Fri,May03,2024
ಕನ್ನಡ / English

ಮೇಕೆದಾಟು ಯೋಜನೆಯ ತ್ವರಿತ ಅನುಷ್ಠಾನಕ್ಕೆ ಪ್ರಧಾನಿ, ಜಲಸಂಪನ್ಮೂಲ ಸಚಿವರು ವಿಫಲ - ಸಿಎಂ ಸಿದ್ದರಾಮಯ್ಯ | JANATA NEWS

31 Oct 2023
1106

ಬೆಂಗಳೂರು : ಮೇಕೆದಾಟು ಯೋಜನೆಯ ತ್ವರಿತ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವಲ್ಲಿ ಪ್ರಧಾನ ಮಂತ್ರಿ ಮತ್ತು ಜಲಸಂಪನ್ಮೂಲ ಸಚಿವರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.

ಎಕ್ಸ್ ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸರಣಿ ಪೋಸ್ಟ್ ಹಾಕಿರುವ ಸಿಎಂ ಸಿದ್ದರಾಮಯ್ಯ ಅವರು, "ಮೇಕೆದಾಟು ಯೋಜನೆಯ ಬಗ್ಗೆ ಕೇಂದ್ರ ಬಿಜೆಪಿ ಸರ್ಕಾರದ ನಿರ್ಲಕ್ಷದ ಬಗೆಗಿನ ನಮ್ಮ ಪ್ರಶ್ನೆಗೆ ಉತ್ತರಿಸಿರುವ ಗಜೇಂದ್ರ ಸಿಂಗ್ ಶೇಖಾವತ್ ಅವರು ಯೋಜನೆಯ ಪ್ರಸ್ತಾವವನ್ನು ಸಭೆಯ ಅಜೆಂಡಾದಲ್ಲಿ ಸೇರಿಸಲಾಗಿತ್ತು ಎಂದು ಉತ್ತರಿಸಿದ್ದಾರೆ. ಸಭೆಯ ಅಜೆಂಡಾದಲ್ಲಿ ಸೇರಿಸುವುದಷ್ಟೇ ಪ್ರಧಾನ ಮಂತ್ರಿ ಮತ್ತು ಜಲಸಂಪನ್ಮೂಲ ಸಚಿವರ ಕೆಲಸವೇ? ಯೋಜನೆಯ ತ್ವರಿತ ಅನುಷ್ಠಾನಕ್ಕೆ ಕ್ರಮಕೈಗೊಳ್ಳುವುದು ಕೂಡಾ ಪ್ರಧಾನಿ ಮತ್ತು ಸಚಿವರ ಕರ್ತವ್ಯ ಅಲ್ಲವೇ? ಈ ಕೆಲಸದಲ್ಲಿ ಇಬ್ಬರೂ ವಿಫಲವಾಗಿದ್ದಾರೆ ಎಂದು ಕನ್ನಡಿಗರಿಗೆ ಅನಿಸಿದರೆ ತಪ್ಪಾದೀತೇ?
ಕಾವೇರಿ ಜಲಾನಯನ ಪ್ರದೇಶದಲ್ಲಿನ ಸಂಕಷ್ಟ ಪರಿಸ್ಥಿತಿಯ ನಿವಾರಣೆಗೆ ಮೇಕೆದಾಟು ಯೋಜನೆಯು ದೀರ್ಘಕಾಲೀನ ಶಾಶ್ವತ ಪರಿಹಾರ ಯೋಜನೆಯಾಗಿರುತ್ತದೆ. ಈ ಯೋಜನೆಯನ್ನು CWMA/CWC ಪರಿಗಣಿಸಿ ಅಗತ್ಯ ಅನುಮತಿ ಹಾಗೂ ಸಮ್ಮತಿಗಳನ್ನು ನೀಡುವ ಮೂಲಕ ಬೆಂಗಳೂರು ಮತ್ತು ಸುತ್ತಮುತ್ತಲಿನ ಊರುಗಳ ಕುಡಿಯುವ ನೀರಿನ ಸಮಸ್ಯೆಯನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಪರಿಹರಿಸುತ್ತದೆ ಎಂದು ನಾನು ನಂಬಿದ್ದೇನೆ.", ಎಂದು ಹೇಳಿದ್ದಾರೆ.

