Fri,May03,2024
ಕನ್ನಡ / English

ಕರ್ನಾಟಕದ ಮೂವರು ನಾಯಕರಿಗೆ ನಾಳೆ ದೆಹಲಿಗೆ ಬರುವಂತೆ ಬಿಜೆಪಿ ಹೈಕಮಾಂಡ್ ಬುಲಾವ್ | JANATA NEWS

01 Nov 2023
1385

ಬೆಂಗಳೂರು : ನಾಳೆ ದೆಹಲಿಗೆ ಬರುವಂತೆ ಮೂವರು ಬಿಜೆಪಿ ನಾಯಕರಿಗೆ ಹೈಕಮಾಂಡ್ ಬುಲಾವ್ ನೀಡಿದೆ.

ಮಾಜಿ ಸಚಿವ ಕೆಎಸ್ ಈಶ್ವರಪ್ಪ, ಎಂಎಲ್‌ಸಿ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಂಸದ ಪಿಸಿ ಮೋಹನ್‌ಗೆ ಬಿಜೆಪಿ ಹೈಕಮಾಂಡ್‌ನಿಂದ ಬುಲಾವ್ ಬಂದಿದೆ. ಇದರಂತೆ ಈ ಮೂವರು ನಾಯಕರು ಗುರುವಾರವೇ ದೆಹಲಿಗೆ ತೆರಳಬೇಕಿದೆ ಎನ್ನಲಾಗಿದೆ.

ನಾಳೆ ದೆಹಲಿಗೆ ಬಂದು ಮಧ್ಯಾಹ್ನ 3.30ಕ್ಕೆ ತಮ್ಮನ್ನು ಕಾಣುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಸೂಚಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಈ ಮೂವರು ನಾಯಕರು ನಾಳೆ ದೆಹಲಿಗೆ ಬಿಜೆಪಿ ಹೈಕಮಾಂಡ್ ಭೇಟಿ ಮಾಡೋದಕ್ಕೆ ತೆರಳಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ಕಳೆದ ವಾರ ಮಾಜಿ ಸಿಎಂ ಡಿವಿ ಸದಾನಂದ ಗೌಡರನ್ನು ದೆಹಲಿಗೆ ಕರೆಸಿಕೊಂಡಿದ್ದ ಬಿಜೆಪಿ ಹೈಕಮಾಂಡ್, ಕೊನೆಯ ಕ್ಷಣದಲ್ಲಿ ಭೇಟಿ ಮಾಡದೆ ವಾಪಸ್ ಕಳುಹಿಸಿತ್ತು.

ಈ ಮಧ್ಯೆ, ಹೈಕಮಾಂಡ್​​ನಿಂದ ಕರೆ ಬಂದಿರುವ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಕೆಎಸ್ ಈಶ್ವರಪ್ಪ, ನಾಳೆ ದೆಹಲಿಗೆ ಹೋಗುತ್ತಿದ್ದೇನೆ. ನನ್ನ ಜೊತೆಗೆ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಪಿ.ಸಿ. ಮೋಹನ್ ಅವರಿಗೂ ಬರಲು ಹೇಳಿದ್ದಾರೆ. ಯಾಕೆ ಕರೆದಿದ್ದಾರೆ ಗೊತ್ತಿಲ್ಲ. ಅಲ್ಲಿಗೆ ಹೋದ ಮೇಲೆ ಗೊತ್ತಾಗುತ್ತದೆ ಎಂದು ಹೇಳಿದ್ದಾರೆ.

ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕ ಆಯ್ಕೆ ಮಾಡದ ವಿಚಾರವಾಗಿ ಹೈಕಮಾಂಡ್​​ಗೆ ಸಲಹೆ ಕೊಡುವಷ್ಟು ನಾನು ದೊಡ್ಡವನಲ್ಲ. ಅಲ್ಲಿ ನಮಗಿಂತ ತಿಳಿದವರು, ಪಕ್ಷಕ್ಕಾಗಿ ದುಡಿದವರು ಇದ್ದಾರೆ. ಅವರು ತೀರ್ಮಾನ ಮಾಡುತ್ತಾರೆ. ಯಾಕೆ ತಡ ಮಾಡಿದ್ದಾರೆ ಎಂಬುದಕ್ಕೆ ಒಂದು ಕಾರಣ ಇರಬಹುದು. ಆ ಕಾರಣ ಏನು ಎಂದು ತಿಳಿಯುವ ಅಗತ್ಯ ನನಗಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ.

ಈಗ ಮೂವರು ಬಿಜೆಪಿ ನಾಯಕರನ್ನು ನಾಳೆ ದೆಹಲಿಗೆ ಬಂದು ತಮ್ಮನ್ನು ಭೇಟಿಯಾಗುವಂತೆ ಹೈಕಮಾಂಡ್ ಸೂಚಿಸಿರೋದು ತೀವ್ರ ಕುತೂಹಲ ಮೂಡಿಸಿದೆ.

RELATED TOPICS:
English summary :The BJP high command has asked the three Karnataka leaders to come to Delhi tomorrow

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...