Mon,May06,2024
ಕನ್ನಡ / English

ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರರ ಕ್ಷೇತ್ರ ಚುನಾವಣೆ-2024 | JANATA NEWS

27 Oct 2023
1374

ಬೆಂಗಳೂರು :
ಬೆಂಗಳೂರು ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರ ಚುನಾವಣೆಗೆ ಸಂಬಂದಿಸಿದ ಕಾರ್ಯಚಟುವಟಿಕೆಗಳ ಕುರಿತು *ವಿಶೇಷ ಆಯುಕ್ತರು(ಚುನಾವಣೆ) ಆರ್. ರಾಮಚಂದ್ರನ್* ರವರ ನೇತೃತ್ವದಲ್ಲಿ ವಿವಿಧ ರಾಜಕೀಯ ಪಕ್ಷದ ಪ್ರತಿನಿಧಿಗಳ ಜೊತೆ ಸಭೆ ನಡೆಯಿತು.

> ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರರ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾ ಚುನಾವಣಾಧಿಕಾರಿಗಳು-ಬೆಂಗಳೂರು ರವರ ವ್ಯಾಪ್ತಿಯಲ್ಲಿ ಪದವೀಧರರ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ನೂತನವಾಗಿ(de-novo) ಮತದಾರ ಪಟ್ಟಿಯನ್ನು ಸಿದ್ದಪಡಿಸಲಾಗುವುದು.

> ಭಾರತ ಚುನಾವಣಾ ಆಯೋಗದ ಉಲ್ಲೇಖಿತ ಪತ್ರದಲ್ಲಿನ ನಿರ್ದೇಶನದಂತೆ ಕರ್ನಾಟಕ ರಾಜ್ಯ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ದಿನಾಂಕ 01.11.2023ಕ್ಕೆ ಅನ್ವಯವಾಗುವಂತೆ ನೂತನವಾಗಿ(de-novo) ಮತದಾರ ಪಟ್ಟಿ ಸಿದ್ಧಪಡಿಸಲು ನಿರ್ದೇಶಿಸಲಾಗಿದೆ.

> 06-11-2023 ರಂದು ಅನ್ವಯರಿತ್ಯ ಅರ್ಜಿ ನಮೂನೆ-18 ಅಥವಾ ನಮೂನೆ-19ನ್ನು ಸ್ವೀಕರಿಸಲು ಕೊನೆಯ ದಿನಾಂಕವಾಗಿರುತ್ತದೆ. 20-11-2023 ರಂದು ಹಸ್ತಪ್ರತಿಗಳು ತಯಾರಿಕೆ ಮತ್ತು ಕರಡು ಮತದಾರರ ಪಟ್ಟಿಯನ್ನು ಮುದ್ರಿಸಬೇಕು. 23-11-2023 ರಂದು ಕರಡು ಮತದಾರರ ಪಟ್ಟಿ ಪ್ರಕಟಣೆ ಮಾಡುವುದು. 23-11-2023 ರಿಂದ 09-12-2023 ರಂದು ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದ್ದು, 25-12-2023 ರಂದು ಹಕ್ಕು ಮತ್ತು ಆಕ್ಷೇಪಣೆಗಳನ್ನು ವಿಲೇವಾರಿ ಮಾಡುವ ಮತ್ತು ಪೂರಕ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ಮತ್ತು ಮುದ್ರಿಸಲಾಗುತ್ತದೆ. 30-12-2023 ಅಂತಿಮ ಮತದಾರರ ಪಟ್ಟಿ ಪ್ರಕಟಣೆ ಮಾಡಲಾಗುತ್ತದೆ.