ಇದಕ್ಕೂ ಮೊದಲು ಕೇಂದ್ರ ಜಲ ಸಂಪನ್ಮೂಲ ಸಚಿವ ಶೇಕಾವತ್ ಅವರು ಸಿಎಂ ಸಿದ್ದರಾಮಯ್ಯ ಅವರ ಹಿಂದಿನ ಪೋಸ್ಟ್ ಒಂದಕ್ಕೆ ಉತ್ತರಿಸಿ ರಿಪೋಸ್ಟ್ ಮಾಡಿದ್ದು, "ಕರ್ನಾಟಕದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ನವರೇ, ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ಹರಡುವುದು ಕಾಂಗ್ರೆಸಿಗರಿಗೆ ಅಂಟಿದ ಚಟ ಎಂದು ನಮಗೆಲ್ಲರಿಗೂ ತಿಳಿದಿದೆ. ಆದರೆ ಒಬ್ಬ ಮುಖ್ಯಮಂತ್ರಿಯೇ ಖುದ್ದಾಗಿ ತಪ್ಪು ಮಾಹಿತಿಗಳನ್ನು ಬಿತ್ತಿ ಜನಮಾನಸವನ್ನು ಹಾಳುಗೆಡವಲು ಮುಂದಾಗುತ್ತಾರೆಂದು ನಾವು ಭಾವಿಸಿರಲಿಲ್ಲ.

ಮೇಕೆದಾಟು ಯೋಜನೆಯ ಸ್ಥಿತಿ-ಗತಿ ಹಾಗೂ ವಾಸ್ತವಾಂಶ ಏನೆಂಬುದು ನಿಮಗೆ ಚೆನ್ನಾಗಿ ತಿಳಿದಿದೆ. ನಿಮಗೆ ಬ್ರೀಫೀಂಗ್ ತಂಡ ನೀಡಿದ ಅರ್ಧಂಬರ್ದ ಮಾಹಿತಿ ಆಧರಿಸಿ ನೀವು ತಪ್ಪು ಮಾಹಿತಿಗಳ ಸರಣಿಯನ್ನೇ ಹರಿಬಿಟ್ಟಂತೆ ತೋರುತ್ತದೆ. ಹೀಗಾಗಿ ವಾಸ್ತವ ಏನೆಂಬುದನ್ನು ನಾವೇ ಹೇಳಬೇಕಾಗಿದೆ.

- ಮೊದಲನೆಯದಾಗಿ CWMA ಯ ಹಲವು ಸಭೆಗಳಲ್ಲಿ ಮೇಕೆದಾಟು ಯೋಜನೆಯ ಡಿಪಿಆರ್ ಕುರಿತು ಚರ್ಚೆಯನ್ನು ಅಜೆಂಡಾ ವಿಷಯವಾಗಿ ಸೇರಿಸಲಾಗಿತ್ತು. ಆದರೆ ಈ ಕಾರ್ಯಸೂಚಿಯ ಬಗ್ಗೆ ನೆರೆಯ ರಾಜ್ಯಗಳ ನಡುವೆ ಒಮ್ಮತ ಮೂಡದೇ ಇರುವುದರಿಂದ ಈ ಬಗ್ಗೆ ಚರ್ಚೆ ನಡೆಸಲು ಸಾಧ್ಯವಾಗಿಲ್ಲ. ಇದು ಕೇಂದ್ರದ ತಪ್ಪಲ್ಲ.

