Sat,May04,2024
ಕನ್ನಡ / English

ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಕೊಡುವುದಾಗಿ ಸರ್ಕಾರದ ಖಜಾನೆ ಖಾಲಿ ಮಾಡಿದೆ | JANATA NEWS

15 Oct 2023
1455

ರಾಯಚೂರು : ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಕೊಡುವುದಾಗಿ ಸರ್ಕಾರದ ಖಜಾನೆ ಖಾಲಿ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ.

ರಾಯಚೂರಿನಲ್ಲಿ ಮಾತನಾಡಿ,ಗ್ಯಾರಂಟಿ ಕೊಡುತ್ತೇನೆ ಅಂತ ಹೇಳಿ ಖಜಾನೆ ಖಾಲಿ ಮಾಡಿದ್ದಾರೆ. ರಸ್ತೆ ಕಾಮಗಾರಿ ನೀರಾವರಿ ಯೋಜನೆಗಳಿಗೆ ಅನುದಾನ ನೀಡುತ್ತಿಲ್ಲ. ಸರ್ಕಾರ ದಿವಾಳಿಯಾಗಿದೆ ಅಂತ ಅವರೇ ಒಪ್ಪಿಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ರಾಜ್ಯದಲ್ಲಿ ಒಂದಾದ ನಂತರ ಒಂದು ಹಗರಣ ಬಯಲಾಗುತ್ತಿದೆ. ಇದಕ್ಕೆ ಸರ್ಕಾರ ಕಡಿವಾಣ ಹಾಕದಿರುವುದು ವಿಪರ್ಯಾಸ. ಕಾಂಗ್ರೆಸ್ ಸರ್ಕಾರ ಸಾವಿರಾರು ಕೋಟಿ ಹಣ ಸಂಗ್ರಹಿಸಿ ಪಂಚರಾಜ್ಯ ಚುನಾವಣೆಗೆ ಕಳುಹಿಸುವ ಆರೋಪ ಕೇಳಿ ಬರುತ್ತಿವೆ. ಈ ಬಗ್ಗೆ ಸಮಗ್ರ ತನಿಖೆ ಮಾಡಿದರೆ ಸತ್ಯಾಸತ್ಯತೆ ಬಯಲಾಗಲಿದೆ. ಇತ್ತೀಚೆಗೆ ನಡೆದ ಐಟಿ ದಾಳಿಯೇ ಇದಕ್ಕೆ ಉತ್ತಮ ಉದಾಹರಣೆ ಎಂದು ದೂರಿದರು.

ರಾಜ್ಯದಲ್ಲಿ ಗೊಂದಲಮಯ ವಾತಾವರಣ ನಿರ್ಮಾಣವಾಗಿದೆ. ನಮ್ಮ ಸರ್ಕಾರ ಇದ್ದಾಗ ಗುತ್ತಿಗೆದಾರರು ಆರೋಪ ಮಾಡಿದ್ದರು. ಈಗಲೂ ಗುತ್ತಿಗೆದಾರರು ನೇರವಾಗಿ ಆರೋಪ ಮಾಡುತ್ತಿದ್ದಾರೆ.ಕೆಲಸ ಕಾರ್ಯ ನಿಲ್ಲಿಸುತ್ತೇವೆ ಅಂತ ಗುತ್ತಿಗೆದಾರರು ಹೇಳುತ್ತಿದ್ದಾರೆ. ಎಂದು ರಾಯಚೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ವಿದ್ಯುತ್ ಕಣ್ಣ ಮುಚ್ಚಾಲೆಯಿಂದ ರಾಜ್ಯದ ಜನ ಸಂಕಷ್ಟದಲ್ಲಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ಜನರ ಹಿತವನ್ನು ಸಂಪೂರ್ಣ ಮರೆತಿದೆ. ಬೇರೆ ಕಡೆ ವಿದ್ಯುತ್ ಖರೀದಿ ಮಾಡಿ ಸಮಸ್ಯೆ ಬಗೆಹರಿಸಬೇಕು. ನಮ್ಮ ಅವಧಿಯಲ್ಲಿ ವಿದ್ಯುತ್ ಸಮಸ್ಯೆಯನ್ನು ಬಗೆಹರಿಸಿದ್ದೆವು. ರಾಜ್ಯ ಕಾಂಗ್ರೆಸ್ ಸರ್ಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದರು.

ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಕೊಡುವುದಾಗಿ ಸರ್ಕಾರದ ಖಜಾನೆ ಖಾಲಿ ಮಾಡಿದೆ. ಅಭಿವೃದ್ಧಿ ಸಂಪೂರ್ಣ ಸ್ಥಗಿತಗೊಂಡಿದೆ. ಒಂದೆರಡು ಕಿಮೀ ರಸ್ತೆ ಕಾಮಗಾರಿಯೂ ನಡೆಯುತ್ತಿಲ್ಲ. ನೀರಾವರಿ ಕಾಮಗಾರಿಗಳು ನಿಂತು ಹೋಗಿದೆ. ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ.. ಜನ ಬೀದಿಗಿಳಿದು ಹೋರಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಾಗ್ದಾಳಿ ನಡೆಸಿದರು.

RELATED TOPICS:
English summary :The Congress government has emptied the government treasury to give a guarantee

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...