Thu,Sep11,2025
ಕನ್ನಡ / English

ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಕುರಿತು ಸಭೆ ನಡೆಸಿದ ಸಿಎಂ | JANATA NEWS

22 Nov 2023
2293

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಾಲ್ಕು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಕುರಿತಂತೆ ಸಂಬಂಧಪಟ್ಟ ಇಲಾಖೆಗಳ ಸಭೆ ನಡೆಯಿತು.

ಸಭೆಯಲ್ಲಿ ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ ಅನ್ನಭಾಗ್ಯ ಗೃಹ ಜ್ಯೋತಿ ಹಾಗೂ ಗೃಹಲಕ್ಷ್ಮಿ ಯೋಜನೆ ಬಗ್ಗೆ ಚರ್ಚಿಸಲಾಯಿತು.

ಶಕ್ತಿ ಯೋಜನೆ:
ಶಕ್ತಿ ಯೋಜನೆ ಜಾರಿಯಾದಾಗಿನಿಂದ ನವೆಂಬರ್‌ 21ರ ವರೆಗೆ ಒಟ್ಟಾರೆ 99.75 ಕೋಟಿ ಮಹಿಳಾ ಪ್ರಯಾಣಿಕರು ಉಚಿತ ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಂಡಿರುತ್ತಾರೆ. ಇನ್ನೆರಡು ದಿನಗಳಲ್ಲಿ ನೂರು ಕೋಟಿ ದಾಟಲಿದೆ.
ತಿಂಗಳ ಸರಾಸರಿ ಪ್ರಯಾಣಿಕರ ಸಂಖ್ಯೆ ಏಪ್ರಿಲ್‌ 2023 ರಲ್ಲಿ 84.17 ಲಕ್ಷ ಇದ್ದು, ಶಕ್ತಿ ಯೋಜನೆ ಜಾರಿಯ ನಂತರ 1.08 ಕೋಟಿಯಿಂದ 1.15 ಕೋಟಿ ವರೆಗೆ ಹೆಚ್ಚಳ ವಾಗಿದೆ.

ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳಿಗೆ ಒಟ್ಟು 828 ಸಾಮಾನ್ಯ ಹಾಗೂ 145 ವಿದ್ಯುತ್‌ ಚಾಲಿತ ಬಸ್‌ಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ.
ಬಸ್‌ಗಳ ಖರೀದಿ ಪ್ರಕ್ರಿಯೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಕ್ರಮ ವಹಿಸಬೇಕು.

ಅನ್ನಭಾಗ್ಯ:
ಅನ್ನಭಾಗ್ಯ ಯೋಜನೆಯಡಿ ಅಕ್ಟೋಬರ್‌ ತಿಂಗಳಲ್ಲಿ 1,10,96,413 ಕಾರ್ಡುದಾರರಿಗೆ ಡಿಬಿಟಿ ಮಾಡಲಾಗಿದೆ. ಈ ವರೆಗೆ ಒಟ್ಟು 2,444.11 ಕೋಟಿ ರೂ. ಮೊತ್ತವನ್ನು ಡಿಬಿಟಿ ಮೂಲಕ ವರ್ಗಾಯಿಸಲಾಗಿದೆ.
12.95 ಲಕ್ಷ ಚೀಟಿದಾರರ ಬ್ಯಾಂಕ್‌ ಖಾತೆಗೆ ಆಧಾರ್‌ ಲಿಂಕ್‌ ಮಾಡುವ ಮೂಲಕ ಯೋಜನೆಗೆ ಸೇರ್ಪಡೆಗೊಳಿಸಲಾಗಿದೆ. 2.60 ಲಕ್ಷ ಹೊಸ ಖಾತೆಗಳನ್ನು ಅಂಚೆ ಕಚೇರಿಗಳಲ್ಲಿ ತೆರೆಯಲಾಗಿದೆ.

7.67 ಲಕ್ಷ ಅನರ್ಹ ಪಡಿತರ ಚೀಟಿಗಳ ವಿಷಯದಲ್ಲಿ ಸಮಸ್ಯೆಗಳನ್ನು ಗುರುತಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಬಹುತೇಕ ಪ್ರಕರಣಗಳಲ್ಲಿ ಯಜಮಾನರು ಊರಿನಲ್ಲಿ ಇಲ್ಲದ ಕಾರಣ ತಾಂತ್ರಿಕ ಸಮಸ್ಯೆ ಆಗಿರುವುದರಿಂದ, ಎರಡನೇ ಹಿರಿಯ ವ್ಯಕ್ತಿಯ ಖಾತೆಗೆ ಹಣ ವರ್ಗಾಯಿಸುವ ಕುರಿತಂತೆ ಸಚಿವ ಸಂಪುಟದ ಮುಂದೆ ಮಂಡಿಸಲು ಸೂಚಿಸಲಾಗಿದೆ.
ಡಿಸೆಂಬರ್‌ 31 ರೊಳಗೆ ಎಲ್ಲ ಅರ್ಹರಿಗೆ ಸೌಲಭ್ಯ ದೊರಕುವಂತೆ ಕ್ರಮ ಕೈಗೊಳ್ಳಬೇಕು.

