Sat,Apr27,2024
ಕನ್ನಡ / English

ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕ | JANATA NEWS

10 Nov 2023
1041

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.

ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರ ಪುತ್ರ ಹಾಗೂ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಅವರನ್ನು ನೂತನ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ. ಈ ನೇಮಕ ತಕ್ಷಣಕ್ಕೆ ಜಾರಿಗೆ ಬರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ದಕ್ಷಿಣ ಕನ್ನಡ ಸಂಸದರಾಗಿರುವ ನಳಿನ್ ಕುಮಾರ್ ಕಟೀಲ್​ ಇದುವರೆಗೆ ರಾಜ್ಯಾಧ್ಯಕ್ಷರಾಗಿದ್ದರು. ಅವರ ಅಧಿಕಾರಾವಧಿ ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನವೇ ಪೂರ್ಣಗೊಂಡಿತ್ತು.

ಅಧಿಕೃತ ವಿಪಕ್ಷ ನಾಯಕರನ್ನು ಆಯ್ಕೆ ಮಾಡದ ವಿಷಯ ಕೂಡ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ರಾಜ್ಯಾಧ್ಯಕ್ಷ ಹಾಗೂ ವಿರೋಧಪಕ್ಷದ ನಾಯಕರ ನೇಮಕ ವಿಚಾರದಲ್ಲಿ ವಿಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಯಾರನ್ನು ನೇಮಕ ಮಾಡಲಾಗುತ್ತದೆ ಎಂಬ ಪ್ರಶ್ನೆಗಳು ಎದ್ದಿದ್ದವು.

ಲೋಕಸಭಾ ಚುನಾವಣೆ ಮತ್ತು ಪಕ್ಷದ ಸಂಘಟನೆ ದೃಷ್ಟಿಯಿಂದ ಬಿವೈ ವಿಜಯೇಂದ್ರ ಅವರಿಗೆ ಅಧ್ಯಕ್ಷ ಸ್ಥಾನದಂತಹ ಮಹತ್ವದ ಜವಾಬ್ದಾರಿ ನೀಡಿದ್ದು, ವಿಜಯೇಂದ್ರ ಯುವ ನಾಯಕರಾಗಿರುವ ಕಾರಣ ಕಾರ್ಯಕರ್ತರ ಪಡೆ ಇನ್ನಷ್ಟು ಬಲವಾಗುವ ಜತೆಗೆ ಪಕ್ಷ ಸಂಘಟನಾ ಸಾಮರ್ಥ್ಯವು ಹೆಚ್ಚಾಗುವ ನಿರೀಕ್ಷೆಯನ್ನು ಬಿಜೆಪಿ ಇಟ್ಟುಕೊಂಡಿದೆ ಎನ್ನಲಾಗುತ್ತಿದೆ.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆಯಾದ ಬೆನ್ನಲ್ಲೇ ಶಿವಮೊಗ್ಗದ ಸಂಸದರಾದ ಸಹೋದರ ಬಿ.ವೈ.ರಾಘವೇಂದ್ರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿದ್ದಾರೆ. ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾಗಿ ನೇಮಕವಾಗಿರುವ ಬಿ.ವೈ ವಿಜಯೇಂದ್ರ ಅವರಿಗೆ ಹಾರ್ದಿಕ ಶುಭಾಶಯಗಳು. ಹಿರಿಯರ ಆಶೀರ್ವಾದ ಹಾಗೂ ಕಿರಿಯರ ಬೆಂಬಲದೊಂದಿಗೆ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸಿ ಮುನ್ನಡೆಸುತ್ತಾರೆ ಎಂಬ ಆಶಯವನ್ನು ಅವರು ವ್ಯಕ್ತಪಡಿಸಿದ್ದಾರೆ

RELATED TOPICS:
English summary :BJP new state president B.Y. Vijayendra Appointed

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ನ್ಯೂಸ್ MORE NEWS...