*ಕರ್ನಾಟಕ ರಾಜ್ಯ ವಿಧಾನ ಪರಿಷತ್ತಿನ(ಬೆಂಗಳೂರು ಶಿಕ್ಷಕರ ಮತ್ತು ಪದವೀದರರ ಕ್ಷೇತ್ರ) ಚುನಾವಣೆ-2024ರ ಸಂಬಂಧ ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಸಭೆ:*

ಮುಂಬರುವ ಕರ್ನಾಟಕ ರಾಜ್ಯ ವಿಧಾನ ಪರಿಷತ್ತಿನ(ಬೆಂಗಳೂರು ಶಿಕ್ಷಕರ ಮತ್ತು ಪದವೀದರರ ಕ್ಷೇತ್ರ) ಚುನಾವಣೆ-2024ರ ಸಂಬಂಧ ಸಹಾಯಕ ಮತದಾರರಪಟ್ಟಿ ನೊಂದಣಾಧಿಕಾರಿಗಳು ಹಾಗೂ ಅಪರ ಜಿಲ್ಲಾ ಚುನಾವಣಾಧಿಕಾರಿಗಳು(ದಕ್ಷಿಣ) ಹಾಗೂ ವಲಯ ಜಂಟಿ ಆಯುಕ್ತರು (ದಕ್ಷಿಣ) ನೋಡಲ್ ಅಧಿಕಾರಿಗಳು(ದಕ್ಷಿಣ) ರವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು,

 ಪದವೀದರರ ಕ್ಷೇತ್ರಕ್ಕೆ ಸಂಬಂಧಿಸಿದ ನಮೂನೆ 18ರ ಅರ್ಜಿಗಳನ್ನು ಸ್ವೀಕರಿಸಲು ಕಾರ್ಮಿಕ ಇಲಾಖೆಯ ಅಧಿಕಾರಿಗಳೊಂದಿಗೆ ವಿಧಾನಸಭಾವಾರು ಹಾಜರಿದ್ದ ಸಹಾಯಕ ಮತದಾರರಪಟ್ಟಿ ನೊಂದಣಾಧಿಕಾರಿಗಳು ರವರ ಸಮನ್ವಯದೊಂದಿಗೆ ತಮ್ಮ ವ್ಯಾಪ್ತಿಗೆ ಒಳಪಡುವ ಪದವೀದರರ ಮತದಾರರ ನೋಂದಣಿ ಕುರಿತು ಜಾಗೃತಿ ಮೂಡಿಸಿ ನಮೂನೆ-18ರ ಅರ್ಜಿಗಳನ್ನು ಸ್ಥಳೀಯ ನಿವಾಸಿ ಪದವೀದರರಿಗೆ ನೀಡಿ ಭರ್ತಿ ಮಾಡಿದ ಅರ್ಜಿಗಳನ್ನು ವಿಧಾನಸಭಾವಾರು ಸಹಾಯಕ ಮತದಾರರಪಟ್ಟಿ ನೊಂದಣಾಧಿಕಾರಿಗಳು ರವರ ಕಛೇರಿಗೆ ನಿಗಧಿತ ಅವಧಿಯೊಳಗೆ ಸಲ್ಲಿಸಿ ದಿನಾಂಕ: 06-11-2023ರ ಒಳಗಾಗಿ ಸ್ವೀಕೃತಿಯನ್ನು ಪಡೆಯುವಂತೆ ಸೂಚಿಸಲಾಯಿತು.

