Fri,May03,2024
ಕನ್ನಡ / English

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ನಾಯಕರ ಮನೆ ಮೇಲೆ ದಾಳಿ ನಡೆಸುತ್ತಿದ್ದ ವೇಳೆ ಇಡಿ, ಸಿಆರ್‌ಪಿಎಫ್ ತಂಡದ ಮೇಲೆ ಜನರಿಂದ ಹಲ್ಲೆ | JANATA NEWS

06 Jan 2024
1143

ಕೋಲ್ಕತ್ತಾ : ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಆಡಳಿತಾರೂಢ ಟಿಎಂಸಿಯ ಬ್ಲಾಕ್ ಮಟ್ಟದ ಕಾರ್ಯಕರ್ತರ ಮನೆ ಮೇಲೆ ಶುಕ್ರವಾರ ದಾಳಿ ನಡೆಸಲು ಯತ್ನಿಸಿದ ಜಾರಿ ನಿರ್ದೇಶನಾಲಯದ(ಇಡಿ) ತಂಡದ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣವನ್ನು ಭಾರತೀಯ ಜನತಾ ಪಕ್ಷ(ಬಿಜೆಪಿ) ತೀವ್ರವಾಗಿ ಖಂಡಿಸಿದ್ದು, ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಸಿಡಿದೆದ್ದಿದೆ.

ಪಶ್ಚಿಮ ಬಂಗಾಳದಲ್ಲಿ ಹಿರಿಯ ಇಡಿ ಅಧಿಕಾರಿಯೊಬ್ಬರು ತಮ್ಮ ಮೇಲೆ ನಡೆದ ಮಾರಣಾಂತಿಕ ದಾಳಿಯಿಂದ ಬದುಕುಳಿದರು. ಬಹುಕೋಟಿ ಪಡಿತರ ಹಗರಣದ ಆರೋಪಿ ರಾಜ್ಯ ಆಡಳಿತ ಪಕ್ಷದ ಟಿಎಂಸಿ ನಾಯಕ ಶಹಜಹಾನ್ ಶೇಖ್ ಅವರ ಮನೆಗಳ ಮೇಲೆ ದಾಳಿ ನಡೆಸಲು ಅವರು ಬಂಗಾಳದ ಸಂದೇಶಖಾಲಿಗೆ ತೆರಳಿದ್ದರು.

ಪದೇ ಪದೇ ಕರೆ ಮಾಡಿದ ನಂತರ ಎನ್‌ಐಎ ತಂಡವು ಶೇಖ್ ಅವರ ಮನೆಯ ಬಾಗಿಲು ಒಡೆಯಲು ಪ್ರಯತ್ನಿಸಿದಾಗ, ನೂರಾರು ಜನರ ಗುಂಪು ಸ್ಥಳದಲ್ಲಿ ಜಮಾಯಿಸಿ ಘೋಷಣೆಗಳನ್ನು ಕೂಗಿದರು ಹಾಗೂ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಈ ಘಟನೆಯನ್ನು ಖಂಡಿಸಿದ ಪ.ಬಂ. ಬಿಜೆಪಿ ಮುಖಂಡ ಮತ್ತು ವಿರೋಧ ಪಕ್ಷದ ನಾಯಕ ಸುವೆಂದು ಆಶಿಕಾರಿ ಅವರು, "ಭಯಾನಕ. ಪಶ್ಚಿಮ ಬಂಗಾಳದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ. ಇಡಿ ಅಧಿಕಾರಿಗಳು ಮತ್ತು ಸಿಆರ್‌ಪಿಎಫ್ ಜವಾನರು ಸಂದೇಶಖಾಲಿ; ಉತ್ತರ 24 ಪರಗಣ ಜಿಲ್ಲೆಯಲ್ಲಿ ಟಿಎಂಸಿ ನಾಯಕ ಶೇಖ್ ಷಹಜಹಾನ್ ಅವರ ಮನೆ ಮೇಲೆ ದಾಳಿ ನಡೆಸುತ್ತಿರುವಾಗ ಕ್ರೂರವಾಗಿ ಹಲ್ಲೆಗೆ ಒಳಗಾಗಿದ್ದಾರೆ. ರಾಷ್ಟ್ರವಿರೋಧಿ ದಾಳಿಕೋರರಲ್ಲಿ ರೋಹಿಂಗ್ಯಾಗಳು ಇದ್ದಾರೆ ಎಂದು ನನಗೆ ಅನುಮಾನವಿದೆ. ನಾನು ಗೌರವಾನ್ವಿತ ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ಜಿ, ಪಶ್ಚಿಮ ಬಂಗಾಳದ ಗವರ್ನರ್, ನಿರ್ದೇಶಕ ಇಡಿ, ನಿರ್ದೇಶಕ ಸಿಆರ್‌ಪಿಎಫ್ ಇಂಡಿಯಾ ಈ ಗಂಭೀರ ಪರಿಸ್ಥಿತಿಯನ್ನು ಅರಿತು ಸೂಕ್ತ ಕ್ರಮಕೈಗೊಳ್ಳಬೇಕು ಈ ಅರಾಜಕತೆಯನ್ನು ಹತ್ತಿಕ್ಕಲು ಕ್ರಮ. NIA ಭಾರತ ಕೂಡ ಈ ವಿಷಯವನ್ನು ತನಿಖೆ ಮಾಡಬೇಕೆಂದು ಕೋರುತ್ತೇನೆ.", ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬಹುಕೋಟಿ ಪಡಿತರ ವಿತರಣೆ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ರಾಜ್ಯ ಸಚಿವ ಜ್ಯೋತಿಪ್ರಿಯೋ ಮಲ್ಲಿಕ್ ಅವರ ಆಪ್ತ ಸಹಾಯಕ ಸಜಹಾನ್ ಎಂದು ಪರಿಗಣಿಸಲಾಗಿದೆ.

English summary : ED, CRPF team attacked in West Bengal while raiding TMC leader house

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ನ್ಯೂಸ್ MORE NEWS...