವರಂ, ಸದಾಶಿವನಗರ, ಡಾಲರ್ಸ್ ಕಾಲೋನಿ, ಮತ್ತಿಕೆರೆ, ಸರ್ಜಾಪುರ ರಸ್ತೆ ಸೇರಿದಂತೆ 10ಕ್ಕೂ ಹೆಚ್ಚು ಕಡೆಗಳಲ್ಲಿ ಚಿನ್ನದ ವ್ಯಾಪಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಏಕಕಾಲದಲ್ಲಿ ಆರ್​ಟಿ ನಗರದ ಎರಡು ಸ್ಥಳಗಳ ಮೇಲೆ ಐಟಿ ದಾಳಿ ನಡೆದಿದ್ದು, ಆತ್ಮಾನಂದ ಕಾಲೋನಿಯ ಫ್ಲಾಟ್ ಒಂದರ ಕೊಠಡಿಯಲ್ಲಿದ್ದ ಮಂಚದಡಿ ಕಂತೆ ಕಂತೆ ನೋಟುಗಳು ಕಂಡು ಅಧಿಕಾರಿಗಳು ಬೆಚ್ಚಿಬಿದ್ದರು. ಫ್ಲಾಟ್​ನಲ್ಲಿ ಬರೊಬ್ಬರಿ 23 ಬಾಕ್ಸ್​ಗಳಲ್ಲಿ 500 ಮುಖಬೆಲೆಯ ಕಂತೆ ಕಂತೆ ನೋಟುಗಳು ಪತ್ತೆಯಾಗಿವೆ.

ಅಧಿಕಾರಿಗಳು ಮಧ್ಯರಾತ್ರಿ ಬೆಂಗಳೂರಿನ ಆರ್​​. ಟಿ.ನಗರದ ಮಾಜಿ ಕಾರ್ಪೊರೇಟರ್ ​​​ ​​​ಅಶ್ವತ್ಥಮ್ಮ, ಪತಿ ಗುತ್ತಿಗೆದಾರ ಆರ್​.ಅಂಬಿಕಾಪತಿ ಮತ್ತು ​ಅಂಬಿಕಾಪತಿ ಸೋದರ ಪ್ರದೀಪ್​​ ಫ್ಯ್ಲಾಟ್​​​​​​ ಮೇಲೆ ದಾಳಿ ಮಾಡಿದ್ದರು. ಪರಿಶೀಲನೆ ವೇಳೆ ಬೆಡ್​​ ರೂಮ್​ನ ಮಂಚದ ಕೆಳಗೆ 23 ಬಾಕ್ಸ್​​ನಲ್ಲಿ 500 ರೂ. ಮುಖಬೆಲೆಯ 40 ಕೋಟಿ ರೂ.ಗೂ ಅಧಿಕ ಹಣ ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಪ್ರದೀಪ್​ನನ್ನು ವಶಕ್ಕೆ ಪಡೆಯಲಾಗಿದೆ.

ರಾಜ್ಯದಲ್ಲಿ ನಡೆಯುವ ಕಾಮಗಾರಿಗೆ ಶೇಕಡಾ 40ರಷ್ಟು, ಬಿಬಿಎಂಪಿಯಲ್ಲಿ 50 ಪರ್ಸೆಂಟ್ ನೀಡಬೇಕು ಎಂದು ಹೇಳಿ ಕೆಲವು ರಾಜಕೀಯ ನಾಯಕರ ಮೇಲೆ ಗಂಭೀರ ಆರೋಪ ಮಾಡಿದ್ದರು.

ಬೆಂಗಳೂರಿನಲ್ಲಿ ಬಿಲ್ಡರ್ಸ್​​​, ಚಿನ್ನದ ವ್ಯಾಪಾರಿಗಳು ಹಾಗೂ ಗುತ್ತಿಗೆದಾರರಿಂದ ಈ ಹಣ ಸಂಗ್ರಹಿಸಲಾಗಿದೆ. ಹೀಗೆ ಸಂಗ್ರಹಿಸಲಾದ ಹಣವನ್ನು ಬೆಂಗಳೂರಿನಿಂದ-ಚೆನ್ನೈಗೆ, ಚೆನ್ನೈಯಿಂದ-ಹೈದರಾಬಾದ್ ಗೆ ವಾರ್ಗವಣೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ತೆಲಂಗಾಣ ರಾಜ್ಯ ವಿಧಾನಸಭೆಗೆ ಚುನಾವಣೆ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ಇಲ್ಲಿ ಹಣ ಸಂಗ್ರಹಿಸಿ ಅಲ್ಲಿಗೆ ಕಳುಹಿಸಲು ಮುಂದಾಗಿದ್ದರು ಎಂದು ತಿಳಿದುಬಂದಿದೆ.

RELATED TOPICS:
English summary :IT raid: Rs 42 crores in contractor Ambikapati brother house. Find the money!

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...