 ಕ್ಷೇತ್ರ ಶಿಕ್ಷಣಾಧಿಕಾರಿಗಳು S-1, S-2 & S-3 ರವರುಗಳು ವಿಧಾನಸಭಾವಾರು ಹಾಜರಿದ್ದ ಸಹಾಯಕ ಮತದಾರರಪಟ್ಟಿ ನೊಂದಣಾಧಿಕಾರಿಗಳು ರವರ ಸಮನ್ವಯದೊಂದಿಗೆ ತಮ್ಮ ವ್ಯಾಪ್ತಿಗೆ ಒಳಪಡುವ ಪದವೀದರರ ಮತದಾರರ ನೊಂದಣಿ ಕುರಿತು ಜಾಗೃತಿ ಮೂಡಿಸಲು ನಮೂನೆ 18 ಮತ್ತು ನಮೂನೆ 19ರ ಅರ್ಜಿಗಳನ್ನು ತಮ್ಮ ವ್ಯಾಪ್ತಿಗೆ ಒಳಪಡುವ ಶಿಕ್ಷಣ ಸಂಸ್ಥೆಗಳಿಗೆ ನೀಡಿ ಭರ್ತಿ ಮಾಡಿದ ಅರ್ಜಿಗಳನ್ನು ವಿಧಾನಸಭಾವಾರು ಸಹಾಯಕ ಮತದಾರರಪಟ್ಟಿ ನೊಂದಣಾಧಿಕಾರಿಗಳು ರವರ ಕಛೇರಿಗೆ ನಿಗಧಿತ ಅವಧಿಯೊಳಗೆ ದಿನಾಂಕ: 06-11-2023ರ ಒಳಗಾಗಿ ಸಲ್ಲಿಸಿ ಸ್ವೀಕೃತಿಯನ್ನು ಪಡೆಯುವಂತೆ ಸೂಚಿಸಲಾಯಿತು.

 ಉಪ ನಿರ್ದೇಶಕರು ಪದವಿ ಪೂರ್ವ ಶಿಕ್ಷಣ ಇಲಾಖೆ ರವರುಗಳು ವಿಧಾನಸಭಾವಾರು ಹಾಜರಿದ್ದ ಸಹಾಯಕ ಮತದಾರರಪಟ್ಟಿ ನೊಂದಣಾಧಿಕಾರಿಗಳು ರವರ ಸಮನ್ವಯದೊಂದಿಗೆ ತಮ್ಮ ವ್ಯಾಪ್ತಿಗೆ ಒಳಪಡುವ ಪದವೀದರರ ಮತದಾರರ ನೊಂದಣಿ ಕುರಿತು ಜಾಗೃತಿ ಮೂಡಿಸಲು ನಮೂನೆ 18 ಮತ್ತು ನಮೂನೆ 19ರ ಅರ್ಜಿಗಳನ್ನು ತಮ್ಮ ವ್ಯಾಪ್ತಿಗೆ ಒಳಪಡುವ ಶಿಕ್ಷಣ ಸಂಸ್ಥೆಗಳಿಗೆ ನೀಡಿ ಭರ್ತಿ ಮಾಡಿದ ಅರ್ಜಿಗಳನ್ನು ವಿಧಾನಸಭಾವಾರು ಸಹಾಯಕ ಮತದಾರರಪಟ್ಟಿ ನೊಂದಣಾಧಿಕಾರಿಗಳು ರವರ ಕಛೇರಿಗೆ ನಿಗಧಿತ ಅವಧಿಯೊಳಗೆ ದಿನಾಂಕ: 06-11-2023ರ ಒಳಗಾಗಿ ಸಲ್ಲಿಸಿ ಸ್ವೀಕೃತಿಯನ್ನು ಪಡೆಯುವಂತೆ ಸೂಚಿಸಲಾಯಿತು.

ಸಭೆಯಲ್ಲಿ ಪಶ್ಚಿಮ ವಲಯದ ಜಂಟಿ ಆಯುಕ್ತರಾದ ಯೋಗೇಶ್.ಟಿ, 7 ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ವಿದ್ಯಾಸಂಸ್ಥೆಗಳು ಹಾಗೂ ಬಿ.ಬಿ.ಎಂ.ಪಿ ದಕ್ಷಿಣ ವ್ಯಾಪ್ತಿಯ ಎಲ್ಲಾ ಸಹಾಯಕ ಮತದಾರರ ನೊಂದಣಾಧಿಕಾರಿರವರುಗಳು ಉಪಸ್ಥಿತರಿದ್ದರು.

English summary :Bangalore Teachers Constituency and Graduates Constituency Election-2024

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...