Thu,May02,2024
ಕನ್ನಡ / English

ಸಿಕ್ಕಸಿಕ್ಕ ಕಡೆ ಬಾಯಿ ಹಾಕುತ್ತಿರುವ ಪರ್ಸಂಟೇಜ್ ಪಟಾಲಂ ಈಗ ಕಸಕ್ಕೂ ಬಾಯಿ ಹಾಕಿದೆ! | JANATA NEWS

15 Oct 2023
1317

ಬೆಂಗಳೂರು : ಸಿಕ್ಕಸಿಕ್ಕ ಕಡೆ ಬಾಯಿ ಹಾಕುತ್ತಿರುವ ಪರ್ಸಂಟೇಜ್ ಪಟಾಲಂ ಈಗ ಕಸಕ್ಕೂ ಬಾಯಿ ಹಾಕಿದೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ರಾಮನಗರ ಜಿಲ್ಲೆ ಸೇರಿ ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ರಾಜಧಾನಿಯ ಕಸ ಸುರಿಯುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಅಕ್ಕಪಕ್ಕದ ಜಿಲ್ಲೆಗಳ ಜನರ ಸಮಾಧಿ ಮೇಲೆ ಬ್ರ್ಯಾಂಡ್ ಬೆಂಗಳೂರು ಕಟ್ಟಿದರೆ ಅದಕ್ಕೆ ನಮ್ಮ ತೀವ್ರ ವಿರೋಧವಿದೆ.
ಸರಕಾರ ಈ ನಿರ್ಧಾರವನ್ನು ಕೈಬಿಡದಿದ್ದರೆ ಜನರು ಬೀದಿಗೆ ಇಳಿದಾರು ಎಂದು ನೇರ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಸಿಕ್ಕಸಿಕ್ಕ ಕಡೆ ಬಾಯಿ ಹಾಕುತ್ತಿರುವ 'ಪರ್ಸಂಟೇಜ್ ಪಟಾಲಂ' ಈಗ ಕಸಕ್ಕೂ ಬಾಯಿ ಹಾಕಿದೆ! ಬ್ರ್ಯಾಂಡ್ ಬೆಂಗಳೂರು ಅನ್ನುವುದು ಕೆಲವರಿಗೆ ಬಿರಿಯಾನಿ!! ಅದರ ಒಳಗುಟ್ಟು ರಟ್ಟಾಗಿದೆ!!

'ಬ್ರ್ಯಾಂಡ್' ಹೆಸರಿನಲ್ಲಿ ಕೊಳ್ಳೆ ಹೊಡೆಯಲು, ಕಂಡ ಕಂಡ ಕಡೆ ಬೇಲಿ ಹಾಕಲು ಬೆಂಗಳೂರಿನ ನಾಲ್ಕೂ ದಿಕ್ಕುಗಳಲ್ಲಿಯೂ ಕಸದ ಡಂಪಿಂಗ್ ಯಾರ್ಡ್ʼಗಳನ್ನು ಸೃಷ್ಟಿ ಮಾಡುತ್ತಿರುವುದು ದಿಟ. ದಿನವೊಂದಕ್ಕೆ 1,630 ಟನ್ ಕಸ ಸುರಿದರೆ ಅಲ್ಲಿನ ಜನರ ಪಾಡೇನು? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡೂರು ಜನ ಎದುರಿಸಿದ ಕಷ್ಟ ಅಷ್ಟಿಷ್ಟಲ್ಲ.

ಯಶವಂತಪುರ ಕ್ಷೇತ್ರದ ಜನ ಈ ನರಕದಲ್ಲೇ ಬೇಯುತ್ತಿದ್ದಾರೆ. ದೊಡ್ಡಬಳ್ಳಾಪುರದ ಜನರೂ ಕಸದ ಕಷ್ಟಕ್ಕೆ ಸಿಲುಕಿದ್ದಾರೆ. ಈಗ ರಾಮನಗರದ ಸರದಿ. ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳನ್ನು ʼಕಸದ ತೊಟ್ಟಿʼಗಳನ್ನಾಗಿ ಮಾಡಿ ʼಸಾವಿನ ದಿಬ್ಬʼಗಳನ್ನು ನಿರ್ಮಿಸಲು ʼಬ್ರ್ಯಾಂಡ್ ಬೆಂಗಳೂರುʼ ಹೆಸರಿನಲ್ಲಿ ಹುನ್ನಾರ ಹೂಡಲಾಗಿದೆ ಎಂದು ಟ್ವೀಟ್ ಮೂಲಕ ಎಚ್‌ಡಿಕೆ ಕಿಡಿಕಾರಿದ್ದಾರೆ.

ಜಗತ್ತಿನಲ್ಲಿಯೇ ಉತ್ಕೃಷ್ಟ ಮಾವು, ರೇಷ್ಮೆ, ಹಣ್ಣು, ತರಕಾರಿ ಬೆಳೆಯುತ್ತಿರುವ ರಾಮನಗರ, ಬಿಡದಿ ಬಳಿ ನೂರು ಎಕರೆ ಪ್ರದೇಶದಲ್ಲಿ ಕಸ ಸುರಿಯಲು ಉಪ ಮುಖ್ಯಮಂತ್ರಿಗಳ ದೊಡ್ಡ ಹುನ್ನಾರದ ಒಳ ಉದ್ದೇಶ ಸ್ಪಷ್ಟ. ಈಗಾಗಲೇ ವೃಷಭಾವತಿ ಸೇರಿ ರಾಮನಗರ ಜಿಲ್ಲೆಯ ಜಲಮೂಲಗಳು ಪೂರ್ಣ ಹಾಳಾಗಿ ಅಂತರ್ಜಲವೂ ಕಲುಷಿತವಾಗಿದೆ ಅಂತ ಎಚ್‌ಡಿಕೆ ಕಳವಳ ವ್ಯಕ್ತಪಡಿಸಿದ್ದಾರೆ.

ನೂರು ಎಕರೆ ಸರ್ಕಾರಿ ಭೂಮಿಯನ್ನು ಅನಾಮತ್ತಾಗಿ ಎಗರಿಬಿಡುವ ರಿಯಲ್ ಎಸ್ಟೇಟ್ ಬ್ರ್ಯಾಂಡೆಡ್ ಪರಿಕಲ್ಪನೆ ಇದಲ್ಲದೆ ಮತ್ತೇನು? ಅಕ್ಕಪಕ್ಕದ ಜಿಲ್ಲೆಗಳ ಜನರ ಸಮಾಧಿಯ ಮೇಲೆ ಬ್ರ್ಯಾಂಡ್ ಬೆಂಗಳೂರು ಕಟ್ಟಿದರೆ ಅದಕ್ಕೆ ನಮ್ಮ ತೀವ್ರ ವಿರೋಧವಿದೆ. ಕಾಂಗ್ರೆಸ್ ಸರ್ಕಾರವು ಈ ನಿರ್ಧಾರವನ್ನು ಕೈಬಿಡದಿದ್ದರೆ ಜನರು ಬೀದಿಗೆ ಇಳಿದಾರು ಎಂದು ಹೆಚ್‌ಡಿಕೆ ಎಚ್ಚರಿಕೆ ನೀಡಿದ್ದಾರೆ.

RELATED TOPICS:
English summary :Garbage dumping to neighboring districts of Bangalore including Ramnagar

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...