- ಕಳಸಾ ಮತ್ತು ಬಂಡೂರ ನಾಲೆ ಯೋಜನೆ ಡಿಪಿಆರ್‌ಗಳನ್ನು ಈಗಾಗಲೇ ಕೇಂದ್ರ ಜಲ ಆಯೋಗ (ಸಿಡಬ್ಲ್ಯೂಸಿ) ಕೆಲವು ಷರತ್ತುಗಳೊಂದಿಗೆ ಅನುಮೋದಿಸಿದೆ ಮತ್ತು ಅದನ್ನು ಕರ್ನಾಟಕ ಸರ್ಕಾರಕ್ಕೆ ಈಗಾಗಲೇ ತಿಳಿಸಲಾಗಿದೆ. ಈ ಮಾಹಿತಿಯನ್ನು ನೀವು ಉದ್ದೇಶಪೂರ್ವಕವಾಗಿ ಮುಚ್ಚಿಟ್ಟಿದ್ದೀರಲ್ಲವೇ ?

- 2017-17ರಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (PMKSY)- ತ್ವರಿತ ನೀರಾವರಿ ಕಾರ್ಯಕ್ರಮದ ಅಡಿಯಲ್ಲಿ ಆದ್ಯತೆ ನೀಡಲಾದ ಕರ್ನಾಟಕದ 5 ಯೋಜನೆಗಳಲ್ಲಿ, ಮೂರು ಪೂರ್ಣಗೊಂಡಿದೆ. ಎರಡು ಕಾಮಗಾರಿ ಚಾಲನೆಯಲ್ಲಿದೆ. ಈ ಯೋಜನೆಗಾಗಿ ಕೇಂದ್ರದ ಪಾಲಿನ 1238.30 ಕೋಟಿ ರೂ.ಗಳ ಪೈಕಿ 1190.05 ಕೋಟಿ ರೂ. ಈಗಾಗಲೇ ಬಿಡುಗಡೆಯಾಗಿದೆ. ಇದು ರಾಜ್ಯದ ಹಣಕಾಸು ಸಚಿವಾಲಯವನ್ನೂ ನಿಭಾಯಿಸುತ್ತಿರುವ ನಿಮ್ಮ ಗಮನಕ್ಕೆ ಬಾರದಿರುವುದು ಚೋದ್ಯವಲ್ಲವೇ ?

- ಅಟಲ್ ಭೂ ಜಲ ಯೋಜನೆ ಅಡಿಯಲ್ಲಿ, ಕರ್ನಾಟಕಕ್ಕೆ ಕೇಂದ್ರದಿಂದ ಈಗಾಗಲೇ 629.54 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಆದರೆ 28.10.2023ರ ವರೆಗೆ ಕೇವಲ 274.05 ಕೋಟಿ ರೂ. ಮಾತ್ರ ಬಳಕೆ ಮಾಡಿಕೊಂಡಿದ್ದೀರಿ.

ಸತ್ಯದ ಘೋರಿ ಕಟ್ಟಿ ಸುಳ್ಳಿನ ವಿಜೃಂಭಣೆ ಮಾಡುವಾಗ ಕನಿಷ್ಠ ಆತ್ಮಸಾಕ್ಷಿಯನ್ನಾದರೂ ಪ್ರಶ್ನಿಸಿಕೊಳ್ಳಿ. ಇಲ್ಲವಾದರೆ ಸುಳ್ಳಿನ ಉಪಾಸನೆಯೇ ನಿಮ್ಮ ನಿತ್ಯಕರ್ಮವೆಂದು‌‌ ಕರ್ನಾಟಕದ ಜನ ನಿಮ್ಮ ಬಗ್ಗೆ ಕನಿಕರ ಹಾಗೂ ತಿರಸ್ಕಾರವನ್ನು ತೋರಬಹುದು.", ಎಂದು ಕನ್ನಡದಲ್ಲಿ ಬರೆದು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದರು.

English summary :PM, Water Resources Minister failed to implement the Mekedatu project quickly - CM Siddaramaiah

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...