ಗೃಹ ಜ್ಯೋತಿ:
ಗೃಹಜ್ಯೋತಿ ಯೋಜನೆಯಡಿ ಈ ವರೆಗೆ 1.62 ಕೋಟಿ ಜನ ನೋಂದಾಯಿಸಿಕೊಂಡಿದ್ದು, 1.50 ಕೋಟಿ ಕುಟುಂಬಗಳಿಗೆ ಈ ಯೋಜನೆಯ ಸೌಲಭ್ಯ ದೊರೆಯುತ್ತಿದೆ.
ಆಗಸ್ಟ್‌ ನಿಂದ ಈ ವರೆಗೆ 2,900 ಕೋಟಿ ರೂ. ಭರಿಸಲಾಗಿದೆ. ಕುಟೀರ ಜ್ಯೋತಿ, ಭಾಗ್ಯ ಜ್ಯೋತಿ, ಅಮೃತ ಜ್ಯೋತಿ ಯೋಜನೆಯ ಫಲಾನುಭವಿಗಳನ್ನು ಇಲಾಖೆಯ ದತ್ತಾಂಶದಲ್ಲಿಯೇ ಗೃಹಜ್ಯೋತಿ ಯೋಜನೆಯಡಿ ಸೇರ್ಪಡೆಗೊಳಿಸಲಾಗಿದೆ. ಈ ಫಲಾನುಭವಿಗಳು ಯಾರೂ ಗೃಹ ಜ್ಯೋತಿಯಿಂದ ಬಿಟ್ಟು ಹೋಗದಂತೆ ಕ್ರಮ ವಹಿಸಬೇಕು.

ಗೃಹಲಕ್ಷ್ಮಿ ಯೋಜನೆ:
ನವೆಂಬರ್‌ ತನಕ 1.17 ಕೋಟಿ ಫಲಾನುಭವಿಗಳು ನೋಂದಣಿಯಾಗಿದ್ದು, 1.10 ಕೋಟಿ ಫಲಾನುಭವಿಗಳಿಗೆ ನೆರವು ವರ್ಗಾವಣೆ ಮಾಡಲಾಗಿದೆ. 2 ಲಕ್ಷ ಫಲಾನುಭವಿಗಳಿಗೆ ಸಂಬಂಧಿಸಿದ ತೊಡಕು ನಿವಾರಿಸಲಾಗುತ್ತಿದೆ.
ಖಾತೆಯ ಮಾಹಿತಿಯಲ್ಲಿ ಗೊಂದಲ, ಆಧಾರ್‌ ಲಿಂಕ್‌ ಆಗದಿರುವುದು ಮೊದಲಾದ ಕಾರಣಗಳಿಂದ ಹಣ ವರ್ಗಾವಣೆಗೆ ತೊಡಕಾಗಿದೆ. ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಫಲಾನುಭವಿಗಳನ್ನು ಬ್ಯಾಂಕಿಗೇ ಕರೆದೊಯ್ದು ಸಮಸ್ಯೆ ಬಗೆಹರಿಸಲಾಗುತ್ತಿದೆ. ಕೆಲವೇ ದಿನಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಿ, ಎಲ್ಲ ಅರ್ಹ ಫಲಾನುಭವಿಗಳಿಗೆ ನೆರವು ನೀಡಲು ಕ್ರಮ ಕೈಗೊಳ್ಳಬೇಕು.

ಗೃಹಲಕ್ಷ್ಮಿ ಫಲಾನುಭವಿಗಳು ಬಿಟ್ಟು ಹೋಗಿದ್ದಲ್ಲಿ ಅಥವಾ ಬ್ಯಾಂಕ್‌ ಖಾತೆ ಆಧಾರ್‌ ಲಿಂಕ್‌ ಮತ್ತಿತರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗೃಹ ಲಕ್ಷ್ಮಿ ಅದಾಲತ್‌ ಆಯೋಜಿಸಿ, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು.

English summary :CM held meeting on the progress of implementation of guarantee schemes

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್ ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...