Sun,Apr28,2024
ಕನ್ನಡ / English

ಇಡೀ ದೇಶದಲ್ಲಿ ಜಾತಿ ಜನಗಣತಿ ಆರಂಭಿಸಿದ್ದು ಕಾಂಗ್ರೆಸ್ ಸರ್ಕಾರ | JANATA NEWS

29 Oct 2023
1188

ಬೆಂಗಳೂರು : ಡೀ ದೇಶದಲ್ಲಿ ಜಾತಿ ಜನಗಣತಿ ಆರಂಭಿಸಿದ್ದು ಕಾಂಗ್ರೆಸ್ ಸರ್ಕಾರ. ಆದರೆ ಈ ಹಿಂದೆ ನನ್ನ ಅವಧಿಯಲ್ಲಿ ವರದಿ ಬಿಡುಗಡೆ ಆಗಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನಿಖರವಾಗಿ ಪ್ರತಿ ಜಾತಿಗಳ ಆರ್ಥಿಕ, ಸಾಮಾಜಿಕ, ಆರ್ಥಿಕ ಸ್ಥಿತಿ ತಿಳಿಯುವ ಉದ್ದೇಶದಿಂದ ಜಾತಿಗಣತಿ ಮಾಡಿಸಿದ್ದೆ. ನಂತರ ಬಂದ ಸರ್ಕಾರಗಳು ಜಾತಿಗಣತಿ ವರದಿಯನ್ನು ಸ್ವೀಕರಿಸಲಿಲ್ಲ. ಈಗ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಅವರು ಜಾತಿಗಣತಿ ವರದಿ ಕೊಡುತ್ತಾರೆ. ನಾವು ಸ್ವೀಕರಿಸುತ್ತೇವೆ ಎಂದರು.

ಹುಟ್ಟಿನಿಂದ ಯಾರೂ ಮೇಧಾವಿಗಳಲ್ಲ. ಅವಕಾಶ ಸಿಕ್ಕರೆ ಎಲ್ಲರೂ ಮೇಧಾವಿಗಳಾಗ್ತಾರೆ. ಪ್ರತಿಭೆ ಒಂದು ಜಾತಿ, ಧರ್ಮಕ್ಕೆ ಸೀಮಿತವಲ್ಲ. ಅವಕಾಶ ಸಿಕ್ಕರೆ, ಶಿಕ್ಷಣದ ಅನುಕೂಲಗಳು ಸಿಕ್ಕರೆ ಎಲ್ಲರ ಪ್ರತಿಭೆಗಳೂ ಹೊರಗೆ ಬರುತ್ತದೆ. ಆದ್ದರಿಂದ ಸ್ವಾಭಿಮಾನಿಗಳಾಗಿ, ಉತ್ತಮ ಪ್ರಜೆಗಳಾಗಿ ಬಾಳಲು ಶಿಕ್ಷಣ ಅತ್ಯಂತ ಅಗತ್ಯ. ಎಲ್ಲರೂ ಶಿಕ್ಷಣ ಪಡೆಯಿರಿ. ಶಿಕ್ಷಣದಿಂದ ವಂಚಿತರಾದವರಿಗೆ ಶಿಕ್ಷಣ ಪಡೆಯಲು ಸಹಕರಿಸಿ ಎಂದು ಕರೆ ನೀಡಿದರು.

ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ಜಾತಿಗಣತಿಗೆ 165 ಕೋಟಿ ರೂ. ಖರ್ಚು ಮಾಡಿದ್ದೆ ಎಂದು ಹೇಳಿದ್ದಾರೆ. ಮೈತ್ರಿ ಸರ್ಕಾರ ಇದ್ದಾಗ ವರದಿ ಬಿಡುಗಡೆ ಮಾಡಿದ್ರೆ ತೆಗೆದುಹಾಕ್ತೀವಿ ಅಂತಾ ಅಧಿಕಾರಿಗಳಿಗೆ ಹೆಚ್​ಡಿ ಕುಮಾರಸ್ವಾಮಿ ಹೆದರಿಸಿದ್ದರು. ನವೆಂಬರ್​ನಲ್ಲಿ ಸರ್ಕಾರಕ್ಕೆ ಜಯಪ್ರಕಾಶ್ ಹೆಗ್ಡೆ ವರದಿ ಕೊಡುತ್ತಾರೆ. ಸಾಮಾಜಿಕ, ಆರ್ಥಿಕವಾಗಿ ಅಭಿವೃದ್ಧಿ ಆಗಬೇಕಾದರೆ ಜಾತಿಗಣತಿ ಮುಖ್ಯ. 90ರ ದಶಕದಲ್ಲೇ ಜಾತಿಗಣತಿ ನಿಲ್ಲಿಸಿಬಿಟ್ಟರು. ಆಗಿನಿಂದ ಆಗಲೇ ಇಲ್ಲ ಎಂದು ಹೇಳಿದ್ದಾರೆ.

ನಮ್ಮ ಸಮಾಜದಲ್ಲಿ ಬಹುತೇಕರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಇಡೀ ನಮ್ಮೂರಿಗೆ ನಾನೇ ಮೊದಲು ಲಾಯರ್. ಅನೇಕರು ಪದವೀಧರರಾಗಿದ್ದರೂ ನಾನೇ ಲಾಯರ್.

ನಮ್ಮಪ್ಪ ಚೆನ್ನಪ್ಪಯ್ಯ ಅಂತ ಶಾನುಭೋಗರ ಮಾತನ್ನ ಬಹಳ ಕೇಳುತ್ತಿದ್ದರು. ಎಂಎಸ್ಸಿ ನನಗೆ ಸೀಟ್ ಸಿಕ್ಕಿರಲಿಲ್ಲ,‌ ಆಗ ವ್ಯವಸಾಯ ಮಾಡೋಕೆ ಹೋದೆ. ನೀನು ಕುರುಬ, ಲಾಯರ್ ಆಗಿ ಕೆಲಸ ಮಾಡೋಕೆ ಆಗುತ್ತಾ? ನಮ್ಮಪ್ಪ ಚೆನ್ನಪ್ಪಯ್ಯ ಮಾತು ಕೇಳಿ ನೀನು ಲಾ ಮಾಡ್ಬೇಡ ಅಂದ್ರು. ಆಮೇಲೆ ಪಂಚಾಯಿತಿ ಸೇರಿಸಿ ಊರಿನವರಿಗೆಲ್ಲ ಹೇಳಿದೆ. ಭಾಗ ಕೊಟ್ಟು ಬಿಡಪ್ಪ ಅಂದೆ, ಅದಕ್ಕೆ ಲಾ ಸೇರಿಸಿದರು ಎಂದು ಹೇಳಿದ್ದಾರೆ.

ನಾನು ಬಿಎಸ್​ಸಿ ಓದುವಾಗ ಹೋಟೆಲ್‌ನಿಂದ ಸಾರು ತಂದು ರೂಮಲ್ಲಿ ಅನ್ನ ಮಾಡಿಕೊಂಡು ಊಟ ಮಾಡಬೇಕಿತ್ತು. ಇಂಥಾ ಸ್ಥಿತಿಯಲ್ಲಿ ಸಹಸ್ರಾರು ವಿದ್ಯಾರ್ಥಿಗಳು ಇರುವುದರಿಂದ ನಾನು ವಿದ್ಯಾಸಿರಿ ಕಾರ್ಯಕ್ರಮ ಜಾರಿಗೆ ತಂದೆ ಎಂದು ತಿಳಿಸಿದರು.

RELATED TOPICS:
English summary :The Congress government has started the caste census in the entire country

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...